ಕರುನಾಡು ಹಸಿರಾಗಿಸಲು ಶ್ರಮಿಸಿದ್ದ ನೇಗಿನಾಳ್‌ ನಿಧನ

Kannadaprabha News   | Asianet News
Published : May 03, 2021, 07:41 AM IST
ಕರುನಾಡು ಹಸಿರಾಗಿಸಲು ಶ್ರಮಿಸಿದ್ದ ನೇಗಿನಾಳ್‌ ನಿಧನ

ಸಾರಾಂಶ

ಪರಿಸರ ಸಂರಕ್ಷಣೆ ಮತ್ತು ಅರಣ್ಯೀಕರಣಕ್ಕಾಗಿ ಶ್ರಮಿಸಿದ್ದ ಅರಣ್ಯ ಇಲಾಖೆಯ ಅಧಿಕಾರಿ ಎಸ್‌.ಜಿ. ನೇಗಿನಾಳ್‌   ಕೊರೋನಾ ಸೋಂಕು ತಗುಲಿ ಮೃತಪಟ್ಟಿದ್ದಾರೆ.   ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಸಿರೀಕರಣ ಕಾರ್ಯದಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದರು.

ಬೆಂಗಳೂರು (ಮೇ.03): ರಾಜ್ಯದಲ್ಲಿ ಪರಿಸರ ಸಂರಕ್ಷಣೆ ಮತ್ತು ಅರಣ್ಯೀಕರಣಕ್ಕಾಗಿ ಶ್ರಮಿಸಿದ್ದ ಅರಣ್ಯ ಇಲಾಖೆಯ ಅಧಿಕಾರಿ ಎಸ್‌.ಜಿ. ನೇಗಿನಾಳ್‌ (92) ಕೊರೋನಾ ಸೋಂಕು ತಗುಲಿ ಮೃತಪಟ್ಟಿದ್ದಾರೆ. ಮೃತರು ಒಬ್ಬ ಮಗ ಮತ್ತು ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಿಸಿದ್ದ ಅವರು, ಧಾರವಾಡದಲ್ಲಿ ಶಿಕ್ಷಣವನ್ನು ಪೂರೈಸಿದ್ದರು. ಪ್ರೌಢ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸಂದರ್ಭದಲ್ಲಿ ಕ್ವಿಟ್‌ ಇಂಡಿಯಾ ಚಳವಳಿಯಲ್ಲಿ ಭಾಗಿವಹಿಸಿದ್ದರು. ವಲಯ ಅರಣ್ಯಾಧಿಕಾರಿಗಾಗಿ ನೇಮಕವಾಗಿದ್ದ ಅವರು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಸಿರೀಕರಣ ಕಾರ್ಯದಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದರು.

ದೇಶದಲ್ಲಿ ಪ್ರಾಜೆಕ್ಟ್ ಟೈಗರ್‌ ಯೋಜನೆ ಆರಂಭವಾದ ಪ್ರಥಮ ಐದು ವನ್ಯಜೀವಿಧಾಮಗಳ ಪೈಕಿ ಬಂಡೀಪುರ ಕೂಡ ಒಂದಾಗಿತ್ತು. ಈ ಯೋಜನೆ ಘೋಷಣೆಯಾದ ಸಂದರ್ಭದಲ್ಲಿ ನೇಗಿನಾಳ್‌ ಅವರು ಬಂಡೀಪುರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದು, ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತರುವಲ್ಲಿ ಶ್ರಮಿಸಿದ್ದರು.

ಕರ್ನಾಟಕದಲ್ಲಿ ಕೊರೋನಾ ಅಬ್ಬರ: ಮೇ.2ರ ಜಿಲ್ಲಾವಾರು ಅಂಕಿ-ಸಂಖ್ಯೆ

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವ್ಯಾಪಕವಾಗಿ ಮರಗಳನ್ನು ನೆಡುವುದರಲ್ಲಿ ನೇಗಿನಾಳ ಅವರ ಕೊಡುಗೆ ಅತ್ಯಂತ ದೊಡ್ಡದು. ಮರಗಳನ್ನು ನೆಡುವ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸುವುದು ದೊಡ್ಡ ಸಾಧನೆಯಾಗಿದೆ. ಅರಣ್ಯಾಧಿಕಾರಿ ಒಂದು ಪ್ರದೇಶವನ್ನು ಮಾತ್ರ ಹಸಿರೀಕರಣ ಮಾಡುತ್ತಿಲ್ಲ. ಜನತೆಗೆ ಆಮ್ಲಜನಕವನ್ನು ಪೂರೈಸುತ್ತಾರೆ. 

ಪಕ್ಷಿಗಳು, ಕೀಟಗಳು, ಹಣ್ಣುಗಳು ಸೇರಿದಂತೆ ಸಮೃದ್ಧ ಜೀವ ವೈವಿದ್ಯತೆಯನ್ನು ನೀಡುತ್ತಿರುವವರಾಗಿದ್ದಾರೆ. ನಿಮ್ಮ ಸೇವೆ ಇಡೀ ಭೂ ಮಂಡಲಕ್ಕೆ ದೊಡ್ಡ ಕೊಡುಗೆಯಾಗಿದೆ ಎಂದು ಅರಣ್ಯಾಧಿಕಾರಿಗಳಾಗಿ ನೇಮಕವಾಗುತ್ತಿದ್ದ ಸಿಬ್ಬಂದಿಗೆ ಕಿವಿಮಾತು ಹೇಳುತ್ತಿದ್ದರು. ಅಲ್ಲದೆ, ಹಸಿರು ಮತ್ತು ಮರಗಳು ದೇವರ ನೀಡಿರುವ ಪರಿಸರದ ಸೃಷ್ಟಿ. ಅವುಗಳ ಸಂರಕ್ಷಣೆ ನಮ್ಮೆಲ್ಲ ಹೊಣೆ ಎಂದು ಹಲವು ಬಾರಿ ಪುನರುಚ್ಚರಿಸುತ್ತಿದ್ದರು.

ಅಲ್ಲದೇ ಬೆಂಗಳೂರು ನಗರದಲ್ಲಿ 6 ಕೋಟಿಗೂ ಅಧಿಕ ಗಿಡಗಳನ್ನು ನೆಟ್ಟಿದ್ದರು. ಅಲ್ಲದೇ ಅವುಗಳು ವೇಗವಾಗಿ ಬೆಳೆಯಲು ವಿಶೇಷ ತಂತ್ರಜ್ಞಾನದ ಪೋಷಣೆಯನ್ನು ಕೈಗೊಂಡಿದ್ದರು. ಇದರಿಮದಾಗಿಯೇ ಬೆಂಗಳೂರಿನಲ್ಲಿ ಅತ್ಯಧಿಕ ಮರಗಿಡಗಳನ್ನು ಕಾಣುವಂತಾಯಿತು. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!