ಮಂಗಳೂರಿನಲ್ಲಿ ನಡೆಯಬೇಕಿದ್ದ ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮ ರದ್ದು!

By Govindaraj S  |  First Published Jun 25, 2022, 2:32 AM IST

ಸಮಾನ ಮನಸ್ಕ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ ಬೆನ್ನಲ್ಲೇ ಮಂಗಳೂರಿನಲ್ಲಿ ನಡೆಯಬೇಕಿದ್ದ ರೋಹಿತ್ ಚಕ್ರತೀರ್ಥ ನಾಗರಿಕ ಸನ್ಮಾನ ಕಾರ್ಯಕ್ರಮ ರದ್ದಾಗಿದೆ. ಪ್ರತಿಭಟನೆ ನಡೆಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರೋ ಕಾರಣದಿಂದ ಕಾರ್ಯಕ್ರಮ ರದ್ದು ‌ಮಾಡಿರುವುದಾಗಿ ಆಯೋಜಕರು ಮಾಹಿತಿ ನೀಡಿದ್ದಾರೆ. 


ವರದಿ: ಭರತ್ ರಾಜ್, ಏಷ್ಯಾನೆಟ್ ಸುವರ್ಣ ನ್ಯೂಸ್, ಮಂಗಳೂರು

ಮಂಗಳೂರು (ಜೂ.25): ಸಮಾನ ಮನಸ್ಕ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ ಬೆನ್ನಲ್ಲೇ ಮಂಗಳೂರಿನಲ್ಲಿ ನಡೆಯಬೇಕಿದ್ದ ರೋಹಿತ್ ಚಕ್ರತೀರ್ಥ ನಾಗರಿಕ ಸನ್ಮಾನ ಕಾರ್ಯಕ್ರಮ ರದ್ದಾಗಿದೆ. ಪ್ರತಿಭಟನೆ ನಡೆಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರೋ ಕಾರಣದಿಂದ ಕಾರ್ಯಕ್ರಮ ರದ್ದು ‌ಮಾಡಿರುವುದಾಗಿ ಆಯೋಜಕರು ಮಾಹಿತಿ ನೀಡಿದ್ದಾರೆ. ಶನಿವಾರ ಮಂಗಳೂರಿನ ಕೆನರಾ ಹೈಸ್ಕೂಲ್ ಸಭಾಂಗಣದಲ್ಲಿ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥಗೆ ನಾಗರಿಕ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಸಮಾನ ಮನಸ್ಕರು ಸೇರಿಕೊಂಡು ಈ ಕಾರ್ಯಕ್ರಮ ಆಯೋಜಿಸಿದ್ದರು.

Tap to resize

Latest Videos

ಆದರೆ ಇದೀಗ ರೋಹಿತ್ ಚಕ್ರತೀರ್ಥ ನಾಗರಿಕ ಸನ್ಮಾನ ಜೈ ಬಿಡಲು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನಿರ್ಧರಿಸಿದೆ. ಎಡಪಂಥೀಯ ಸಂಘಟನೆಗಳಿಂದ ಚಕ್ರತೀರ್ಥ ಕಾರ್ಯಕ್ರಮಕ್ಕೆ ಮುತ್ತಿಗೆ ನಿರ್ಧಾರ ಹಿನ್ನೆಲೆ ಕಾರ್ಯಕ್ರಮ ರದ್ದು ಮಾಡಲಾಗಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದು ಮಾಡಿರುವುದಾಗಿ ಆಯೋಜಕರು ತಿಳಿಸಿದ್ದಾರೆ. ದೇಶಪ್ರೇಮಿ ಸಂಘಟನೆಗಳ ಒಕ್ಕೂಟದ ಹೆಸರಿನಲ್ಲಿ ಎಡಪಂಥೀಯ ಸಂಘಟನೆಗಳಿಂದ ಶನಿವಾರ ಪ್ರತಿಭಟನೆಗೆ ಕರೆ ಕೊಡಲಾಗಿತ್ತು. ಸಂಜೆ 4 :30 ಕ್ಕೆ ಸಮಾನ ಮನಸ್ಕ ಸಂಘಟನೆಗಳು, ನಾಗರಿಕರು ಒಟ್ಟು ಸೇರಿ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಮೆರವಣಿಗೆ ಮೂಲಕ ತೆರಳಿ ಡೊಂಗರಕೇರಿ ಕೆನರಾ ಹೈಸ್ಕೂಲ್ ನ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ‌ನಿರ್ಧರಿಸಲಾಗಿತ್ತು. 

ಮಂಗಳೂರು: ಸ್ವಚ್ಛ ಶಾಂಭವಿಗೂ ಇನ್ನು ಕೈಗಾರಿಕಾ ವಿಷ ಕುಣಿಕೆ..!

ಡಿವೈಎಫ್ಐ ರಾಜ್ಯಾಧ್ಯಕ್ಷ  ಮುನೀರ್ ಕಾಟಿಪಳ್ಳ ನೇತೃತ್ವದಲ್ಲಿ ಮುತ್ತಿಗೆಗೆ ನಿರ್ಧರಿಸಿದ್ದು, ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದವು. ವಿವಿ ಕುಲಪತಿ ಡಾ.ಸುಬ್ರಹ್ಮಣ್ಯ ಯಡಿಪಡಿತ್ತಾಯ ಅಧ್ಯಕ್ಷತೆಯಲ್ಲಿ ನಡೆಯಲಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ವಿವಿ ಕುಲಪತಿ ಯಡಪಡಿತ್ತಾಯ ಉಪಸ್ಥಿತಿ ಬಗ್ಗೆಯೂ ಆಕ್ಷೇಪ ವ್ಯಕ್ತವಾಗಿತ್ತು‌. ನಾರಾಯಣ ಗುರುಗಳ ಪಠ್ಯ ಕೈ ಬಿಟ್ಟಿರುವ ಹಿನ್ನೆಲೆಯಲ್ಲೂ ಬಿಲ್ಲವ ಸಂಘಟನೆಗಳೂ ಪ್ರತಿಭಟನೆಗೆ ನಿರ್ಧರಿಸಿದ್ದವು.‌ ಆದರೆ ಕೊನೆಗೂ ಕಾನೂನು ಸುವ್ಯವಸ್ಥೆ ಹಿನ್ನೆಲೆ ಇಡೀ ಕಾರ್ಯಕ್ರಮ ರದ್ದು ಮಾಡಿರುವುದಾಗಿ ಆಯೋಜಕರು ತಿಳಿಸಿದ್ದಾರೆ.

ರೋಹಿತ್ ನಾಗರಿಕ ಸನ್ಮಾನಕ್ಕೆ ಆಕ್ಷೇಪ ಯಾಕೆ?: ನಾರಾಯಣ ಗುರು, ಕಯ್ಯಾರ ಕಿಂಞ್ಞಣ್ಣ ರೈ, ಕುವೆಂಪು, ಬಸವಣ್ಣನವರಿಗೆ ಅವಮಾನಿಸಿದ ರೋಹಿತ್ ಚಕ್ರತೀರ್ಥಗೆ ಮಂಗಳೂರು ವಿ ವಿ ಕುಲಪತಿ ಯಡಪಡಿತ್ತಾಯ ಅಧ್ಯಕ್ಷತೆಯಲ್ಲಿ ಮಾಡುತ್ತಿರುವ ನಾಗರಿಕ ಸನ್ಮಾನ ಕಾರ್ಯಕ್ರಮ ಮಂಗಳೂರು ನಾಗರಿಕರಿಗೆ ಅವಮಾನ ಎನ್ನುವುದು ಎಡಪಂಥೀಯ ಸಂಘಟನೆಗಳ ವಾದ‌‌. ಹೀಗಾಗಿ ಈ ಸನ್ಮಾನ ಕಾರ್ಯಕ್ರಮ ರದ್ದು ಪಡಿಸಲು ಆಗ್ರಹಿಸಿ ಶನಿವಾರ ಸಂಜೆ ಡೊಂಗರಕೇರಿಯ ಕೆನರಾ ಹೈಸ್ಕೂಲ್ ನಲ್ಲಿ ಸಂಜೆ 5 ಗಂಟೆಗೆ ನಡೆಯುವ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ದೇಶಪ್ರೇಮಿ ಸಂಘಟನೆಗಳು ಒಕ್ಕೂಟದ ಹೆಸರಿನಲ್ಲಿ ನಿರ್ಧರಿಸಲಾಗಿತ್ತು.‌ 

Mangaluru: ಉಳ್ಳಾಲ ಕಡಲಲ್ಲಿ ವಿದೇಶಿ ನೌಕೆ ಮುಳುಗಡೆ, ತೈಲ ಸೋರಿಕೆ ಭೀತಿ

ಡಿವೈಎಫ್ಐ, ಯವ ಕಾಂಗ್ರೆಸ್, ದಲಿತ ಸಂಘರ್ಷ ಸಮಿತಿ, ಸಿಐಟಿಯು, ಕಾಂಗ್ರೆಸ್ ಪಕ್ಷ, ಜಾತ್ಯಾತೀತ ಜನತಾ ದಳ, ಸಿಪಿಐಎಂ, ಭಾರತ ವಿದ್ಯಾರ್ಥಿ ಫೆಡರೇಷನ್ (SFI), NSUI ದಕ್ಷಿಣ ಕನ್ನಡ, ಮಾನವತಾ ವೇದಿಕೆ, ಅಖಿಲ ವಕೀಲರ ಭಾರತ ಸಂಘ, ಪ್ರಗತಿಪರ ಚಿಂತಕರ ವೇದಿಕೆ, ಜನವಾದಿ ಮಹಿಳಾ ಸಂಘ (JMS), ಸಿಪಿಐ ದಕ್ಷಿಣ ಕನ್ನಡ ಜಿಲ್ಲೆ, ನಾರಾಯಣ ಗುರು ಅಭಿಮಾನಿ ಬಳಗ ಮಂಗಳೂರು, AITUC ದ ಕ ಜಿಲ್ಲೆ, AIYF ದ.ಕ ಜಿಲ್ಲಾ ಸಮಿತಿ, ಭಗತ್ ಸಿಂಗ್ ಕ್ರಾಂತಿ ಬಳಗ, INTUC ದಕ್ಷಿಣ ಕನ್ನಡ ದೇಶಪ್ರೇಮಿ ಸಂಘಟನೆಗಳ ಒಕ್ಕೂಟದ ಹೆಸರಿನಲ್ಲಿ ಮುತ್ತಿಗೆ ಹಾಕಲು ನಿರ್ಧರಿಸಿತ್ತು. ಇದರಿಂದ ಕಾನೂನು ಸುವ್ಯವಸ್ಥೆ ಸಮಸ್ಯೆ ಸಾಧ್ಯತೆ ಹಿನ್ನೆಲೆ ಕಾರ್ಯಕ್ರಮ ರದ್ದು ಮಾಡಲಾಗಿದೆ.

click me!