ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಅಧಿಕೃತ ಚಾಲನೆ ಕೊಟ್ಟ ರಾಜವಂಶಸ್ಥ ಯದುವೀರ್‌: ಸಿಎಂ, ಡಿಸಿಎಂ ಪುಷ್ಪಾರ್ಚನೆ

By Sathish Kumar KH  |  First Published Oct 24, 2023, 5:30 PM IST

ವಿಶ್ವವಿಖ್ಯಾತ ಜಂಬೂ ಸವಾರಿಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನೀಡಿದರು. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ. ಶಿವಕುಮಾರ್‌ ಪುಷ್ಪಾರ್ಚನೆ ನೆರವೇರಿಸಿದರು.


ಮೈಸೂರು (ಅ.24): ನಾಡ ಹಬ್ಬ ವಿಶ್ವವಿಖ್ಯಾತ ಜಂಬೂ ಸವಾರಿಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನೀಡಿದರು. ಈ ವೆಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಪುಷ್ಪಾರ್ಚನೆ ನೆರವೇರಿಸಿ ಜಂಬೂ ಸವಾರಿಗೆ ಅಧಿಕೃತ ಚಾಲನೆ ನೀಡಿದರು. 

ಮೈಸೂರು ದಸರಾ ಅಂಗವಾಗಿ ಮಂಗಳವಾರ ಅರಮನೆಯ ಆವರಣದಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಚಾಲನೆ ನೀಡಿದರು. ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ನಡೆಯಲಿದ್ದು, ಇದರೊಂದಿಗೆ ಕಳೆದ ಹತ್ತು ದಿನಗಳಿಂದ ಸಾಂಪ್ರದಾಯಿಕವಾಗಿ ನಡೆಯುತ್ತಿರುವ ನಾಡಹಬ್ಬಕ್ಕೆ ತೆರೆ ಬೀಳಲಿದೆ. ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು, ಚಿನ್ನದ ಅಂಬಾರಿಯಲ್ಲಿ ಸಾಗುವ ನಾಡದೇವತೆ ಚಾಮುಂಡೇಶ್ವರಿಗೆ ಭಕ್ತಿಭಾವದಿಂದ ನಮಿಸಲು ದೇಶ-ವಿದೇಶಗಳ ಸಹಸ್ರಾರು ಪ್ರವಾಸಿಗರು ಸಾಂಸ್ಕೃತಿಕ ನಗರಿಯತ್ತ ಧಾವಿಸಿದ್ದಾರೆ. ಜಂಬೂಸವಾರಿ ವೀಕ್ಷಣೆಗೆ ಆಗಮಿಸುವ ಅತಿ ಗಣ್ಯರು, ಗಣ್ಯರು, ಆಹ್ವಾನಿತರು, ಗೋಲ್ಡ್‌ ಕಾರ್ಡ್‌ ಹಾಗೂ ಟಿಕೆಟ್‌ ಹೊಂದಿರುವವರಿಗೆ ಅರಮನೆ ಆವರಣದಲ್ಲಿ ಆಸನದ ವ್ಯವಸ್ಥೆ ಮಾಡಲಾಗಿದೆ.

Tap to resize

Latest Videos

ಶಿವಮೊಗ್ಗ: ದಸರಾ ಮೆರವಣಿಗೆಗೆ ಬಂದ ಹೆಣ್ಣಾನೆಗೆ ಹೆರಿಗೆಯ ಸಂಭ್ರಮ..!

ರಾಜಮಾರ್ಗದಲ್ಲಿ ಅಭಿಮನ್ಯು ಗಂಭೀರ ನಡಿಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ 1.46 ರಿಂದ 2.08 ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಿದರು. ಈ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು. ನಂತರ, ಅಭಿಮನ್ಯು ಆನೆಯ ಮೇಲೆ ಅಂಬಾರಿಯನ್ನು ಕೂರಿಸಲಾಯಿತು. ನಂತರ ಸಂಜೆ 4.40 ರಿಂದ 5 ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಅರಮನೆ ಒಳಾವರಣದ ವಿಶೇಷ ವೇದಿಕೆಯಲ್ಲಿ ನಿಂತು ಗಜರಾಜ ಅಭಿಮನ್ಯು ಹೊತ್ತುಬಂದ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿರುವ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಸುಮಾರು 5.10ಕ್ಕೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಮೈಸೂರು ಮೇಯರ್‌, ಜಿಲ್ಲಾಧಿಕಾರಿ, ಪೊಲೀಸ್‌ ಕಮಿಷನರ್‌ ಕೂಡ ಉಪಸ್ಥಿತರಿದ್ದರು.

click me!