ಗುಬ್ಬಿ ಪಟ್ಟಣದಲ್ಲಿ ಪಥಸಂಚಲನ: ಮಳೆಗೂ ಜಗ್ಗದ ಆರೆಸ್ಸೆಸ್ ಶಿಸ್ತು!

Published : Oct 19, 2025, 08:24 PM IST
RSS path sanchalan in Gubbi

ಸಾರಾಂಶ

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ, ಭಾರೀ ಮಳೆಯ ನಡುವೆಯೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕರ್ತರು ಶಿಸ್ತುಬದ್ಧ ಪಥ ಸಂಚಲನ ನಡೆಸಿದರು. ಸುಮಾರು 400ಕ್ಕೂ ಹೆಚ್ಚು ಗಣವೇಶಧಾರಿಗಳು ಈ ಮಾರ್ಚ್‌ಫಾಸ್ಟ್‌ನಲ್ಲಿ ಭಾಗವಹಿಸಿ, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿದರು.

ತುಮಕೂರು (ಅ.19): ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದಲ್ಲಿ ಇಂದು ಮಳೆಯ ನಡುವೆಯೇ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕರ್ತರು ಪಥ ಸಂಚಲನ ನಡೆಸಿದರು.

ಗುಬ್ಬಿಯ ಜೂನಿಯರ್ ಕಾಲೇಜು ಮೈದಾನದಿಂದ ಆರಂಭಗೊಂಡ ಈ ಮಾರ್ಚ್‌ಫಾಸ್ಟ್ ಕೆನರಾ ಬ್ಯಾಂಕ್, ಟಿಪ್ಪು ಸರ್ಕಲ್ ಸೇರಿದಂತೆ ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಸಾಗಿತು. ಸುಮಾರು ೪೦೦ ಕ್ಕೂ ಹೆಚ್ಚು ಗಣವೇಶಧಾರಿಗಳು ಪಥ ಸಂಚಲನದಲ್ಲಿ ಭಾಗವಹಿಸಿದರು.

ಇದನ್ನೂ ಓದಿ: ಸಚಿವ ಪ್ರಿಯಾಂಕ್ ಸುದ್ದಿಗೋಷ್ಠಿ: 11 ಪ್ರಶ್ನೆಗಳಿಗೆ ಉತ್ತರ ಕೊಟ್ಟು ಪಥಸಂಚಲನ ಮಾಡಿ..

ಮಳೆಯ ನಡುವೆಯೂ ಪಥಸಂಚಲನ:

ಸಮಾವೇಶ ನಡೆಯುತ್ತಿದ್ದಂತೆಯೇ ಧೋ ಧೋವಾಗಿ ಮಳೆ ಸುರಿದರೂ ಕಾರ್ಯಕರ್ತರು ಹಿಂದೆ ಸರಿಯದೆ, ಆರ್‌ಎಸ್‌ಎಸ್ ಗೀತೆ ಹಾಡುತ್ತಾ ಶಿಸ್ತಿನಿಂದ ಪಥ ಸಂಚಲನ ಮುಂದುವರೆಸಿದರು.

ಈ ವೇಳೆ ಸ್ಥಳೀಯರು ಹಾಗೂ ಸಾರ್ವಜನಿಕರು ಪಥ ಸಂಚಲನ ವೀಕ್ಷಿಸಿ ಹರ್ಷ ವ್ಯಕ್ತಪಡಿಸಿದರು. ಪಟ್ಟಣದಾದ್ಯಂತ ಭದ್ರತಾ ಕ್ರಮ ಕೈಗೊಳ್ಳಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್
ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?