ಗೃಹಲಕ್ಷ್ಮಿ-ಗೃಹಜ್ಯೋತಿ ದುರ್ಬಳಕೆಯಿಂದ ಸರ್ಕಾರಕ್ಕೆ 100 ಕೋಟಿ ನಷ್ಟ, ಇನ್ಮುಂದೆ ಎಲ್ಲರಿಗೂ ಸಿಗಲ್ಲ ಗ್ಯಾರಂಟಿ! ಸರ್ಕಾರದ ಮಾಸ್ಟರ್ ಪ್ಲಾನ್ ಏನು?

Kannadaprabha News   | Kannada Prabha
Published : May 26, 2026, 05:10 AM IST
Rs 100Cr Loss in guaratntee scheme karnataka Govt to Trim Beneficiary List

ಸಾರಾಂಶ

ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆಗಳಲ್ಲಿನ ದುರ್ಬಳಕೆ ಮತ್ತು ಹಣ ಸೋರಿಕೆ ತಡೆಯಲು ಸರ್ಕಾರ ಮುಂದಾಗಿದೆ. ಮೃತಪಟ್ಟವರು ಮತ್ತು ಅನರ್ಹರ ಹೆಸರಿನಲ್ಲಿ ಹಣ ದುರ್ಬಳಕೆಯಾಗುತ್ತಿದ್ದು, ಇದನ್ನು ತಪ್ಪಿಸಲು ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಿ, ಹೊಸದಾಗಿ ಅರ್ಜಿ ಪಡೆಯಲು ಸರ್ಕಾರ ಚಿಂತನೆ.

ಬೆಂಗಳೂರು (ಮೇ.26): ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗಷ್ಟೇ ದೊರೆಯುವಂತೆ ಮಾಡಲು ಎರಡು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಸರ್ಕಾರ ಚಿಂತನೆ ನಡೆಸಿದೆ.

ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳನ್ನು ಅರ್ಹರಲ್ಲದವರೂ ಪಡೆಯುತ್ತಿದ್ದು, ಫಲಾನುಭವಿಗಳ ಪಟ್ಟಿ ಪರಿಷ್ಕರಿಸುವಂತೆ ಭಾನುವಾರದ ಶಾಸಕರ ಸಭೆಯಲ್ಲಿ ಸಲಹೆಗಳು ಬಂದಿವೆ. ಅದರಲ್ಲೂ, ಫಲಾನುಭವಿಗಳ ಹಾಲಿ ಪಟ್ಟಿಯಲ್ಲಿ ಕೆಲವರು ಮೃತಪಟ್ಟಿದ್ದಾರೆ, ಬೇರೆಯವರು ಅವರ ಹೆಸರಿನಲ್ಲಿ ಸಹಾಯಧನ ಪಡೆಯುತ್ತಿದ್ದಾರೆ. ಹಾಗೆಯೇ, ಅರ್ಹರ ಹೆಸರಿನಲ್ಲಿ ಬೇರೆಯವರು ನೋಂದಣಿ ಮಾಡಿ ಯೋಜನೆ ಲಾಭ ಪಡೆಯುತ್ತಿದ್ದಾರೆ. ಈ ದುರ್ಬಳಕೆಯಿಂದಾಗಿ ಸರ್ಕಾರಕ್ಕೆ ಮಾಸಿಕ 100 ಕೋಟಿ ರು.ಗೂ ಹೆಚ್ಚಿನ ಸೋರಿಕೆಯಾಗುತ್ತಿದೆ. ಇದನ್ನು ತಪ್ಪಿಸಲು ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳ ಫಲಾನುಭವಿಗಳಿಂದ ಹೊಸದಾಗಿ ಅರ್ಜಿ ಪಡೆಯುವ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಈ ಕುರಿತು ಶೀಘ್ರದಲ್ಲಿ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆಗಳಿವೆ.

ಇದಕ್ಕೆ ಸಂಬಂಧಿಸಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಗ್ಯಾರಂಟಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಣೆ ಮಾಡುವ ಅಗತ್ಯವಿದ್ದು, ಈ ಕುರಿತು ಪರಿಶೀಲನೆ ಮಾಡುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳ ಕೆಲ ಫಲಾನುಭವಿಗಳು ಮೃತಪಟ್ಟಿದ್ದು, ಸುಮಾರು 100 ಕೋಟಿಯಷ್ಟು ಹಣ ಬೇರೆಯವರ ಖಾತೆಗೆ ಹೋಗಿ ದುರ್ಬಳಕೆಯಾಗುತ್ತಿದೆ. ಇನ್ನು ದೂರವಾಣಿ ಸಂಖ್ಯೆ ಬದಲಿಸಲಾಗಿದ್ದು, ಅದರಿಂದ ನೈಜ ಫಲಾನುಭವಿಗಳಿಗೆ ಯೋಜನೆ ತಲುಪುತ್ತಿಲ್ಲ ಎಂಬ ದೂರುಗಳಿವೆ. ಈ ದುರ್ಬಳಕೆ ತಡೆಯಲು ಗ್ಯಾರಂಟಿ ಫಲಾನುಭವಿಗಳ ದಾಖಲೆ ಸಂಗ್ರಹಿಸುವ ಬಗ್ಗೆ ಸಲಹೆಗಳು ಬಂದಿವೆ. ಪ್ರತಿ ತಾಲೂಕಿನಲ್ಲೂ ಅದನ್ನು ಪರಿಶೀಲಿಸಲಾಗುತ್ತಿದೆ ಎಂದು ವಿವರಿಸಿದರು.

ಸುಮಾರು 100 ಕೋಟಿ ರು. ದುರ್ಬಳಕೆ ಆಗ್ತಿದೆ

ಗ್ಯಾರಂಟಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಣೆ ಮಾಡುವ ಅಗತ್ಯವಿದ್ದು, ಈ ಕುರಿತು ಪರಿಶೀಲನೆ ಮಾಡುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳ ಕೆಲ ಫಲಾನುಭವಿಗಳು ಮೃತಪಟ್ಟಿದ್ದು, ಸುಮಾರು 100 ಕೋಟಿಯಷ್ಟು ಹಣ ಬೇರೆಯವರ ಖಾತೆಗೆ ಹೋಗಿ ದುರ್ಬಳಕೆಯಾಗುತ್ತಿದೆ.

- ಡಿ.ಕೆ. ಶಿವಕುಮಾರ್‌, ಡಿಸಿಎಂ

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕ ವಿದ್ಯುತ್‌ ವಿತರಣೆ ಖಾಸಗಿಗೆ? 15 ಜಿಲ್ಲೆಗಳ ವಿತರಣೆಗೆ ಅನುಮತಿ ಕೋರಿ KERCಗೆ ಟಾಟಾ ಅರ್ಜಿ, ಖಾಸಗೀಕರಣಕ್ಕೆ ನೌಕರರು ಗರಂ
BREAKING: ಬೆಂಗಳೂರು ಸೇರಿದಂತೆ ರಾಜ್ಯದ 6 ಜಿಲ್ಲೆಗಳಿಗೆ ಮುಂದಿನ 3 ಗಂಟೆ 'ಯಲ್ಲೋ ಅಲರ್ಟ್'; ಹಾಸನಕ್ಕೆ ಆರೆಂಜ್ ಅಲರ್ಟ್