ಆರ್ಥಿಕವಾಗಿ ಹಿಂದುಳಿದವರ ಮೀಸಲು ದೇಶದಲ್ಲಿ ಅಸಮಾನತೆ ಹೆಚ್ಚಿಸುತ್ತೆ: ಸಿದ್ದರಾಮಯ್ಯ

By Govindaraj S  |  First Published Nov 18, 2022, 7:25 AM IST

ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ನಿರ್ಧಾರದ ಪರವಾಗಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ಸಂವಿಧಾನದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದವರಿಗೆ ಮೀಸಲಾತಿ ನೀಡಬಹುದು ಎಂಬ ಅಂಶವಿದೆ.


ಬೆಂಗಳೂರು (ನ.18): ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ನಿರ್ಧಾರದ ಪರವಾಗಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ಸಂವಿಧಾನದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದವರಿಗೆ ಮೀಸಲಾತಿ ನೀಡಬಹುದು ಎಂಬ ಅಂಶವಿದೆ. ಆದರೆ, ಸುಪ್ರೀಂಕೋರ್ಟ್‌ನ ತೀರ್ಪು ಮತ್ತು ಕೇಂದ್ರ ಸರ್ಕಾರದ ನಿರ್ಧಾರ ಸಂವಿಧಾನಾತ್ಮಕವಲ್ಲದ ಕ್ರಮವಾಗಿದ್ದು ಇದರಿಂದಾಗಿ ದೇಶದಲ್ಲಿ ಅಸಮಾನತೆ ಮತ್ತಷ್ಟು ಹೆಚ್ಚಲಿದೆ ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಡಾ. ಅಂಬೇಡ್ಕರ್‌ ತಾಂತ್ರಿಕ ಮಹಾವಿದ್ಯಾಲಯದ ಜೆ.ಪಿ. ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಸಪ್ನ ಪ್ರಕಾಶನದಿಂದ ಪ್ರಕಟಿಸಲಾದ ಎಸ್‌.ಶಿವಮಲ್ಲು ಅವರ ’ಪ್ರಜಾಪ್ರಭುತ್ವದ ಬಲವರ್ಧನೆ’ ಕೃತಿಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ದೇಶದಲ್ಲಿ ಸಾಮಾಜಿಕ, ಆರ್ಥಿಕ ಸಮಾನತೆಗಳು ಇನ್ನೂ ಪೂರ್ಣಪ್ರಮಾಣದಲ್ಲಿ ಬಂದಿಲ್ಲ. ಬದ್ಧತೆ ಇಲ್ಲದವರ ಕೈಯಲ್ಲಿ ಅಧಿಕಾರ ಇರುವ ಕಾರಣ ಅಸಮಾನತೆ ಹೆಚ್ಚಿದೆ. ಜತೆಗೆ ಪ್ರಜಾಪ್ರಭುತ್ವ ದುರ್ಬಲವಾಗುತ್ತಿದೆ. ಸಂವಿಧಾನವನ್ನು ರಕ್ಷಿಸಿದರಷ್ಟೇ ನಾವೆಲ್ಲ ಸುರಕ್ಷಿತವಾಗಿರಲು ಸಾಧ್ಯ. 

Tap to resize

Latest Videos

ನಿಜವಾದ ಸಂತೋಷ ಆತ್ಮಸಾಕ್ಷಿಯಲ್ಲಿದೆ: ಸಿಎಂ ಬೊಮ್ಮಾಯಿ

ಹಿಂದೆ ಕೇಂದ್ರ ಸಚಿವರಾಗಿದ್ದ ರಾಜ್ಯದ ಸಂಸದರೊಬ್ಬರು ಸಂವಿಧಾನವನ್ನು ಬದಲಿಸುವುದೇ ನಮ್ಮ ಗುರಿ ಎಂದು ಹೇಳಿದ್ದರು. ಹೀಗೆ ಸಂವಿಧಾನ ವಿರೋಧಿ ಹೇಳಿಕೆ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳದ ಬಿಜೆಪಿ, ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿತ್ತು. ಯಾರೇ ಅಧಿಕಾರಕ್ಕೆ ಬಂದರೂ ಸಂವಿಧಾನ ಆಶಯದಂತೆ ಕೆಲಸ ಮಾಡಬೇಕು. ಇಲ್ಲದಿದ್ದರೆ ಜನರು ಅವರನ್ನು ತೊಲಗಿಸಬೇಕು ಎಂದು ತಿಳಿಸಿದರು.

ದಲಿತರ ಏಳಿಗೆಗಾಗಿ ಜಾರಿಗೆ ತಂದಿರುವ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯ ಅನುದಾನವನ್ನು ಕಡಿತ ಮಾಡುವ ಮೂಲಕ ರಾಜ್ಯ ಸರ್ಕಾರ ದಲಿತ ವಿರೋಧಿ ಧೋರಣೆ ತಳೆದಿದೆ. ಪ್ರಸಕ್ತ ಸಾಲಿನ ಬಜೆಟ್‌ ಗಾತ್ರದಂತೆ ಎಸ್‌ಸಿಪಿ/ಟಿಎಸ್‌ಪಿ ಅನುದಾನ 42 ಸಾವಿರ ಕೋಟಿ ರೂ. ಇರಬೇಕಿತ್ತು. ಆದರೆ ಕೇವಲ 28 ಸಾವಿರ ಕೋಟಿ ರೂ. ಮೀಸಲಿರಿಸಲಾಗಿದೆ. ಕಳೆದ ವರ್ಷದ ಎಸ್‌ಸಿಪಿ/ಟಿಎಸ್‌ಪಿ ಅನುದಾನದಲ್ಲಿ 7,885 ಕೋಟಿ ರೂ.ಗಳನ್ನು ಬೇರೆ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ. ಹೀಗೆ ಸಾಮಾಜಿಕವಾಗಿ ಹಿಂದುಳಿದವರಿಗೆ ಅನ್ಯಾಯ ಮಾಡುತ್ತಿರುವ ಪಕ್ಷದ ವಿರುದ್ಧ ಜನರು ಧ್ವನಿ ಎತ್ತಬೇಕಿದೆ ಎಂದರು.

ಸೂರ್ಯ, ಚಂದ್ರ ಇರುವವರೆಗೆ ಕನ್ನಡಕ್ಕೆ ಆಪತ್ತಿಲ್ಲ; ಸಿಎಂ ಬೊಮ್ಮಾಯಿ

ವಿಧಾನಸಭೆಯ ಮಾಜಿ ಸ್ಪೀಕರ್‌ ಕೆ.ಆರ್‌.ರಮೇಶ್‌ ಕುಮಾರ್‌ ಮಾತನಾಡಿ, ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗಲು ಮತ್ತೊಂದು ಅವಕಾಶವಿದೆ. ಆದರೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ತಮ್ಮ ಸುತ್ತಲಿರುವವರ ಬಗ್ಗೆ ಎಚ್ಚರದಿಂದಿರಬೇಕು. ಡಾ. ಎಚ್‌.ಸಿ.ಮಹದೇವಪ್ಪ, ಸಿದ್ದರಾಮಯ್ಯ ಹಿಂದಿನ ಚುನಾವಣೆಗಳಲ್ಲಿ ಸೋತು ಗಾಯಗೊಂಡಿದ್ದಾರೆ. ಈ ಬಾರಿ ಎಚ್ಚರಿಕೆಯಿಂದ ಮುಂದುವರಿಯಬೇಕು. ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗುವ ಎರಡನೇ ಅವಕಾಶ ಸಿಗುವ ಎಲ್ಲ ಲಕ್ಷಣಗಳಿವೆ ಎಂದು ಹೇಳಿದರು. ಮಾಜಿ ಸಚಿವ ಎಚ್‌. ಸಿ. ಮಹದೇವಪ್ಪ, ಹಿಂದುಳಿದ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್‌.ದ್ವಾರಕನಾಥ್‌, ಪಾಂಚಜನ್ಯ ವಿದ್ಯಾಪೀಠ ಕಲ್ಯಾಣ ದತ್ತಿಯ ಕಾರ್ಯದರ್ಶಿ ಎ.ಆರ್‌.ಕೃಷ್ಣಮೂರ್ತಿ, ಖಜಾಂಚಿ ಡಾ,ಬಿ.ಎನ್‌.ಉಮೇಶ್‌, ಧರ್ಮದರ್ಶಿ ಡಾ.ಎಂ.ಮಹದೇವ, ಲೇಖಕ ಎಸ್‌.ಶಿವಮಲ್ಲು ಇತರರಿದ್ದರು.

click me!