Breaking: ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್‌, ಪವಿತ್ರಾ ಸೇರಿ 7 ಮಂದಿಗೆ ಜಾಮೀನು!

By Sathish Kumar KH  |  First Published Dec 13, 2024, 2:36 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಅವರ ಜಾಮೀನನ್ನು ಹೈಕೋರ್ಟ್ ವಿಸ್ತರಿಸಿದೆ. ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಲು 6 ವಾರಗಳ ಮಧ್ಯಂತರ ಜಾಮೀನು ಪಡೆದಿದ್ದ ದರ್ಶನ್, ಚಿಕಿತ್ಸೆ ಮುಂದುವರೆಸುತ್ತಿದ್ದಾರೆ.


ಬೆಂಗಳೂರು (ಡಿ.13): ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಜೂಲಯ ಸೇರಿ ಇದೀಗ ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವುದಾಗಿ 6 ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿರುವ ನಟ ದರ್ಶನ್ ತೂಗುದೀಪ ಸೇರಿದಂತೆ ಒಟ್ಟು 7 ಮಂದಿಗೆ ಜಾಮೀನು ಮಂಜೂರು  ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರಿದ್ದ ಏಕಪೀಠದಿಂದ ರೇಣುಕಾಸ್ವಾಮಿ ಕೊಲೆ ಕೇಸಿನ ಆರೋಪಿ ನಟ ದರ್ಶನ್, ಆತನ ಸ್ನೇಹಿತೆ ಪವಿತ್ರಾಗೌಡ ಸೇರಿದಂತೆ ಒಟ್ಟು 7 ಮಂದಿಗೆ ಜಾಮೀನು ಮಂಜೂರು ಮಾಡಲಾಗಿದೆ. ಕಳೆದ ಕಳೆದ 6 ತಿಂಗಳಿಂದ‌ ಜೈಲಲ್ಲಿ ಇದ್ದ ಪವಿತ್ರಾಗೌಡ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಒಟ್ಟಾರೆಯಾಗಿ ಆರೋಪಿಗಳಾದ ಪವಿತ್ರಾಗೌಡ, ದರ್ಶನ್, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್ ಹಾಗೂ ಪ್ರದೂಷ್ ಗೆ ಜಾಮೀನು ಮಂಜೂರಾಗಿದ್ದು, ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆ ಆಗಿ ಹೊರಗೆ ಬರಲಿದ್ದಾರೆ.

Tap to resize

Latest Videos

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ-2 ಆರೋಪಿ ನಟ ದರ್ಶನ್ ತೂಗುದೀಪ ಅವರನ್ನು ಬಂಧಿಸಿದ್ದ ಪೊಲೀಸರು ಜೈಲಿಗಟ್ಟಿದ್ದರು. ಬೆಂಗಳೂರು ಜೈಲಿನಲ್ಲಿ ಕೆಲವು ರೌಡಿ ಶೀಟರ್‌ಗಳು ದರ್ಶನ್‌ಗೆ ರಾಜಾತಿಥ್ಯ ನೀಡಿದ್ದಾರೆಂಬ ವಿಡಿಯೋ ಹಾಗೂ ಫೋಟೋ ಲಭ್ಯವಾದ ಬೆನ್ನಲ್ಲಿಯೇ ಆತನನ್ನು ಬಳ್ಳಾರಿ ಸೆಂಟ್ರಲ್‌ ಜೈಲಿಗೆ ರವಾನಿಸಲಾಗಿತ್ತು. ಆದರೆ, ಬಳ್ಳಾರಿ ಜೈಲಿನಲ್ಲಿ ಮೂಲ ಸೆಲೆಬ್ರಿಟಿ ಕೈದಿಗಳಿಗೆ ಬೇಕಾಗಿರುವ ಮೂಲ ಸೌಕರ್ಯಗಳೂ ಇಲ್ಲದೇ ನೆಲದಲ್ಲಿಯೇ ಕುಳಿತುಕೊಳ್ಳುವುದು, ನೆಲದ ಮೇಲೆಯೇ ಮಲಗುವುದು ಹಾಗೂ ಇಂಡಿಯನ್ ಕಮೋಡ್‌ನಲ್ಲಿ ಶೌಚಗೃಹ ಬಳಕೆ ಮಾಡುತ್ತಿದ್ದಕ್ಕೆ 6 ಅಡಿ ಎತ್ತರದ ಅಜಾನುಬಾಹು ದೇಹಿ ದರ್ಶನ್‌ಗೆ ವಿಪರೀತ ಬೆನ್ನನೋವು ಕೂಡ ಕಾಣಿಸಿಕೊಂಡಿತ್ತು. ಇದು ದಿನ ಕಳೆದಂತೆ ಬೆನ್ನು ಮೂಳೆಯಲ್ಲಿ ತೀವ್ರ ನೋವು ಉಂಟಾಗಿದ್ದರಿಂದ ಶಸ್ತ್ರ ಚಿಕಿತ್ಸೆ ಮಾಡಿಕೊಳ್ಳಬೇಕು ಎಂದು 6 ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದಿದ್ದರು.

ಇದನ್ನೂ ಓದಿ: Breaking: ಪುಷ್ಪ-2 ಸಿನಿಮಾ ವಿವಾದ ಪ್ಯಾನ್ ಇಂಡಿಯಾ ಸ್ಟಾರ್ ಅಲ್ಲು ಅರ್ಜುನ್ ಅರೆಸ್ಟ್

ಬೆಂಗಳೂರಿಗೆ ಬಂದು ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ನಟ ದರ್ಶನ್ ಈವರೆಗೆ ಬೆನ್ನು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಈವರೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ಥೆರಫಿ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಈವರೆಗೂ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿರಲಿಲ್ಲ. ಆದರೆ, ಇದೀಗ ಜಾಮೀನು ಮಂಜೂರು ಮಾಡಲಾಗಿದ್ದು, ನಿಧಾನವಾಗಿ ಚಿಕಿತ್ಸೆ ಪಡೆದುಕೊಳ್ಳಬಹುದು. ಒಟ್ಟಾರೆಯಾಗಿ, ಎಲ್ಲ ಆರೋಪಿಗಳು ಕೂಡ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಆಗಲಿದ್ದು, ಕೆಲವು ಷರತ್ತುಗಳನ್ನು ಕೂಡ ವಿಧಿಸಲಾಗಿದೆ.

click me!