ಭೌತಶಾಸ್ತ್ರದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. G.B. ಕಲಕೋಟಿ ನಿಧನ

Published : Jun 03, 2026, 02:06 PM ISTUpdated : Jun 04, 2026, 07:17 AM IST
 Professor GB Kalakoti

ಸಾರಾಂಶ

PC ಜಾಬಿನ ಕಾಲೇಜಿನ ಭೌತಶಾಸ್ತ್ರದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. G.B. ಕಲಕೋಟಿ ಅವರು ಇಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹಾವೇರಿ ತಾಲೂಕಿನ ಅವರ ಸ್ವಗ್ರಾಮ ಕೊರಟೂರಿನಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ.

ಬೆಂಗಳೂರು: ಹಾವೇರಿ ತಾಲೂಕಿನ ಕೊರಡೂರು ಗ್ರಾಮದ ನಿವಾಸಿ ಹಾಗೂ ಹುಬ್ಬಳ್ಳಿ ಕೆಎಲ್‌ಇ ಸಂಸ್ಥೆಯ ಪಿ.ಸಿ. ಜಾಬಿನ ಕಾಲೇಜಿನ ಭೌತಶಾಸ್ತ್ರದ ನಿವೃತ್ತ ಪ್ರಾಧ್ಯಾಪಕ ಪ್ರೊ. ಜಿ.ಬಿ. ಕಲಕೋಟಿ (71) ಬುಧವಾರ ನಿಧನರಾದರು.

ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

ಮೃತರ ಪಾರ್ಥಿವ ಶರೀರವನ್ನು ಜೂ. 4ರಂದು ಬೆಳಗ್ಗೆ 5ಕ್ಕೆ ಹುಬ್ಬಳ್ಳಿಯ ಚಂದ್ರಗಿರಿ ಲೇಔಟ್‌ನಲ್ಲಿರುವ ಅವರ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಆನಂತರ ಬೆಳಗ್ಗೆ 9ಕ್ಕೆ ಹಾವೇರಿ ತಾಲೂಕು ಕೊರಡೂರಿನ ಸ್ವಗ್ರಾಮಕ್ಕೆ ಕರೆತರಲಾಗುವುದು. ಮಧ್ಯಾಹ್ನ 1ಕ್ಕೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.

ಹುಬ್ಬಳ್ಳಿಯ ಕೆಎಲ್‌ಇ ಸಂಸ್ಥೆಯ ಪಿ.ಸಿ. ಜಾಬಿನ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ 1980ರಲ್ಲಿ ಸೇವೆಗೆ ಸೇರಿದ್ದರು. 2015 ಡಿ. 31ರಂದು ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

ಇದನ್ನೂ ಓದಿ: ಡಿಕೆ ಶಿವಕುಮಾರ್ ಸಂಪುಟದ ಮೊದಲ ಹೆಜ್ಜೆ: 13 ಸಚಿವರು, 14 ಘಟಾನುಘಟಿ ನಾಯಕರಿಗೆ ನಿರಾಸೆ?

ಇದನ್ನೂ ಓದಿ: ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಾಧ್ಯತೆ! ಡಿಕೆಶಿ ಹಿಂದೆ ಮಾತು ಕೊಟ್ಟಿದ್ದೇನು?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕದಲ್ಲಿ ಮಳೆಯಿಲ್ಲದಿದ್ರೂ ಕಾವೇರಿ ನೀರಿಗಾಗಿ ಕ್ಯಾತೆ; ಸಿಎಂ ಬದಲಾದ್ರೂ ಹಳೆ ಚಾಳಿ ಬಿಡದ ತಮಿಳುನಾಡು!
ಗೃಹಲಕ್ಷ್ಮಿ ಯೋಜನೆ ಕಳ್ಳಾಟ ಬಿಚ್ಚಿಟ್ಟ ಸಿಎಜಿ ರಿಪೋರ್ಟ್; 19 ಸಾವಿರ ಫಲಾನುಭವಿಗಳಿಗೆ ಒಂದೇ ಬ್ಯಾಂಕ್ ಖಾತೆ!