ರಾಜ್ಯಕ್ಕೆ ವಕ್ಕರಿಸಿದ ಕೊರೋನಾ ವಿರುದ್ಧ ಹೋರಾಟಕ್ಕೆ ಉದ್ಯಮಿಗಳು, ಮಠಗಳು ,ಜನಪ್ರತಿನಿಧಿಗಳು ಮತ್ತು ಸೆಲೆಬ್ರಿಟಿಗಳು ಕೈ ಜೋಡಿಸಿದ್ದಾರೆ. ಹಾಗಾದ್ರೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹರಿದುಬಂದ ಹಣವೆಷ್ಟು..?
ಬೆಂಗಳೂರು, (ಏ.15): ಕೊರೋನಾ ಸೋಂಕನ್ನು ನಿಯಂತ್ರಿಸಲು ಬಿಎಸ್‌ವೈ ನೇತೃತ್ವದ ಬಿಎಸ್‌ವೈ ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದೆ. ಅಲ್ಲದೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ಇದಕ್ಕೆ ಯಡಿಯೂರಪ್ಪ ಆರ್ಥಿಕ ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮನವಿ ಮೇರೆಗೆ ಉದ್ಯಮಿಗಳು, ಸೆಲೆಬ್ರಿಟಿಗಳು, ಜನಪ್ರತಿನಿಧಿಗಳು, ಮಠಾಧೀಶರು ಕೈ ಜೋಡಿಸಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆಯನ್ನು ನೀಡುತ್ತಿದ್ದಾರೆ.
ಇದೀಗ ಖಾತೆಗೆ ಜಮೆಯಾಗಿರುವ ಮೊತ್ತದ ಬಗ್ಗೆ ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಟ್ಟಾರೆ 138 ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ತಿಳಿಸಿದ್ದಾರೆ.
ಮಾರ್ಚ್ 27 ರಿಂದ ಏಪ್ರಿಲ್ 15ರ ವರೆಗೆ ಒಟ್ಟು 138,26,87,588 ರೂಪಾಯಿ ದೇಣಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯ ಖಾತೆಗೆ ಜಮೆಯಾಗಿದೆ.
ಇದರಲ್ಲಿ 137,39,87,587 ರೂಪಾಯಿ ಮೊತ್ತ ನೇರವಾಗಿ ಜಮೆಯಾಗಿದ್ದರೆ, ಚೆಕ್ ಮೂಲಕ 87 ಲಕ್ಷ ರೂಪಾಯಿ ಸಿಎಂ ಪರಿಹಾರ ನಿಧಿಗೆ ದೇಣಿಗೆ ಸಂಗ್ರಹವಾಗಿದೆ ಬಿಎಸ್‌ವೈ ಮಾಹಿತಿ ನೀಡಿದ್ದಾರೆ.
ಕೊರೋನಾ ಪರಿಸ್ಥಿತಿಯಲ್ಲಿ ಕರ್ನಾಟಕ ಸರ್ಕಾರದಲ್ಲಿ ಆರ್ಥಿಕ ಮುಗ್ಗಟ್ಟು ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಿಡಿಎ ವ್ಯಾಪ್ತಿಯ 12 ಸಾವಿರ ಸಿಎ ಸೈಟ್ ಹರಾಜಿಗೆ ನಿರ್ಧಾರ ಮಾಡಿದೆ. ಈ ಸಿಎ ಸೈಟ್ ಹರಾಜಿನಿಂದ 14-15 ಸಾವಿರ ಕೋಟಿ ರೂ. ಆದಾಯ ನಿರೀಕ್ಷೆ ಇಟ್ಟುಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ