
ಬೆಂಗಳೂರು (ಮೇ.14): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ನಟ ದರ್ಶನ್ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ಶುಕ್ರವಾರ ನಡೆಯಲಿದೆ. ಸೆಷನ್ಸ್ ಕೋರ್ಟ್‌ನಲ್ಲಿ ಕೇಸ್ ವಿಚಾರಣೆ ವಿಳಂಬವಾಗುತ್ತಿದೆ. 273 ಸಾಕ್ಷ್ಯಗಳ ಪೈಕಿ ಈತನಕ 10 ಮಂದಿಯ ವಿಚಾರಣೆಯನ್ನೂ ಮುಗಿಸಿಲ್ಲ. ತಾವು ಜೈಲು ಸೇರಿ ಈಗಾಗಲೇ 8 ತಿಂಗಳು ಆಗಿದೆ.
ಹೀಗಾಗಿ ಜಾಮೀನು ಮಂಜೂರು ಮಾಡುವಂತೆ ಕೋರಿ ಪೀಠದ ಮುಂದೆ ದರ್ಶನ್ ಮನವಿ ಸಲ್ಲಿಸಿದ್ದಾರೆ. ಇನ್ನು, ಸುಪ್ರೀಂ ಕೋರ್ಟ್‌ಗೆ ಬೆಂಗಳೂರು ಪೊಲೀಸರು ಎರಡು ಅಫಿಡವಿಟ್ ಸಲ್ಲಿಕೆ ಮಾಡಿದ್ದು, ಪ್ರಕರಣದ ವಿಚಾರಣೆ ವಿಳಂಬ ಯಾರಿಂದಾಯ್ತು? ಎಂಬ ಬಗ್ಗೆ ಉಲ್ಲೇಖಿಸಿದ್ದಾರೆ. ಜತೆಗೆ ಜೈಲಿನಲ್ಲಿ ಕನಿಷ್ಠ ಮಟ್ಟದ ಸೌಲಭ್ಯವೂ ನೀಡುತ್ತಿಲ್ಲ ಎಂಬ ದರ್ಶನ್ ಆರೋಪದ ಕುರಿತೂ ಪೊಲೀಸರು ಅಫಿಡವಿಟ್‌ನಲ್ಲಿ ಮಾಹಿತಿ ತಿಳಿಸಿದ್ದಾರೆ.
ಕಳೆದ ವಾರವೇ ದರ್ಶನ್ ಅರ್ಜಿ ಸಲ್ಲಿಸಿದ್ದು, ನ್ಯಾಯಪೀಠ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿತ್ತು. ಈ ಸಂಬಂಧ ಸೆಷನ್ಸ್ ನ್ಯಾಯಾಲಯ, ಕಾರಾಗೃಹ ಇಲಾಖೆಗೆ ನೊಟೀಸ್ ನೀಡಿ, ವರದಿ ಸಲ್ಲಿಸುವಂತೆ ಸೂಚಿಸಿತ್ತು. ಅದರಂತೆ
ಅಲ್ಲದೆ, ಕೊರಂಟೈನ್ ಸೆಲ್ ನಲ್ಲಿ ತನ್ನನ್ನು ಇಟ್ಟಿದ್ದು, ಕನಿಷ್ಟ ಮಟ್ಟದ ಸೌಲಭ್ಯ ನೀಡಿಲ್ಲ ಎಂದು ದರ್ಶನ್ ಆರೋಪಿಸಿದ್ದು, ಈ ಬಗ್ಗೆಯೂ ಜೈಲು ಅಧಿಕಾರಿಗಳು ಅಫಿಡವಿಟ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಪ್ರಕರಣದ ವಿಚಾರಣೆ ಶುಕ್ರವಾರಕ್ಕೆ ನಿಗದಿಯಾಗಿದೆ,
- ಸಾಕ್ಷಿಗಳ ವಿಚಾರಣೆಯಲ್ಲಿ ವಿಳಂಬ ನೆಪವೊಡ್ಡಿ ಜಾಮೀನಿಗೆ ಮನವಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ