ವಲಸೆ ಕಾರ್ಮಿಕರಿಗೆ ಉಚಿತ ವಸತಿ ನೀಡುವ ‘ಶ್ರಮಿಕ್ ವಸತಿ’ ಯೋಜನೆಯನ್ನು ಕಾರ್ಮಿಕ ಇಲಾಖೆ ದೇಶದಲ್ಲೇ ಮೊದಲ ಬಾರಿಗೆ ಜಾರಿಗೊಳಿಸಿದ್ದು, ಶೀಘ್ರದಲ್ಲೇ ವಸತಿ ಸಮುಚ್ಚಯ, ಬಿಡಿ ಮನೆಗಳು ಲೋಕಾರ್ಪಣೆಯಾಗಲಿವೆ.
ಬೆಂಗಳೂರು (ಮಾ.6) : ವಲಸೆ ಕಾರ್ಮಿಕರಿಗೆ ಉಚಿತ ವಸತಿ ನೀಡುವ ‘ಶ್ರಮಿಕ್ ವಸತಿ’ ಯೋಜನೆಯನ್ನು ಕಾರ್ಮಿಕ ಇಲಾಖೆ ದೇಶದಲ್ಲೇ ಮೊದಲ ಬಾರಿಗೆ ಜಾರಿಗೊಳಿಸಿದ್ದು, ಶೀಘ್ರದಲ್ಲೇ ವಸತಿ ಸಮುಚ್ಚಯ, ಬಿಡಿ ಮನೆಗಳು ಲೋಕಾರ್ಪಣೆಯಾಗಲಿವೆ.
ಕೈಗಾರಿಕಾ ಪ್ರದೇಶಗಳು ಮತ್ತು ಬೃಹತ್ ನಿರ್ಮಾಣ ವಲಯಗಳ ಆಸುಪಾಸಿನಲ್ಲಿ ‘ಶ್ರಮಿಕ್ ನಿವಾಸ್’ ಯೋಜನೆ(Shramik Niwas scheme)ಯಡಿ ಸಂಘಟಿತ ಕಾರ್ಮಿಕರಿಗೆ ವಸತಿ ನೀಡಲು ವಸತಿ ಸಮುಚ್ಚಯ ಮತ್ತು ಬಿಡಿ ಮನೆಗಳ ನಿರ್ಮಾಣಕ್ಕೆ ಇಲಾಖೆ ಮುಂದಾಗಿದೆ. ಯೋಜನೆಯ ಮೊದಲ ಹಂತವಾಗಿ ದೊಡ್ಡಬಳ್ಳಾಪುರ(Doddaballapur) ತಾಲೂಕಿನಲ್ಲಿ ಬೃಹತ್ ವಸತಿ ಸಮುಚ್ಚಯ(Huge residential complex) ಉದ್ಘಾಟನೆ(Inauguration)ಗೆ ಸಜ್ಜಾಗುತ್ತಿದೆ.
undefined
ಜನರ ಹಲವು ವರ್ಷದ ಕನಸು ನನಸು: ಶಿವರಾಮ ಹೆಬ್ಬಾರ್
ವಸತಿ ಸಮುಚ್ಚಯಗಳಲ್ಲಿ ಕಾರ್ಮಿಕರು ಮತ್ತು ಅವರ ಕುಟುಂಬ ವರ್ಗಕ್ಕೆ ನೀರು, ವಿದ್ಯುತ್ ಸೇರಿದಂತೆ ಅಗತ್ಯ ಮೂಲ ಸೌಕರ್ಯಕ್ಕೂ ಆದ್ಯತೆ ನೀಡಲಾಗಿದೆ. ಈ ವಸತಿ ಸಮುಚ್ಚಯಗಳನ್ನು ಇಲಾಖೆ(Labour depertment)ಯೇ ನಿರ್ವಹಿಸಲಿದೆ. ದೊಡ್ಡಬಳ್ಳಾಪುರ ತಾಲೂಕಿನ ಕೈಗಾರಿಕಾ ವಲಯದ ಬದನಹಳ್ಳಿಯಲ್ಲಿ 19 ಕೋಟಿ ರು. ವೆಚ್ಚದಲ್ಲಿ ಬೃಹತ್ ಏಕ ವಸತಿ ಮತ್ತು ಕುಟುಂಬ ವಸತಿಯ ಸಮುಚ್ಚಯ ನಿರ್ಮಾಣವಾಗಿದ್ದು ಶೀಘ್ರದಲ್ಲೇ ಲೋಕಾರ್ಪಣೆಯಾಗಲಿದೆ.
ಮಠ-ಮಂದಿರ ವಿವಾದಕ್ಕೆ ಕಾಂಗ್ರೆಸ್ ಕಾರಣ- ಸಚಿವ ಶಿವರಾಮ ಹೆಬ್ಬಾರ್
ವಸತಿ ವ್ಯವಸ್ಥೆಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. ಏಕ ವ್ಯಕ್ತಿ ಸಮುಚ್ಚಯದಲ್ಲಿ ಸಾಮೂಹಿಕ ವಸತಿಗೆ ಅವಕಾಶವಿದೆ. ಏಕ ಹಾಸಿಗೆ ವ್ಯವಸ್ಥೆಯಡಿ 96 ಕಾರ್ಮಿಕರು ಮತ್ತು ದ್ವಿ ಹಾಸಿಗೆ ವ್ಯವಸ್ಥೆಯಡಿ 196 ಕಾರ್ಮಿಕರಿಗೆ ವಸತಿ ಅನುಕೂಲ ಲಭಿಸಲಿದೆ. ಕುಟುಂಬದೊಂದಿಗೆ ಉಳಿದುಕೊಳ್ಳ ಬಯಸುವ ಕಾರ್ಮಿಕರಿಗೆ ಪ್ರತ್ಯೇಕ ಮನೆಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದ್ದು, ಒಂದು ಕುಟುಂಬದಲ್ಲಿ ನಾಲ್ಕು ಮಂದಿ ಎಂಬಂತೆ 48 ಕಾರ್ಮಿಕ ಕುಟುಂಬಗಳಿಗೆ ಮೊದಲ ಹಂತದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲು ಇಲಾಖೆ ಮುಂದಡಿ ಇರಿಸಿದೆ. ರಾಜ್ಯದ ಹಲವೆಡೆ ಇರುವ ಕೈಗಾರಿಕಾ ಪ್ರದೇಶಗಳಲ್ಲೂ ಈ ಯೋಜನೆ ವಿಸ್ತರಣೆಯಾಗಲಿದೆ ಎಂದು ಕಾರ್ಮಿಕ ಇಲಾಖೆ ತಿಳಿಸಿದೆ.