
ಮೈಸೂರು (ಮೇ.21): ಕೊಟ್ಟ ಹಣವನ್ನು ವಾಪಸ್ ಕೇಳಿದ ವ್ಯಕ್ತಿಗೆ ಆರ್‌ಟಿಐ ಕಾರ್ಯಕರ್ತನೊಬ್ಬ ಭಯಾನಕ ಅನುಭವ ನೀಡಿದ ಘಟನೆ ಕುವೆಂಪುನಗರದಲ್ಲಿ ನಡೆದಿದೆ. ಜನನಿಬಿಡ ಪ್ರದೇಶದಲ್ಲೇ ಹಾಡಹಗಲೇ ನಡೆದ ಈ ಘಟನೆ ನೋಡಿದ ಜನರು ಬೆಚ್ಚಿಬಿದ್ದಿದ್ದಾರೆ.
ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ಧನಂಜಯ ಎಂಬುವವರು 50:50 ಅನುಪಾತದಡಿ ನಿವೇಶನ ಖರೀದಿಗೆ ಹಣ ನೀಡಿದ್ದರೆಂದು ಹೇಳಲಾಗಿದೆ. ಆದರೆ ಮುಡಾ ಹಗರಣ ಬೆಳಕಿಗೆ ಬಂದ ಬಳಿಕ 50:50 ಅನುಪಾತದಡಿ ನಿವೇಶನ ಮಂಜೂರು ಪ್ರಕ್ರಿಯೆ ರದ್ದಾಗಿತ್ತು. ಇದಾದ ಬಳಿಕ ತಾನು ಕೊಟ್ಟ ಹಣವನ್ನು ವಾಪಸ್ ನೀಡುವಂತೆ ಧನಂಜಯ ಹಲವು ದಿನಗಳಿಂದ ಒತ್ತಾಯಿಸುತ್ತಿದ್ದರೆಂದು ತಿಳಿದುಬಂದಿದೆ.
ಕಳೆದ ಹಲವು ದಿನಗಳಿಂದ ಹಣ ವಾಪಸ್ ಕೊಡುವಂತೆ ದುಂಬಾಲು ಬಿದಿದ್ದ ಧನಂಜಯ. ನಿನ್ನೆ ಸಬ್ ರಿಜಿಸ್ಟರ್ ಕಚೇರಿ ಬಳಿ ಗಂಗರಾಜು ಜೊತೆ ಗಲಾಟೆ ನಡೆದಿದೆ. ಇದೇ ವೇಳೆ ಗಂಗರಾಜು ಕಾರಿನಲ್ಲಿ ತೆರಳಲು ಮುಂದಾದಾಗ, ಹಣ ವಾಪಸ್ ಕೊಡಿಸುವಂತೆ ಒತ್ತಾಯಿಸಿ ಧನಂಜಯ ಕಾರಿನ ಬಾನೆಟ್ ಮೇಲೆ ಹತ್ತಿದ್ದಾನೆ ಎಂದು ಹೇಳಲಾಗಿದೆ.
ಬಾನೆಟ್ ಮೇಲೆಯೇ ಪೊಲೀಸ್ ಠಾಣೆವರೆಗೆ ಕಾರು ಚಾಲನೆ
ಇದಾದ ಬಳಿಕ ನಡೆದ ಘಟನೆಯ ದೃಶ್ಯಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ. ಕಾರಿನ ಬಾನೆಟ್ ಮೇಲೆ ಧನಂಜಯ ಅಂಟಿಕೊಂಡಿದ್ದರು, ಗಂಗರಾಜು ಸಬ್ ರಿಜಿಸ್ಟ್ರಾರ್ ಕಚೇರಿಯಿಂದ ಕುವೆಂಪು ನಗರ ಪೊಲೀಸ್ ಠಾಣೆ ವ್ಯಾಪ್ತಿವರೆಗೆ ವೇಗವಾಗಿ ಕಾರು ಚಲಾಯಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಇಬ್ಬರಿಂದಲೂ ದೂರು: ಪೊಲೀಸರ ತನಿಖೆ ಆರಂಭ
ಈ ಸಂಬಂಧ ಧನಂಜಯ ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮತ್ತೊಂದೆಡೆ ಗಂಗರಾಜು ಕೂಡ 'ಧನಂಜಯ ನನ್ನ ಮೇಲೆ ದಾಳಿ ಮಾಡಲು ಬಂದಿದ್ದರು. ಪ್ರಾಣರಕ್ಷಣೆಗಾಗಿ ಕಾರು ಚಲಾಯಿಸಿದೆ ಎಂದು ಪ್ರತಿದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಸಂಪೂರ್ಣ ಘಟನೆ ಕುರಿತು ತನಿಖೆ ಮುಂದುವರೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ