
ಬೆಂಗಳೂರು (ನ.4): ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ವ್ಯಾಪ್ತಿಯ ಮುಖ್ಯ ಮತ್ತು ಉಪಮಖ್ಯ ರಸ್ತೆಗಳ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲು ರೂಪಿಸಿರುವ ಸುಮಾರು 1,241.57 ಕೋಟಿ ರು. ಮೊತ್ತದ ಕ್ರಿಯಾ ಯೋಜನೆಗೆ ನಗರಾಭಿವೃದ್ಧಿ ಇಲಾಖೆ ಅನುಮೋದನೆ ನೀಡಿದೆ.
ಈ ಕಾಮಗಾರಿಗಳ ಕ್ರಿಯಾ ಯೋಜನೆಗೆ ತಗಲುವ ವೆಚ್ಚವನ್ನು ‘ವಿಶೇಷ ಮೂಲಭೂತ ಸೌಕರ್ಯಕ್ಕೆ ಬಂಡವಾಳ ಬೆಂಬಲ ಯೋಜನೆ’ಯಡಿ ರಾಜ್ಯ ಸರ್ಕಾದಿಂದ ಒದಗಿಸುವ ಅನುದಾನದಲ್ಲಿ ಭರಿಸಲು ಸೂಚಿಸಲಾಗಿದೆ.
ಜಿಬಿಎ ಮುಖ್ಯ ಆಯುಕ್ತರು ವೈಟ್ ಟಾಪಿಂಗ್ ಯೋಜನೆಗಳಡಿ, ಹೈ ಡೆನ್ಸಿಟಿ ಕಾರಿಡಾರ್ ಕ್ರಿಯಾ ಯೋಜನೆಗಳಡಿ ಹಾಗೂ ಬ್ಲಾಕ್ ಟಾಪಿಂಗ್ ಆದೇಶ ಸೇರಿದಂತೆ ಇತರೆ ಯಾವುದೇ ಕ್ರಿಯಾ ಯೋಜನೆಗಳಡಿ ಕೈಗೆತ್ತಿಕೊಳ್ಳದೇ ಇರುವ ಹಾಗೂ ಡಿಫ್ಯಾಕ್ಟ್ ಲಯಾಬಿಲಿಟಿ ಪಿರಿಯಡ್(ಡಿಎಲ್‌ಪಿ) ಮುಕ್ತಾಯಗೊಂಡಿರುವ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳು ಈ ಕ್ರಿಯಾ ಯೋಜನೆಯಿಂದ ಕೈಬಿಟ್ಟು ಹೋಗಿದ್ದಲ್ಲಿ ಅಂತಹ ಪ್ರತಿಯೊಂದು ಮುಖ್ಯ ಮತ್ತು ಉಪಮುಖ್ಯ ರಸ್ತೆಗಳನ್ನು ಸಂಬಂಧಪಟ್ಟವರಿಂದ ಮತ್ತೊಮ್ಮೆ ದೃಢೀಕರಣ ಪಡೆದು ಸರ್ಕಾರಕ್ಕೆ ಸಲ್ಲಿಸಿ ಅಂತಿಮ ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯಬೇಕು.
ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸುವ ಸಂದರ್ಭದಲ್ಲಿ 1,241.57 ಕೋಟಿ ರು. ಮಿತಿಯೊಳಗೆ ಸಲ್ಲಿಸುವುದು ಹಾಗೂ ಯಾವ ರಸ್ತೆಗಳನ್ನು ಕೈಬಿಟ್ಟು/ ಯಾವ ರಸ್ತೆಗಳನ್ನು ಕೈಗೆತ್ತಿಕೊಳ್ಳಬೇಕು ಎಂಬುದನ್ನು ವಿಧಾನಸಭಾ ಕ್ಷೇತ್ರವಾರು ಸರಿದೂಗಿಸಿ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ