ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಮಾನ್ಯತೆಗೆ ಷರತ್ತು ಸಡಿಲ?

By Kannadaprabha News  |  First Published Nov 14, 2024, 9:11 AM IST

ಷರತ್ತು ಸಡಿಲಿಸಲು 2023ರ ಡಿಸೆಂಬರ್‌ನಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅಲ್ಪಸಂಖ್ಯಾತರ ಇಲಾಖೆಗೆ ಪತ್ರ ಬರೆದಿದ್ದರು. ಇದೀಗ ಕಾಲೇಜು ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಶಿಕ್ಷಣ ಸಂಸ್ಥೆಗಳಿಗೆ ಸೀಮಿತವಾಗಿ ಕನಿಷ್ಟ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರವೇಶಕ್ಕೆ ಇರುವ ಷರತ್ತು ರದ್ದುಪಡಿಸಲು ಹಾಗೂ ಆಡಳಿತ ಮಂಡಳಿಗಳಲ್ಲಿ 3ನೇ ಎರಡರಷ್ಟು ಅಲ್ಪಸಂಖ್ಯಾತರೇ ಇರಬೇಕು ಎಂಬ ನಿಯಮ ಉಳಿಸಿಕೊಳ್ಳಲು ಪ್ರಸ್ತಾವನೆ ಮಂಡನೆಯಾಗುತ್ತಿದೆ. 


ಬೆಂಗಳೂರು(ನ.14):  ವಕ್ಫ್‌ ವಿವಾದ, ಗುತ್ತಿಗೆಗಳಲ್ಲಿ ಮುಸ್ಲಿಂ ಮೀಸಲಾತಿ ಬೇಡಿಕೆ ಬೆನ್ನಲ್ಲೇ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮಾನ್ಯತೆಗೆ ಹೊಂದಿರಬೇಕಾಗಿದ್ದ ಷರತ್ತು ಸಡಿಲಿಕೆ ಮಾಡುವ ವಿಧೇಯಕವನ್ನು ಸಂಪುಟ ಸಭೆಯಲ್ಲಿ ಮಂಡಿ ಸಲು ಸರ್ಕಾರ ಸಜ್ಜಾಗಿದೆ. 

ಮತೀಯ ಅಲಸಂಖ್ಯಾತರ ಶಿಕ್ಷಣ ಸಂಸ್ಥೆಗಳಲ್ಲಿ ಇಂತಿಷ್ಟು ಅಲ್ಪಸಖ್ಯಾತ ವಿದ್ಯಾರ್ಥಿಗಳನ್ನು ಹೊಂದಿರಬೇಕು ಎಂಬ ಷರತ್ತು ರದ್ದುಪಡಿಸಲು ಹಾಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯಲ್ಲಿ 3ನೇ ಎರಡರಷ್ಟು ಭಾಗ ಅಲ್ಪಸಂಖ್ಯಾತರೇ ಇರಬೇಕು ಎಂಬ ನಿಯಮ ಉಳಿಸಿಕೊಳ್ಳುವ ತಿದ್ದುಪಡಿ ಪ್ರಸ್ತಾವನೆ ಗುರುವಾರದ ಸಭೆಯಲ್ಲಿ ಮಂಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ. 

Tap to resize

Latest Videos

undefined

ರಾಹುಲ್ ಗಾಂಧಿಯ 4 ಸಂತತಿ ಬಂದ್ರೂ ಮುಸ್ಲಿಮರಿಗೆ ಮೀಸಲಾತಿ ಸಿಗದು: ಅಮಿತ್ ಶಾ

ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಎಂದು ಘೋಷಿಸಲ್ಪಡುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಡಿಯ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಪ್ರವೇಶಾತಿಯಲ್ಲಿ ಶೇ.25ರಷ್ಟು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿರಬೇಕು. ಆಡಳಿತ ಮಂಡಳಿಯಲ್ಲಿ 3ನೇ 2ರಷ್ಟು ಅಲ್ಪಸಂಖ್ಯಾತರಿರಬೇಕೆಂಂದು 2014ರ ಜೂ.18ರಂದು ನಿಯಮ ರೂಪಿಸಲಾಗಿತ್ತು. ಉನ್ನತ ಶಿಕ್ಷಣ ಇಲಾಖೆಯ ಶಿಕ್ಷಣ ಸಂಸ್ಥೆಗಳಲ್ಲಿ ಶೇ.50ರಷ್ಟು ರಾಜ್ಯದ ವಿದ್ಯಾರ್ಥಿಗಳು, ಆಡಳಿತ ಮಂಡಳಿಯಲ್ಲಿ 3ನೇ ಎರಡರಷ್ಟು ಅಲ್ಪಸಂಖ್ಯಾತರು, ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಶೇ.50ರಷ್ಟು ವಿದ್ಯಾರ್ಥಿಗಳು ಅಲ್ಪಸಂಖ್ಯಾತರು. ಶೇ.75ರಷ್ಟು ಕರ್ನಾಟಕದವರಿರಬೇಕು ಎಂಬ ಷರತ್ತು ಇದೆ. 

ಷರತ್ತು ಸಡಿಲಿಸಲು 2023ರ ಡಿಸೆಂಬರ್‌ನಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅಲ್ಪಸಂಖ್ಯಾತರ ಇಲಾಖೆಗೆ ಪತ್ರ ಬರೆದಿದ್ದರು. ಇದೀಗ ಕಾಲೇಜು ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಶಿಕ್ಷಣ ಸಂಸ್ಥೆಗಳಿಗೆ ಸೀಮಿತವಾಗಿ ಕನಿಷ್ಟ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರವೇಶಕ್ಕೆ ಇರುವ ಷರತ್ತು ರದ್ದುಪಡಿಸಲು ಹಾಗೂ ಆಡಳಿತ ಮಂಡಳಿಗಳಲ್ಲಿ 3ನೇ ಎರಡರಷ್ಟು ಅಲ್ಪಸಂಖ್ಯಾತರೇ ಇರಬೇಕು ಎಂಬ ನಿಯಮ ಉಳಿಸಿಕೊಳ್ಳಲು ಪ್ರಸ್ತಾವನೆ ಮಂಡನೆಯಾಗುತ್ತಿದೆ. 

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗೆ ಇರುವ ಸೌಲಭ್ಯ: 

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮಾನ್ಯತೆ ಪಡೆಯುವ ಆಡಳಿತ ಮಂಡಳಿಯ ಶಾಲೆ ಗಳಿಗೆ ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಸಿಗುವ ಸೌಲಭ್ಯ ಸರ್ಕಾರದಿಂದ ಸಿಗುತ್ತದೆ. ಜತೆಗೆ ಅಲ್ಪಸಂಖ್ಯಾತರ ಇಲಾಖೆಯ ಅನು ದಾನಗಳು ಲಭ್ಯವಾಗುತ್ತವೆ. ಷರತ್ತು ಸಡಿಲಿಸಿದರೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಇಲ್ಲದಿದ್ದರೂ ಆಡಳಿತ ಮಂಡಳಿಯಲ್ಲಿ ಅಲ್ಪಸಂಖ್ಯಾತರು ಇರಬಹುದು. \

ಕಾಮಗಾರಿಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವ ಪ್ರಸ್ತಾವನೆ ಇಲ್ಲ ಎಂದ ಸರ್ಕಾರ

ಕುನ್ಹಾ ವರದಿ ಚರ್ಚೆ? 

ಮಾಜಿ ಸಿಎಂ ಬಿಎಸ್‌ವೈ ಹಾಗೂ ಅಂದಿನ ಆರೋಗ್ಯ ಸಚಿವ ಬಿ. ಶ್ರೀರಾಮುಲು ವಿರುದ್ಧ ಕ್ರಿಮಿನಲ್ ಪ್ರಾಸಿಕ್ಯೂಷನ್‌ ಗೆ ಶಿಫಾರಸು ನೀಡಿದ ನಿವೃತ್ತ ನ್ಯಾ.ಮೈಕಲ್ ಡಿ ಕುನ್ಹಾ ಅವರ ವಿಚಾರಣಾ ಆಯೋಗದ ಮಧ್ಯಂತರ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯೂ ಇದೆ. ಈಗಾಗಲೇ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿದ್ದು, ಗುರುವಾರದ ಸಂಪುಟ ಸಭೆಯಲ್ಲಿಯ ಪ್ರಸ್ತಾಪ ಆಗುವ ಸಾಧ್ಯತೆಯಿದೆ. ಆದರೆ ಅಧಿಕೃತ ಅಜೆಂಡಾದಲ್ಲಿ ಇನ್ನೂ ಬಂದಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಬಿಜೆಪಿ, ದಳ ಗಣಿ ತನಿಖೆಗೆ ಎಸ್‌ಐಟಿ? 

ಇನ್ನು ಬಿಜೆಪಿ ಹಾಗೂ ಜೆಡಿಎಸ್ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ಕುರಿತಂತೆ 10-ಸಿ ಪ್ರವರ್ಗದ ಗುತ್ತಿಗೆ ಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಲೋಕಾಯುಕ್ತ ಸಂಸ್ಥೆಯ ವಿಶೇಷ ತನಿಖಾ ದಳ ರಚಿಸಲು ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡನೆಯಾಗಲಿದೆ ಎನ್ನಲಾಗಿದೆ.

click me!