ಆರ್‌ಎಸ್‌ಎಸ್‌ ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು: ಬಿ ಕೆ ಹರಿಪ್ರಸಾದ್!

Published : Oct 12, 2025, 03:07 PM IST
b k hariprasad

ಸಾರಾಂಶ

ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್, ಆರ್‌ಎಸ್‌ಎಸ್ ಸಂಘಟನೆಯು ಅನುಮತಿಯಿಲ್ಲದೆ ಸರ್ಕಾರಿ ಜಾಗಗಳಲ್ಲಿ ಶಾಖೆಗಳನ್ನು ನಡೆಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಆರ್‌ಎಸ್‌ಎಸ್‌ ಅನ್ನು 'ಭಾರತದ ತಾಲಿಬಾನಿಗಳು' ಎಂದು ಕರೆದಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ರಾಜ್ಯದಲ್ಲಿ ಆರ್‌ಎಸ್‌ಎಸ್ ಸಂಘಟನೆಯ ಶಾಖೆ ಚಟುವಟಿಕೆಗಳ ಬಗ್ಗೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಜಾಗಗಳಲ್ಲಿ ಯಾವುದೇ ರೀತಿಯ ಕಾರ್ಯಕ್ರಮ ನಡೆಸುವ ಮೊದಲು ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಹರಿಪ್ರಸಾದ್ ಅವರು ಮಾತನಾಡುತ್ತಾ, “ಆರ್‌ಎಸ್‌ಎಸ್ ಸಂಘಟನೆ ಕರ್ನಾಟಕ ರಾಜ್ಯದಾದ್ಯಂತ ನಿರಂತರವಾಗಿ ಶಾಖೆಗಳನ್ನು ನಡೆಸುತ್ತಿದೆ. ಆದರೆ ಈ ಕಾರ್ಯಕ್ರಮಗಳಿಗೆ ಯಾವುದೇ ಅಧಿಕೃತ ಅನುಮತಿ ಪಡೆಯದೆ ಸರ್ಕಾರಿ ಜಾಗಗಳನ್ನು ಬಳಸುತ್ತಿರುವುದು ಕಾನೂನು ಉಲ್ಲಂಘನೆ,” ಎಂದು ಆರೋಪಿಸಿದರು.

RSS ಭಾರತ ದೇಶದ ತಾಲಿಬಾನಿಗಳು: ಬಿ.ಕೆ. ಹರಿಪ್ರಸಾದ್ ಕಿಡಿ

ಹರಿಪ್ರಸಾದ್ ಅವರು ತಮ್ಮ ಪ್ರತಿಕ್ರಿಯೆಯಲ್ಲಿ ಆರ್‌ಎಸ್‌ಎಸ್ ವಿರುದ್ಧ ಕಟುವಾಗಿ ಮಾತನಾಡುತ್ತಾ, “ಆರ್‌ಎಸ್‌ಎಸ್ ಅವರು ಭಾರತ ದೇಶದ ತಾಲಿಬಾನಿಗಳು. ಅವರು ಸರಕಾರದಲ್ಲಿ ನೋಂದಾಯಿಸದ ಸಂಘಟನೆ. ನಾವು ಇಷ್ಟೆಲ್ಲ ಹೇಳುತ್ತಿದ್ದೇವೆ — ಅವರು ತಮ್ಮ ಸಂಸ್ಥೆ ರಿಜಿಸ್ಟರ್ ಆಗಿರುವುದನ್ನು ತೋರಿಸಲಿ. ನೋಂದಣಿ ಇಲ್ಲದೆ ಇಷ್ಟು ವರ್ಷಗಳಿಂದ ಸರ್ಕಾರಿ ಜಾಗಗಳಲ್ಲಿ ಚಟುವಟಿಕೆ ನಡೆಸುತ್ತಿದ್ದಾರೆ,” ಎಂದು ಪ್ರಶ್ನಿಸಿದರು.

ಅವರು ಮುಂದುವರಿಸಿ, ಪ್ಯಾಲೇಸ್ತೀನ್ ಪರವಾಗಿ ಪ್ರತಿಭಟನೆ ಮಾಡಿದರೆ ಪೊಲೀಸರಿಂದ ತಕ್ಷಣ ಬಂಧನವಾಗುತ್ತದೆ. ಆದರೆ ಆರ್‌ಎಸ್‌ಎಸ್ ಶಾಖೆಗಳನ್ನು ಸರ್ಕಾರಿ ಮೈದಾನಗಳಲ್ಲಿ ನಡೆಸಲು ಪೊಲೀಸರು ಅನುಮತಿ ನೀಡುತ್ತಾರೆ. ಇದೇಕೆ ಎಂಬುದನ್ನು ನಾನು ಪ್ರಶ್ನಿಸುತ್ತಿದ್ದೇನೆ ಎಂದು ಹೇಳಿದರು.

ತಮಿಳುನಾಡಿನಲ್ಲಿ ಕ್ರಮ, ಕರ್ನಾಟಕದಲ್ಲೂ ಜಾರಿಗೆ ಆಗ್ರಹ

ಹರಿಪ್ರಸಾದ್ ಅವರು ಉದಾಹರಣೆಗೆ ತಮಿಳುನಾಡನ್ನು ಉಲ್ಲೇಖಿಸಿ, ತಮಿಳುನಾಡಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮ ನಡೆಸಲು ಹೋದ ಆರ್‌ಎಸ್‌ಎಸ್ ಸದಸ್ಯರ ಮೇಲೆ ಸರ್ಕಾರ ಕ್ರಮ ತೆಗೆದುಕೊಂಡಿದೆ. ಅವರನ್ನು ಬಂಧಿಸಿ ಕೇಸ್‌ಗಳನ್ನೂ ದಾಖಲಿಸಲಾಗಿದೆ. ಇದೇ ರೀತಿಯ ಕ್ರಮವನ್ನು ಕರ್ನಾಟಕದಲ್ಲಿಯೂ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸರ್ಕಾರಿ ಜಾಗಗಳಲ್ಲಿ ಯಾವುದೇ ರೀತಿಯ ಕಾರ್ಯಕ್ರಮ ಮಾಡಬೇಕಾದರೆ ಮೊದಲು ಸರ್ಕಾರದ ಅನುಮತಿ ಪಡೆಯಬೇಕು. ಅನುಮತಿ ಪಡೆದು ಮಾಡಿದರೆ ನಮಗೂ ಯಾವುದೇ ಅಭ್ಯಂತರ ಇಲ್ಲ. ಆದರೆ ಆರ್‌ಎಸ್‌ಎಸ್ ಶಾಖೆಗಳು ಹಲವು ವರ್ಷಗಳಿಂದ ಯಾವುದೇ ಅನುಮತಿ ಪಡೆಯದೇ ಕಾರ್ಯನಿರ್ವಹಿಸುತ್ತಿವೆ. ಲಾಠಿ ಮತ್ತು ತಲ್ವಾರ್ ಹಿಡಿದು ಸರ್ಕಾರಿ ಜಾಗಗಳಲ್ಲಿ ಶಾಖೆಗಳನ್ನು ನಡೆಸುತ್ತಿದ್ದಾರೆ ಎಂದು ಹರಿಪ್ರಸಾದ್ ಆರೋಪಿಸಿದರು.

ಭಜರಂಗ ದಳ ನಿಷೇಧ ಕುರಿತ ಪ್ರಣಾಳಿಕೆ ಸ್ಮರಿಸಿದ ಬಿಕೆಹೆಚ್

ಹರಿಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಸ್ಮರಿಸಿದರು. ನಾವು ಚುನಾವಣಾ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ಹೇಳಿದ್ದೇವೆ. ಭಜರಂಗದಳದಂತಹ ಸಂಘಟನೆಗಳ ಮೇಲೆ ನಿಷೇಧ ಹೇರಲಾಗುತ್ತದೆ. ಅದರ ಭಾಗವಾಗಿ ಸರ್ಕಾರಿ ಜಾಗಗಳಲ್ಲಿ ನಡೆಯುವ ಸಂಘಟನೆಗಳ ಚಟುವಟಿಕೆಗಳ ಮೇಲೂ ನಿಗಾ ಇರಿಸಲಾಗುತ್ತದೆ ಎಂದು ಹೇಳಿದರು.

ಬಿ.ಕೆ. ಹರಿಪ್ರಸಾದ್ ಹೇಳಿದ ಪ್ರಮುಖ ಅಂಶಗಳು:

  • ಬಿ.ಕೆ. ಹರಿಪ್ರಸಾದ್ ಅವರಿಂದ ಆರ್‌ಎಸ್‌ಎಸ್ ವಿರುದ್ಧ ತೀವ್ರ ಆಕ್ಷೇಪ
  • ಸರ್ಕಾರಿ ಜಾಗಗಳಲ್ಲಿ ಯಾವುದೇ ಕಾರ್ಯಕ್ರಮಕ್ಕೆ ಸರ್ಕಾರದ ಅನುಮತಿ ಕಡ್ಡಾಯ ಎಂದು ಸ್ಪಷ್ಟನೆ
  • RSS ಭಾರತ ದೇಶದ ತಾಲಿಬಾನಿಗಳು ಎಂದು ಕಿಡಿ
  • ಪ್ಯಾಲೇಸ್ತೀನ್ ಪ್ರತಿಭಟನೆ ಆರ್‌ಎಸ್‌ಎಸ್ ಶಾಖೆಗಳ ನಡುವೆ ತಾರತಮ್ಯ ಪ್ರಶ್ನೆ
  • ತಮಿಳುನಾಡಿನಲ್ಲಿ ಕೈಗೊಂಡ ಕ್ರಮದಂತೆ ಕರ್ನಾಟಕದಲ್ಲೂ ಕ್ರಮಕ್ಕೆ ಆಗ್ರಹ
  • ಭಜರಂಗದಳ ನಿಷೇಧದ ಪ್ರಣಾಳಿಕೆ ನೆನಪಿಸಿದ ಹರಿಪ್ರಸಾದ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌