ಶ್ರೀಮಂತರು ಗ್ಯಾರಂಟಿಯಿಂದ ದೂರ ಇರಲಿ: ಎಂ.ಬಿ.ಪಾಟೀಲ್‌

Kannadaprabha News   | Kannada Prabha
Published : Mar 02, 2026, 06:42 AM IST
MB Patil

ಸಾರಾಂಶ

ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ಬಡವರ ಶ್ರೇಯೋಭಿವೃದ್ಧಿಗಾಗಿ ಜಾರಿಗೆ ತಂದಿರುವ ಯೋಜನೆಗಳಾಗಿದ್ದು, ಶ್ರೀಮಂತರು ಇವುಗಳ ಪ್ರಯೋಜನ ಪಡೆಯುವುದನ್ನು ಸ್ವಯಂಪ್ರೇರಿತವಾಗಿ ಬಿಡಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಕರೆ ನೀಡಿದ್ದಾರೆ.

ವಿಜಯಪುರ: ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ಬಡವರ ಶ್ರೇಯೋಭಿವೃದ್ಧಿಗಾಗಿ ಜಾರಿಗೆ ತಂದಿರುವ ಯೋಜನೆಗಳಾಗಿದ್ದು, ಶ್ರೀಮಂತರು ಇವುಗಳ ಪ್ರಯೋಜನ ಪಡೆಯುವುದನ್ನು ಸ್ವಯಂಪ್ರೇರಿತವಾಗಿ ಬಿಡಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಕರೆ ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯ ಒಂದು ಭಾಗ

ಆಲಮಟ್ಟಿಯಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗಿವೆ ಎಂಬ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯ ಒಂದು ಭಾಗ. ಇವು ಬಡವರಿಗಾಗಿ ಇರುವ ಯೋಜನೆಗಳಾಗಿವೆ ಎಂದರು.

ಶ್ರೀಮಂತರು ಇವುಗಳನ್ನು ಪಡೆಯುವುದನ್ನು ಸ್ವಯಂಪ್ರೇರಿತವಾಗಿ ಬಿಡಬೇಕು

ಶ್ರೀಮಂತರೂ ಸಹ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಪಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಶ್ರೀಮಂತರು ಇವುಗಳನ್ನು ಪಡೆಯುವುದನ್ನು ಸ್ವಯಂಪ್ರೇರಿತವಾಗಿ ಬಿಡಬೇಕು. ಈ ಯೋಜನೆಗಳು ಬಡವರ ಆರ್ಥಿಕ ಸಬಲೀಕರಣಕ್ಕೆ ಅಗತ್ಯವಾಗಿದ್ದು, ಅರ್ಹರು ಮಾತ್ರ ಇದರ ಪ್ರಯೋಜನ ಪಡೆಯಬೇಕು. ಗ್ಯಾರಂಟಿ ಯೋಜನೆಗಳು ಬಡವರ ಪಾಲಿಗೆ ಅಭಿವೃದ್ಧಿಯ ಆಧಾರಸ್ತಂಭಗಳಾಗಿವೆ. ಆರ್ಥಿಕವಾಗಿ ಸದೃಢರಾದವರು, ತೆರಿಗೆ ಪಾವತಿದಾರರು ಈ ಸೌಲಭ್ಯಗಳಿಂದ ದೂರವಿರುವುದು ಉತ್ತಮ ಎಂದು ಸಲಹೆ ನೀಡಿದರು.

ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳನ್ನೂ ಮಾಡುತ್ತಿದೆ. ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕೆಲಸಗಳು ಕುಂಠಿತಗೊಳ್ಳುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ತಜ್ಞರಾಗಿದ್ದು, ಹಣಕಾಸಿನ ವ್ಯವಹಾರವನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖಮೇನಿ ಆತ್ಮಕ್ಕೆ ಶಾಂತಿ ದೊರೆಯಲಿ, ಅಮೆರಿಕ ದಾಳಿ ಖಂಡನಾರ್ಹ: ಸಿಎಂ
Karnataka Latest News Live: ಶ್ರೀಮಂತರು ಗ್ಯಾರಂಟಿಯಿಂದ ದೂರ ಇರಲಿ - ಎಂ.ಬಿ.ಪಾಟೀಲ್‌