
ಚಿತ್ರದುರ್ಗ (ಅ.16): ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ನಡೆದು 4 ತಿಂಗಳು ಕಳೆದಿದೆ. ಈ ಕೊಲೆ ಮಾಡಿದ್ದು ನಟ ದರ್ಶನ್ ಹಾಗೂ ಗ್ಯಾಂಗ್ ಎನ್ನುವ ಆರೋಪ ಇದೆ. ಈ ಪ್ರಕರಣ ಕೋರ್ಟ್ ಅಂಗಳದಲ್ಲಿ ಇದೆ. ರೇಣುಕಾಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ಐದು ತಿಂಗಳ ಗರ್ಭಿಣಿ. ಇದೀಗ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ರೇಣುಕಾಸ್ವಾಮಿ ಕುಟುಂಬದ ಮೂಲಗಳಿಂದ ಮಾಹಿತಿ ಹೊರಬಿದ್ದಿದೆ.
ರೇಣುಕಾಸ್ವಾಮಿ ಪತ್ನಿ ಸಹನಾಗೆ ಇಂದು ನಾರ್ಮಲ್ ಡೆಲಿವರಿಯಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಕೀರ್ತಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆಯಾಗಿದ್ದು, ಇಂದು ಬೆಳಗ್ಗೆ 6:55ಕ್ಕೆ ಸಹನಾಗೆ ನಾರ್ಮಲ್ ಹೆರಿಗೆಯಾಗಿದೆ. ಇನ್ನು ಮೊಮ್ಮಗ ಹುಟ್ಟಿದ ಖುಷಿಯಲ್ಲಿ ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ ಭಾವುಕರಾಗಿ ಮಗ ರೇಣುಕಾಸ್ವಾಮಿಯೇ ಬಂದಷ್ಟು ಖುಷಿ ಆಗಿದೆ ಎಂದು ಕಣ್ಣೀರು ಹಾಕಿದ್ದಾರೆ.
ನಾರ್ಮಲ್ ಡೆಲೆವರಿ ಆಗಿದ್ದು ತಾಯಿ ಮಗು ಸುರಕ್ಷಿತವಾಗಿದ್ದಾರೆ. ಕೀರ್ತಿ ಆಸ್ಪತ್ರೆಯಿಂದ ಉಚಿತ ಚಿಕಿತ್ಸೆ ನೀಡಿದ್ದಾರೆ. ಡಾ.ಮಲ್ಲಿಕಾರ್ಜುನ ಅವರಿಂದ ಉಚಿತವಾಗಿ ಟ್ರೀಟ್ ಮೆಂಟ್ ಸಿಕ್ಕಿದೆ. ಕೀರ್ತಿ ಆಸ್ಪತ್ರೆ, ವೈದ್ಯ ಮಲ್ಲಿಕಾರ್ಜುನ ಅವರಿಗೆ ಧನ್ಯವಾದ ರೇಣುಕಾಸ್ವಾಮಿಯೇ ಹುಟ್ಟಿಬಂದಂತೆ ಖುಷಿ ಆಗಿದೆ ಎಂದು ಕೀರ್ತಿ ಆಸ್ಪತ್ರೆ ಬಳಿ ರೇಣಕಾಸ್ವಾಮಿ ತಂದೆ ಕಾಶೀನಾಥಯ್ಯ ತಿಳಿಸಿದ್ದಾರೆ.
ಜಾಮೀನು ಕೋರಿ ನಟ ದರ್ಶನ್ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ!
ಇನ್ನು ರೇಣುಕಾಸ್ವಾಮಿ ಹತ್ಯೆಯ ಬಳಿಕ ದುಃಖದ ಮಡುವಿನಲ್ಲಿದ್ದ ಕುಟುಂಬಕ್ಕೆ ಈಗ ಮಗುವಿನ ಜನನದ ಸುದ್ದಿ ಸಮಾಧಾನ ತಂದಿದೆ. ಇನ್ನೊಂದೆಡೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 6 ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತವಾಗಿದ್ದು, ಇದೀಗ ನಟ ದರ್ಶನ್ ಹೈಕೋರ್ಟ್ ಮೊರೆ ಹೋಗಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ