ನೋಟಾಗೇ ಅಧಿಕ ಮತ : ಚುನಾವಣಾ ಆಯೋಗದಿಂದ ಮರುಚುನಾವಣೆ ನಿರ್ಧಾರ

Published : Nov 09, 2018, 08:14 AM ISTUpdated : Nov 09, 2018, 08:16 AM IST
ನೋಟಾಗೇ ಅಧಿಕ ಮತ :  ಚುನಾವಣಾ ಆಯೋಗದಿಂದ ಮರುಚುನಾವಣೆ ನಿರ್ಧಾರ

ಸಾರಾಂಶ

ರಾಜ್ಯದಲ್ಲಿ ಚುನಾವಣೆ ನಡೆದಾಗ ಅಭ್ಯರ್ಥಿಗಳಿಗಿಂತ ಹೆಚ್ಚು ನೋಟಾಗೆ ಹೆಚ್ಚು ಮತ ಚಲಾವಣೆಯಾದರೆ ಅಂತಹ ಕ್ಷೇತ್ರಗಳಲ್ಲಿ ಮರು ಚುನಾವಣೆ ನಡೆಸಲಾಗುವುದು ಎಂದು ಮಹಾರಾಷ್ಟ್ರ ಚುನಾವಣಾ ಆಯೋಗ ಹೇಳಿದೆ. 

ಮುಂಬೈ: ಕಣದಲ್ಲಿರುವ ಎಲ್ಲ ಅಭ್ಯರ್ಥಿಗಳಿಗಿಂತ ‘ನೋಟಾ’ಗೇ ಅಧಿಕ ಮತಗಳು ಚಲಾವಣೆಯಾದರೆ, ಅಂತಹ ಕ್ಷೇತ್ರದಲ್ಲಿ ಮರುಚುನಾವಣೆ ನಡೆಸುವಂತಹ ಕ್ರಾಂತಿಕಾರಕ ನಿರ್ಧಾರವೊಂದನ್ನು ದೇಶದಲ್ಲೇ ಮೊದಲ ಬಾರಿಗೆ ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗ ಕೈಗೊಂಡಿದೆ.

ಮಹಾರಾಷ್ಟ್ರದಲ್ಲಿ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹೊಣೆ ಹೊತ್ತಿರುವ ಆಯೋಗದ ಈ ನಿರ್ಧಾರ ತಕ್ಷಣದಿಂದಲೇ ಜಾರಿಗೆ ಬಂದಿದೆ. ಡಿ.9ರಂದು ಅಹಮದ್‌ನಗರ ಹಾಗೂ ಧುಲೆಯಲ್ಲಿ ನಗರಪಾಲಿಕೆ ಚುನಾವಣೆಗಳು ನಡೆಯಲಿದ್ದು, ನೂತನ ‘ನೋಟಾ’ ನಿಯಮ ಅನ್ವಯವಾಗಲಿದೆ ಎಂದು ಚುನಾವಣಾ ಆಯೋಗದ ಕಾರ್ಯದರ್ಶಿ ಶೇಖರ್‌ ಚನ್ನೆ ತಿಳಿಸಿದ್ದಾರೆ.

ಸ್ಪರ್ಧೆಯಲ್ಲಿರುವ ಯಾವುದೇ ಅಭ್ಯರ್ಥಿಗೂ ಮತ ಹಾಕಲು ಬಯಸದ ಮತದಾರರಿಗಾಗಿ ‘ಮೇಲಿನವರಲ್ಲಿ ಯಾರೂ ಅಲ್ಲ’ (ನನ್‌ ಆಫ್‌ ದ ಎಬೋವ್‌- ನೋಟಾ) ಎಂಬ ಆಯ್ಕೆಯನ್ನು ಐದು ವರ್ಷಗಳ ಹಿಂದೆ ಸುಪ್ರೀಂಕೋರ್ಟ್‌ ಒದಗಿಸಿತ್ತು. ಎಲ್ಲ ಹಂತದ ಚುನಾವಣೆಗಳಲ್ಲೂ ಈ ಆಯ್ಕೆ ಇದೆಯಾದರೂ, ಸ್ಪರ್ಧೆಯಲ್ಲಿರುವ ಎಲ್ಲ ಅಭ್ಯರ್ಥಿಗಳಿಗಿಂತ ನೋಟಾಗೇ ಹೆಚ್ಚು ಮತ ಬಂದರೆ ಅದು ಪರಿಗಣನೆಯಾಗುವುದಿಲ್ಲ. ಯಾವ ಅಭ್ಯರ್ಥಿ ಹೆಚ್ಚು ಮತ ಪಡೆದಿರುತ್ತಾನೋ ಆತನನ್ನೇ ವಿಜೇತ ಎಂದು ಘೋಷಿಸುವ ಪದ್ಧತಿ ಜಾರಿಯಲ್ಲಿದೆ.

ಒಂದು ವೇಳೆ ನೋಟಾಗೇ ಅಧಿಕ ಮತ ಬಂದರೆ, ಅಂತಹ ಕ್ಷೇತ್ರದಲ್ಲಿ ಮರುಚುನಾವಣೆ ನಡೆಸಬೇಕು ಎಂಬ ಕೂಗು ಕೇಳಿಬಂದಿತ್ತಾದರೂ ಕೇಂದ್ರ ಚುನಾವಣಾ ಆಯೋಗವೂ ಅದನ್ನು ಪರಿಗಣಿಸಿರಲಿಲ್ಲ. ಆದರೆ ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗ ಅದನ್ನು ಜಾರಿಗೆ ತರುವ ಮೂಲಕ ಗಮನ ಸೆಳೆದಿದೆ. ಹೀಗಾಗಿ ಇನ್ನು ಮುಂದೆ ಮಹಾರಾಷ್ಟ್ರ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ನೋಟಾ ಕೂಡ ಅಭ್ಯರ್ಥಿಗಳ ನಿದ್ರೆಗೆಡಿಸುವುದು ನಿಶ್ಚಿತವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

HD Kumaraswamy Birthday: ಎಚ್‌ಡಿಕೆಗೆ  ₹3.50 ಲಕ್ಷದ 25 ಗ್ರಾಂನ ಚಿನ್ನದ ಸರ ಕೊಟ್ಟ ಅಭಿಮಾನಿ!
ಆಜಾನ್‌ ಚರ್ಚೆ ವೇಳೆ ದೀಪಾವಳಿ ಪಟಾಕಿ ವಿಚಾರ ಎತ್ತಿದ ಖಂಡ್ರೆ Congress-BJP ನಡುವೆ ಗದ್ದಲ