
ಬೆಳಗಾವಿ (ಡಿ.7) : ತೆಲಂಗಾಣದ ನೂತನ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಪದಗ್ರಹಣ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕರ್ನಾಟಕದ ಅನೇಕ ಸಚಿವರ ದಂಡೇ ಪಾಲ್ಗೊಳ್ಳುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ಪಾಲ್ಗೊಳ್ಳುವುದು ಖಾತರಿಯಾಗಿದೆ. ಮುಖ್ಯಮಂತ್ರಿಯವರು ಗುರುವಾರ ಮಧ್ಯಾಹ್ನ 1 ಗಂಟೆಗೆ ನಡೆಯುವ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಳಗ್ಗೆ 11 ಗಂಟೆಗೆ ಬೆಳಗಾವಿಯಿಂದ ಹೈದರಾಬಾದ್‌ಗೆ ವಿಮಾನದಲ್ಲಿ ಪ್ರಯಾಣ ಬೆಳೆಸಲಿದ್ದಾರೆ. ಬೆಂಗಳೂರಿಗೆ ವಾಪಸ್ಸಾಗಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೂಡ ಗುರುವಾರ ಬೆಳಗ್ಗೆ ತೆಲಂಗಾಣಕ್ಕೆ ತೆರಳಲಿದ್ದಾರೆ.
RSS ಹಿನ್ನೆಲೆಯ ರೇವಂತ್ ರೆಡ್ಡಿಗೆ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಪಟ್ಟ!
ಇನ್ನು ಸಚಿವ ಜಮೀರ್ ಅಹಮದ್ ತೆಲಂಗಾಣದಲ್ಲೇ ಇದ್ದಾರೆ. ಇವರ ಜೊತೆಗೆ ತೆಲಂಗಾಣ ಚುನಾವಣಾ ಉಸ್ತುವಾರಿಗಳಾಗಿ ಕಾರ್ಯನಿರ್ವಹಿಸಿದ್ದ ಸಚಿವರಾದ ಕೆ.ಎಚ್.ಮುನಿಯಪ್ಪ, ಡಾ.ಎಂ.ಸಿ.ಸುಧಾಕರ್, ನಾಗೇಂದ್ರ, ಎನ್.ಎಸ್.ಬೋಸರಾಜು, ಶಿವರಾಜ ತಂಗಡಗಿ, ರಾಮಲಿಂಗಾರೆಡ್ಡಿ ತೆರಳುವ ಸಾಧ್ಯತೆ ಇದೆ.
ಕೇಂದ್ರ ಸಚಿವ ಜೈಪಾಲ್ ರೆಡ್ಡಿ ಮಗಳನ್ನೇ ಪ್ರೀತಿಸಿ ಮದುವೆಯಾಗಿದ್ದ ರೇವಂತ್ ರೆಡ್ಡಿ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ