ಎಸಿಬಿ ರದ್ದತಿ ತೀರ್ಪು ನೀಡಿದ್ದ ನ್ಯಾ. ವೀರಪ್ಪ ಕರ್ನಾಟಕ ಉಪಲೋಕಾಯುಕ್ತ?

Published : Jun 25, 2024, 07:39 AM IST
ಎಸಿಬಿ ರದ್ದತಿ ತೀರ್ಪು ನೀಡಿದ್ದ ನ್ಯಾ. ವೀರಪ್ಪ ಕರ್ನಾಟಕ ಉಪಲೋಕಾಯುಕ್ತ?

ಸಾರಾಂಶ

ಈ ಹಿಂದೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಆಗಿದ್ದ ಅವರು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರವನ್ನು ರದ್ದುಗೊಳಿಸಿ ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಪುನರ್‌ಸ್ಥಾಪನೆ ಮಾಡಿದ್ದರು. ಇದೀಗ ಅವರೇ ಉಪ ಲೋಕಾಯುಕ್ತರಾಗಿ ನೇಮಕಗೊಳ್ಳುತ್ತಿದ್ದಾರೆ.  

ಬೆಂಗಳೂರು(ಜೂ.25):  ಕರ್ನಾಟಕ ಉಪ ಲೋಕಾಯುಕ್ತ - 2 ಹುದ್ದೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರನ್ನು ನೇಮಕ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿದೆ.

ಈ ಹಿಂದೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಆಗಿದ್ದ ಅವರು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರವನ್ನು ರದ್ದುಗೊಳಿಸಿ ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಪುನರ್‌ಸ್ಥಾಪನೆ ಮಾಡಿದ್ದರು. ಇದೀಗ ಅವರೇ ಉಪ ಲೋಕಾಯುಕ್ತರಾಗಿ ನೇಮಕಗೊಳ್ಳುತ್ತಿದ್ದಾರೆ.

ಬೆಂಗಳೂರು: ಆದಾಯ ಮೀರಿ ಶೇ.488% ಆಸ್ತಿ ಕೇಸ್‌ ರದ್ದತಿಗೆ ಒಪ್ಪದ ಕೋರ್ಟ್‌

ರಾಜ್ಯದಲ್ಲಿ ಉಪ ಲೋಕಾಯುಕ್ತರ ಎರಡು ಹುದ್ದೆಗಳಿವೆ. ಅದರಲ್ಲಿ ಖಾಲಿ ಇದ್ದ ಉಪ ಲೋಕಾಯುಕ್ತ-2 ಹುದ್ದೆಗೆ ನೇಮಕ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ಕುಮಾರಕೃಪಾ ಅತಿಥಿಗೃಹದಲ್ಲಿ ಸಭೆ ನಡೆಸಲಾಯಿತು. ಈ ವೇಳೆ ಕರ್ನಾಟಕ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಇತರರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!