ಪೊಲೀಸ್ ಅಧಿಕಾರಿಗಳ ಕ್ರೀಡಾಕೂಟಕ್ಕೆ ₹6 ಕೋಟಿ ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ: ಸಚಿವ ಪರಮೇಶ್ವರ!

Published : Feb 01, 2025, 08:06 PM IST
ಪೊಲೀಸ್ ಅಧಿಕಾರಿಗಳ ಕ್ರೀಡಾಕೂಟಕ್ಕೆ ₹6 ಕೋಟಿ ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ: ಸಚಿವ ಪರಮೇಶ್ವರ!

ಸಾರಾಂಶ

ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟ 2024ರ ಸಮಾರೋಪ ಸಮಾರಂಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ₹6 ಕೋಟಿ ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಸೇರಿದಂತೆ ವಿವಿಧ ಕ್ರೀಡಾ ಸವಲತ್ತುಗಳನ್ನು ಘೋಷಿಸಿದರು. ಕರ್ತವ್ಯದಲ್ಲಿನ ಒತ್ತಡ ನಿರ್ವಹಣೆಗೆ ಕ್ರೀಡೆ ಸಹಕಾರಿ ಎಂದರು.

ಬೆಂಗಳೂರು (ಫೆ.1): ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ 6 ಕೋಟಿ ರೂ. ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಸೇರಿದಂತೆ ವಿವಿಧ ಕ್ರೀಡಾ ಸವಲತ್ತುಗಳನ್ನು ಕಲ್ಪಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ಬೆಂಗಳೂರು ನಗರ ಪೊಲೀಸ್ ವತಿಯಿಂದ ಆಡುಗೋಡಿಯ ಸಿಎಆರ್ ಮೈದಾನದಲ್ಲಿ ನಡೆದ ಬೆಂಗಳೂರು ನಗರ ಪೊಲೀಸ್ "ವಾರ್ಷಿಕ ಕ್ರೀಡಾಕೂಟ 2024" ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಪೊಲೀಸ್ ಕ್ರೀಡಾಪಟುಗಳಿಗೆ ಹಾಗೂ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು. ಈಗಾಗಲೇ 3 ಕೋಟಿ ರೂ. ಅನುದಾನ ನೀಡಲಾಗಿದೆ. ಬಜೆಟ್‌ನಲ್ಲಿ ಇನ್ನುಳಿದ ಅನುದಾನವನ್ನು ನೀಡಲಾಗುವುದು. ಸರ್ಕಾರವು ಮುಂದಿನ ದಿನಗಳಲ್ಲಿ ಪೊಲೀಸರಿಗೆ ಹೆಚ್ಚಿನ ಸವಲತ್ತುಗಳನ್ನು ಕಲ್ಪಿಸುತ್ತದೆ ಎಂದು ಹೇಳಿದರು.

ದೇಶದ ಬೇರೆ ಮಹಾನಗರ ಪೊಲೀಸರಿಗಿಂತ ಬೆಂಗಳೂರು ನಗರ ಪೊಲೀಸ್ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ.  ಕರ್ನಾಟಕ ಪೊಲೀಸರು ಇನ್ನು ಹೆಚ್ಚಿನ ರೀತಿಯಲ್ಲಿ ಸಮರ್ಥವಾಗಿ ಕೆಲಸ ಮಾಡಬೇಕಿದೆ ಎಂದು ನನಗೆ ಅನ್ನಿಸುತ್ತದೆ. ದಕ್ಷತೆ‌ ಮತ್ತು ಪ್ರಾಮಾಣಿಕತೆಯಲ್ಲಿ ಕರ್ನಾಟಕ‌ ಪೊಲೀಸ್ ಎರಡನೇ ಸ್ಥಾನದಲ್ಲಿದೆ‌ ಎಂಬುದನ್ನು ರಾಷ್ಟ್ರಮಟ್ಟದ ಜಾಗರಣಾ ಪತ್ರಿಕೆ ವರದಿ ಮಾಡಿದೆ. ಇದು ಸಂತೋಷ ತಂದಿದೆಯಾದರು ಕರ್ನಾಟಕ ಪೊಲೀಸ್ ದೇಶದಲ್ಲಿ ಮೊದಲ ಸ್ಥಾನದಲ್ಲಿರಬೇಕು ಎಂದ ಅವರು, ಕರ್ತವ್ಯದ ವೇಳೆ ಪ್ರಾಣಾರ್ಪಣೆ ಮಾಡಿದ ಸಿಬ್ಬಂದಿಗಳನ್ನು ಸ್ಮರಿಸಿ, ಕೃತಜ್ಞತೆ ಸಲ್ಲಿಸಿದರು.

ಇದನ್ನೂ ಓದಿ: ಒಂದು ಕಾಲದ ಸ್ಟಾರ್ ನಟಿ; ಉದ್ಯಮಿ ಗಂಡ ಸಾವು, ಸಿಎಂ ಕೈ ಹಿಡಿದ ನಂತರ ಶತಕೋಟಿ ಒಡತಿ!

ಉತ್ತಮ ಆರೋಗ್ಯ ಮತ್ತು ದೈಹಿಕ ಸಾಮಾರ್ಥ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿಯಾಗಲಿದೆ. ಮಾನಸಿಕವಾಗಿ ಏಕತೆಯ ಭಾವನೆ ಮೂಡಿಸುತ್ತದೆ. ಕರ್ತವ್ಯದಲ್ಲಿನ ಮಾನಸಿಕ ಒತ್ತಡಗಳನ್ನು ತಡೆಯುವ ಶಕ್ತಿ ಕ್ರೀಡೆಯಿಂದ ಬರುತ್ತದೆ. ಜೀವನದಲ್ಲಿ ಅನೇಕ‌ಸಲ ಸೋಲು, ಗೆಲುವುಗಳನ್ನು ಕಾಣುತ್ತೇವೆ. ಸೋಲನ್ನು ಸ್ವೀಕರಿಸುವ ಶಕ್ತಿ ಕ್ರೀಡೆಯಿಂದ ಬರುತ್ತದೆ.  ಸ್ವತಃ ಕ್ರೀಡಾಪಟುವಾಗಿ ಇಂತಹ ಅನುಭವ ಕಂಡಿದ್ದೇನೆ ಎಂದರು. 

ಈ ಸಂದರ್ಭದಲ್ಲಿ ಗೃಹ ಸಚಿವರ ಶ್ರೀಮತಿ ಕನ್ನಿಕಾ ಪರಮೇಶ್ವರಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾದಂತಿದೆ ರಾಜ್ಯದ ಸ್ಥಿತಿ: ಎಂ.ಪಿ.ರೇಣುಕಾಚಾರ್ಯ ಟೀಕೆ
ಸಹವಾಸ, ಒತ್ತಾಯಕ್ಕೆ ಗಾಂಜಾ ಜಾಲಕ್ಕೆ ವಿದ್ಯಾರ್ಥಿಗಳು!