ಮೋಹನ್ ಭಾಗವತ್ ಧಾರವಾಡಕ್ಕೆ; ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಹೈ ಅಲರ್ಟ್!

Published : May 09, 2025, 06:11 PM ISTUpdated : May 09, 2025, 06:12 PM IST
ಮೋಹನ್ ಭಾಗವತ್ ಧಾರವಾಡಕ್ಕೆ; ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಹೈ ಅಲರ್ಟ್!

ಸಾರಾಂಶ

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರು ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವರ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಯೋಧರು ಮತ್ತು ಪೊಲೀಸರ ನೇತೃತ್ವದಲ್ಲಿ ಕಟ್ಟುನಿಟ್ಟಾದ ಭದ್ರತೆ ಒಡ್ಡಲಾಗಿತ್ತು.

ಬೆಳಗಾವಿ (ಮೇ.9): ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರು ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವರ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಯೋಧರು ಮತ್ತು ಪೊಲೀಸರ ನೇತೃತ್ವದಲ್ಲಿ ಕಟ್ಟುನಿಟ್ಟಾದ ಭದ್ರತೆ ಒಡ್ಡಲಾಗಿತ್ತು.

ಧಾರವಾಡಕ್ಕೆ ರಸ್ತೆ ಮಾರ್ಗದ ಪಯಣ: ಮೋಹನ್ ಭಾಗವತ್ ಅವರು ಬೆಳಗಾವಿಯಿಂದ ರಸ್ತೆ ಮಾರ್ಗದ ಮೂಲಕ ಧಾರವಾಡಕ್ಕೆ ತೆರಳಲಿದ್ದಾರೆ. ಧಾರವಾಡದಲ್ಲಿ ಎರಡು ದಿನ ತಂಗಲಿದ್ದು, ರಾಷ್ಟ್ರೋತ್ಥಾನ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲದೆ, ಆರ್‌ಎಸ್‌ಎಸ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ ಮೇಲೆ ಆಪರೇಷನ್‌ ಸಿಂದೂರ, ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದೇನು?

ಭಾಗವತ್ ಅವರ ಆಗಮ ನದ ವೇಳೆ  ಮಾಧ್ಯಮಗಳು ಆಪರೇಷನ್ ಸಿಂಧೂರ ಕುರಿತು ಪ್ರಶ್ನಿಸಿದಾಗ, ಅವರು, 'ಈ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿರೋಣ' ಎಂದಷ್ಟೇ ಹೇಳಿ ಹೊರಟರು.

ಹುಬ್ಬಳ್ಳಿಯಲ್ಲಿ ಹೈ ಅಲರ್ಟ್: 
ಭಾರತ-ಪಾಕಿಸ್ತಾನ ನಡುವಿನ ವಾಯುದಾಳಿ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ರೈಲ್ವೆ ರಕ್ಷಣಾ ಪಡೆ (RPF), ಸರ್ಕಾರಿ ರೈಲ್ವೆ ಪೊಲೀಸ್ (GRP), ಮತ್ತು ಡಾಗ್ ಸ್ಕ್ವಾಡ್‌ನಿಂದ ತೀವ್ರ ತಪಾಸಣೆ ನಡೆಯುತ್ತಿದೆ. ಪ್ರಯಾಣಿಕರ ಲಗೇಜ್‌ಗಳನ್ನು ಹ್ಯಾಂಡ್ ಹೆಲ್ಡ್ ಮೆಟಲ್ ಡಿಟೆಕ್ಟರ್, ಡೋರ್ ಫ್ರೇಮ್ ಮೆಟಲ್ ಡಿಟೆಕ್ಟರ್, ಮತ್ತು ಸ್ಕ್ಯಾನರ್‌ಗಳ ಮೂಲಕ ಪರಿಶೀಲಿಸಲಾಗುತ್ತಿದೆ. 

ಇದನ್ನೂ ಓದಿ: ಅಂಬೇಡ್ಕರ್ ಸೋಲಿಸಿದ್ದು ವೀರ್ ಸಾವರ್ಕರ್; ಬಾಬಾ ಸಾಹೇಬರ ಪತ್ರ ತೋರಿಸಿದ ಖರ್ಗೆ!

ರೈಲ್ವೆ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ಕೇಂದ್ರಗಳಲ್ಲಿ ಕಟ್ಟುನಿಟ್ಟಾದ ನಿಗಾ ವಹಿಸಲಾಗಿದ್ದು, ರೈಲು ಬೋಗಿಗಳ ಒಳಗೆ ಇಂಚಿಂಚು ತಪಾಸಣೆ ನಡೆಯುತ್ತಿದೆ. ಸುಮಾರು 50 ಪೊಲೀಸರು ಮತ್ತು 10 ಚೆಕ್‌ಪೋಸ್ಟ್‌ಗಳ ಮೂಲಕ ತಪಾಸಣೆ ಕಾರ್ಯ ನಡೆಸುತ್ತಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

20000 ರೈತರ ಜತೆ ಸೇರಿ ಡಿ. 9ಕ್ಕೆ ಸುವರ್ಣಸೌಧಕ್ಕೆ ಮುತ್ತಿಗೆ : ಬಿವೈವಿ
ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ