* ಮೋದಿ ಕಾರ್ಯಕ್ರಮಕ್ಕೆ 25 ಕೋಟಿ ರೂಪಾಯಿ ವೆಚ್ಚ
* ಮೈಸೂರಿನಲ್ಲಿ ಮಾಹಿತಿ ನೀಡಿದ ಸಚಿವ ಸೋಮಶೇಖರ್
* ಒಂದು ದಿನ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದ ಪ್ರಧಾನಿ ನರೇಂದ್ರ ಮೋದಿ
ಮೈಸೂರು, (ಜೂನ್.22): ಪ್ರಧಾನಿ ನರೇಂದ್ರ ಮೋದಿ ಅವರ ಮೈಸೂರು ಕಾರ್ಯಕ್ರಮಲ್ಲಿ ಬರೊಬ್ಬರಿ 25ಕೋಟಿ ರೂ. ಖರ್ಚು ಮಾಡಲಾಗಿದೆ.ಈ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಟಿ ಸೋಮಶೇಖರ್ ಅವರು ಮಾಹಿತಿ ನೀಡಿದ್ದಾರೆ.
ಇಂದು(ಬುಧವಾರ) ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಯೋಗ ಕಾರ್ಯಕ್ರಮದ ಯಶಸ್ಸು ಕಂಡ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಆಯೋಜನೆ ಮೂಲಕ ಕೃತಜ್ಞತೆ ಸಲ್ಲಿಸಿದರು. ಜನಪ್ರತಿನಿಧಿಗಳು, ಪೊಲೀಸ್ ಇಲಾಖೆ, ಪಾಲಿಕೆ ಸಿಬ್ಬಂದಿ, ಜಿಲ್ಲಾಡಳಿತಕ್ಕೆ ಕೃತಜ್ಞತೆ ಹೇಳಿದರು.
undefined
ಜನಪ್ರತಿನಿಧಿಗಳು, ಪೊಲೀಸ್ ಇಲಾಖೆ, ಪಾಲಿಕೆ ಸಿಬ್ಬಂದಿ, ಜಿಲ್ಲಾಡಳಿತಕ್ಕೆ ಕೃತಜ್ಞತೆ ಹೇಳಿದರು. ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಗೆ ಹೂಗುಚ್ಛ ನೀಡಿ ಸಚಿವರಿಂದ ಅಭಿನಂದನೆ ಸಲ್ಲಿಸಲಾಯಿತು.
‘ಮೋದಿ ಸಂಚರಿಸಿದ ಹಾದಿ’ಗೆ ಟಾರು ಹಾಕಲು 23 ಕೋಟಿ ರು. ವ್ಯಯಿಸಿದ ಬಿಬಿಎಂಪಿ
ವಿಶೇಷವಾಗಿ ಮೈಸೂರಿನ ಜನತೆಗೆ ಅಭಿನಂದನೆ ಸಲ್ಲಿಸಬೇಕು. ಭದ್ರತೆಯ ದೃಷ್ಟಿಯಿಂದ ರಸ್ತೆಗಳನ್ನ ಕೆಲವೆಡೆ ಬಂದ್ ಮಾಡಲಾಗಿತ್ತು. ಈ ನಡುವೆಯೂ ಮೈಸೂರಿನ ಜನತೆ ಸಹಕಾರ ನೀಡಿದ್ದಾರೆ. ಮುಖ್ಯಮಂತ್ರಿಗಳಿಂದಲೂ ಎಲ್ಲಾ ರೀತಿಯ ಸಹಕಾರ ದೊರೆತಿದೆ ಎಂದರು. ಇದೇ ವೇಳೆ ಒಟ್ಟಾರೆ ಕಾರ್ಯಕ್ರಮವು ಸುಮಾರು 25 ಕೋಟಿ ರೂಪಾಯಿ ವೆಚ್ಚದಲ್ಲಿ ಜರುಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸಚಿವರು ಮಾಹಿತಿ
ನೀಡಿದರು.
ಬೆಂಗಳೂರಿನಲ್ಲಿ 23 ಕೋಟಿ ಖರ್ಚು
ಹೌದು..ಮೈಸೂರಿನಲ್ಲಿ ಮೋದಿಗಾಗಿ 25 ಕೋಟಿ ರೂ. ಖರ್ಚು ಮಾಡಿದ್ರೆ, ಇತ್ತ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ನಿಮಿತ್ತ ಬೆಂಗಳೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂಚರಿಸುವ ಬೆಂಗಳೂರು ರಸ್ತೆಗಳ ಡಾಂಬರೀಕರಣ ಸೇರಿದಂತೆ ಅಭಿವೃದ್ಧಿ ಕಾಮಗಾರಿಗೆ 23 ಕೋಟಿ ರು.ಗಳನ್ನು ಬಿಬಿಎಂಪಿಯಿಂದ ವೆಚ್ಚ ಮಾಡಲಾಗಿದೆ ಎಂದು ಬಿಬಿಎಂಪಿ ಯೋಜನಾ ವಿಭಾಗದ ವಿಶೇಷ ಆಯುಕ್ತ ರವೀಂದ್ರ ತಿಳಿಸಿದ್ದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ನಗರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಬಳ್ಳಾರಿ ರಸ್ತೆ, ತುಮಕೂರು ರಸ್ತೆ, ಕೊಮ್ಮಘಟ್ಟರಸ್ತೆ, ಬೆಂಗಳೂರು ವಿವಿ ರಸ್ತೆ ಹಾಗೂ ಮೈಸೂರು ರಸ್ತೆಗಳನ್ನು ದುರಸ್ತಿ ಮಾಡಲಾಗಿದೆ. ಒಟ್ಟು 14 ಕಿ.ಮೀ ಉದ್ದದ ರಸ್ತೆಯ ಡಾಂಬರೀಕರಣ, ಚರಂಡಿ ಸ್ವಚ್ಛಗೊಳಿಸುವುದು, ಬೀದಿ ದೀಪ ಅಳವಡಿಕೆ ಸೇರಿ ಇನ್ನಿತರ ಕೆಲವನ್ನೂ ಮಾಡಲು 23 ಕೋಟಿ ರು. ವೆಚ್ಚ ಮಾಡಲಾಗಿದೆ ಎಂದಿದ್ದರು.
ಮೈಸೂರು ಹಾಗೂ ಬೆಂಗಳೂರು ಎರಡೂ ಕಡೆ ಸೇರಿ ಒಟ್ಟು 48 ಕೋಟಿ ರೂ ಖರ್ಚು ಮಾಡಲಾಗಿದೆ.