
ಶ್ರೀರಂಗಪಟ್ಟಣ (ಆ.26) : ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಶನಿವಾರ ಅಣೆಕಟ್ಟೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು.
ಬೆಂಗಳೂರಿನಿಂದ ಆಗಮಿಸಿದ್ದ ಕನ್ನಡಿಗರ ರಕ್ಷಣಾ ವೇದಿಕೆ, ಕರ್ನಾಟಕ ನವ ನಿರ್ಮಾಣ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸೇರಿದಂತೆ ಇತರೆ ಕನ್ನಡಪರ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳನ್ನು ಬಂಧಿಸಿ ಪೊಲೀಸರು ಠಾಣೆಗೆ ಕರೆದೊಯ್ದರು.
ತಮಿಳುನಾಡಿಗೆ 24000 ಕ್ಯುಸೆಕ್ ಕಾವೇರಿ ನೀರು ಬಿಡೋದು ಅಸಾಧ್ಯ: ಸುಪ್ರೀಂ
ಇದಕ್ಕೂ ಮುನ್ನ ಕನ್ನಂಬಾಡಿ ಅಣೆಕಟ್ಟೆಎದÜುರು ಪ್ರತಿಭಟನೆ ನಡೆಸಿದ 50ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಧಿಕ್ಕಾರ ಕೂಗಿದರು.
ಕೆಆರ್‌ಎಸ್ ಅಣೆಕಟ್ಟೆಯಿಂದ ರಾತ್ರೋರಾತ್ರಿ ತಮಿಳುನಾಡಿಗೆ ನೀರು ಬಿಡುವ ಮೂಲಕ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ, ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಕ್ತ ಚೆಲ್ಲುತ್ತೇವೆ ಕಾವೇರಿ ಉಳಿಸುತ್ತೇವೆ. ನೀರು ನಿಲ್ಲಿಸಿದರೆ ಶಾಂತಿ ಇಲ್ಲದಿದ್ದರೆ ಕ್ರಾಂತಿ ಎಂಬ ಘೋಷಣೆಯೊಂದಿಗೆ ಅಣೆಕಟ್ಟೆಬಳಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ಕನ್ನಡಪರ ಸಂಘಟನೆ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಜನಪ್ರತಿನಿಧಿಗಳ ವಿರುದ್ಧ ಕಿಡಿಕಾರಿದರು.
ನೀರಾವರಿ ಅಧಿಕಾರಿಯೊಂದಿಗೆ ಮಾತಿನ ಚಕಮುಕಿ:
ಪ್ರತಿಭಟನೆ ವೇಳೆ ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹ ಹಾಗೂ ನೀರು ಬಿಡಲಾಗಿರುವ ವಾಸ್ತವ ಸಂಗತಿಯನ್ನು ನೀರಾವರಿ ಅಧಿಕಾರಿಗಳು ನೀಡಬೇಕು ಎಂದು ಪಟ್ಟು ಹಿಡಿದು ಕುಳಿತ ಪ್ರತಿಭಟನಾಕಾರರು ಸ್ಥಳಕ್ಕೆ ತಡವಾಗಿ ಆಗಮಿಸಿದ ಕಾವೇರಿ ನೀರಾವರಿ ನಿಗಮದ ಎಇಇ ಅವರನ್ನು ತರಾಟೆಗೆ ತೆಗೆದುಕೊಂಡರು.
ನಂತರ ಅವರೊಂದಿಗೆ ಮಾತಿನ ಚಕಮುಕಿ ನಡೆಸಿ ಅಣೆಕಟ್ಟೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಎಎಸ್ಪಿ ತಿಮ್ಮಯ್ಯ ನೇತೃತ್ವದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಬಂಧಿಸಿ ಠಾಣೆಗೆ ಕರೆದೊಯ್ದು ನಂತರ ಬಿಡುಗಡೆ ಮಾಡಿದರು.
ಮೇಕೆದಾಟು ಅಣೆಕಟ್ಟು ನಿರ್ಮಾಣವಾಗಿದ್ದರೆ ಕಾವೇರಿ ನೀರಿನ ಸಮಸ್ಯೆಯೇ ಉದ್ಭವಿಸುತ್ತಿರಲಿಲ್ಲ. ಡಿ.ಕೆ. ಶಿವಕುಮಾರ್
ಪ್ರತಿಭಟನೆಯಲ್ಲಿ ಕನ್ನಡಿಗರ ರಕ್ಷಣಾ ವೇದಿಕೆ, ಕರ್ನಾಟಕ ನವ ನಿರ್ಮಾಣ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸೇರಿದಂತೆ ಇತರೆ ಕನ್ನಡಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ