
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಹಾಗೂ ಇತರ ನಾಲ್ವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳ ಕುರಿತು 64ನೇ ಸೆಷನ್ಸ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಾಧೀಶ ಐ.ಪಿ. ನಾಯ್ಕ್ ಆದೇಶ ಹೊರಡಿಸಿದ್ದು, ದರ್ಶನ್ ಮತ್ತು ಇತರ ಆರೋಪಿಗಳನ್ನು ಪರಪ್ಪನ ಅಗ್ರಹಾರದಿಂದ ಬೇರೆ ಜೈಲು ಸ್ಥಳಾಂತರ ಕುರಿತ ಅರ್ಜಿ ವಜಾ ಮಾಡಲಾಗಿದೆ. ಹೀಗಾಗಿ ಸರ್ಕಾರಕ್ಕೆ ಹಿನ್ನಡೆಯಾಗಿದೆ. ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಸರ್ಕಾರ ಅರ್ಜಿ ಸಲ್ಲಿಸಿತ್ತು. ಸೆಲೆಬ್ರಿಟಿ ಆಗಿರುವುದರಿಂದ ಮತ್ತು ಈ ಹಿಂದೆ ಐಷಾರಾಮಿ ಸೌಲಭ್ಯ ಪಡೆದಿರುವುದರಿಂದ ಸ್ಥಳಾಂತರ ಮಾಡಲು ಅವಕಾಶ ನೀಡಬೇಕೆಂದು ಸರ್ಕಾರ ಮನವಿ ಮಾಡಿತ್ತು. ಆದರೆ ದರ್ಶನ್ ಗೆ ಬಳ್ಳಾರಿ ಜೈಲಿನ ಜೀವನ ಬೇಡ ಬೆಂಗಳೂರಿನಲ್ಲೇ ಇರಬೇಕೆಂದು ಆಸೆ ಇತ್ತು. ಕೊನೆಗೂ ಡಿ ಗ್ಯಾಂಗ್ ಗೆ ಸಂತಸದ ಸುದ್ದಿ ಸಿಕ್ಕಿದೆ. ಆದರೆ, ಕನಿಷ್ಠ ಸೌಲಭ್ಯ ಒದಗಿಸಬೇಕೆಂಬ ದರ್ಶನ್‌ನ ಬೇಡಿಕೆಯನ್ನು ಕೋರ್ಟ್ ಮಾನ್ಯ ಮಾಡಿದೆ. ಜೈಲಿನ ನಿಯಮಗಳ ಪ್ರಕಾರ ಕನಿಷ್ಠ ಸೌಲಭ್ಯಗಳು ಏನೇನಿದೆ ಅವೆಲ್ಲವನ್ನು ನೀಡಬೇಕೆಂದು ಕೋರ್ಟ್ ಹೇಳಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ದರ್ಶನ್‌ರನ್ನು ಮೊದಲು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ಆದರೆ, ಅಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡಲಾಗಿದೆ ಎಂಬ ಆರೋಪಗಳು ಬೆಳಕಿಗೆ ಬಂದಿದ್ದವು. ಜೈಲಿನಲ್ಲಿದ್ದಾಗ ದರ್ಶನ್ ಐಷಾರಾಮಿ ಜೀವನ ನಡೆಸುತ್ತಿದ್ದರೆಂಬ ಮಾಹಿತಿ ಹೊರಬಂದ ಪರಿಣಾಮ, ಅವರನ್ನು ಬಳ್ಳಾರಿ ಜೈಲುಗೆ ವರ್ಗಾಯಿಸಲಾಯಿತು.
ಇದೀಗ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ, ಜೈಲು ಅಧಿಕಾರಿಗಳು ದರ್ಶನ್‌ಗೆ ಯಾವುದೇ ವಿಶೇಷ ಸೌಲಭ್ಯ ನೀಡದಂತೆ ಸೂಚನೆ ನೀಡಲಾಗಿದೆ.
ಜೈಲಿನಲ್ಲಿನ ಸಂಕಷ್ಟದ ಜೀವನದಿಂದ ಬಳಲುತ್ತಿರುವ ದರ್ಶನ್, ಕನಿಷ್ಠ ಸೌಲಭ್ಯ ನೀಡಬೇಕೆಂದು ನ್ಯಾಯಾಲಯದಲ್ಲಿ ಮನವಿ ಮಾಡಿಕೊಂಡಿದ್ದರು. ಹಾಸಿಗೆ, ದಿಂಬು ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ತೀವ್ರ ತೊಂದರೆ ಅನುಭವಿಸುತ್ತಿರುವುದಾಗಿ ಅವರು ಕೋರ್ಟ್‌ಗೆ ತಿಳಿಸಿದ್ದರು.
ಕೋರ್ಟ್ ಈಗ ಈ ಬೇಡಿಕೆಯನ್ನು ಪರಿಗಣಿಸಿ, ಅಗತ್ಯ ಸೌಲಭ್ಯ ಒದಗಿಸಲು ನಿರ್ದೇಶನ ನೀಡಿರುವುದು ದರ್ಶನ್‌ಗೆ ಸ್ವಲ್ಪ ಮಟ್ಟಿನ ನೆಮ್ಮದಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ