
ಹುಬ್ಬಳ್ಳಿ (ಆ.4): ಇಬ್ಬರು ಪುತ್ರರನ್ನು ಹೊಂದಿದ ತಾಯಿಗೆ ತವರಿಗೆ ಕರೆಸಿ ಉಡಿತುಂಬಿ, ಹಸಿರು ಸೀರೆ ಉಡಿಸಿ, ಹಸಿರು ಬಳೆ ತೊಡೆಸಬೇಕು. ಇಲ್ಲದಿದ್ದರೆ ಕೆಡುಕಾಗಲಿದೆ’. ಹೀಗೊಂದು ಗಾಳಿಸುದ್ದಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ವಾರದಿಂದ ವದಂತಿಯಾಗಿದೆ. ಈ ಸುದ್ದಿ ಹರಡಿದ್ದೇ ತಡ ಜನರು ಸೀರೆ ಅಂಗಡಿಗಳಿಗೆ ಮುಗಿಬೀಳುತ್ತಿದ್ದಾರೆ.
ಆದರೆ, ಇದನ್ನು ಯಾರು ಹೇಳಿದರು? ಏಕೆ ಆಚರಿಸಬೇಕು ಎಂಬ ಪ್ರಶ್ನೆಗಳಿಗೆ ಮಾತ್ರ ಉತ್ತರವಿಲ್ಲ. ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ತಾಯಿಯನ್ನು ತವರು ಮನೆಗೆ ಕರೆಸಿ ಹಸಿರು ಸೀರೆ, ಹಸಿರು ಬಳೆ ಉಡಿಸಿ, ಉಡಿತುಂಬಿ, ಆರತಿ ಮಾಡಿ ಕಳಿಸುವ ಕಾರ್ಯಕ್ರಮ ನಡೆಯುತ್ತಿದೆ.
ಬಾಂಧವ್ಯ ಗಟ್ಟಿಗೊಳ್ಳಲು ಸಹಕಾರಿ:
ಈ ರೀತಿಯ ನೆಪದಲ್ಲಾದರೂ ಹೆಣ್ಣು ಮಗಳು ತವರು ಮನೆಗೆ ಬಂದು ಅಲ್ಲಿ ನೀಡುವ ಉಡುಗೊರೆ ತೆಗೆದುಕೊಂಡು ತವರು ಮನೆಗೆ ಒಳಿತಾಗಲಿ ಎಂದು ಹರಸಿ ಹೋಗುತ್ತಾಳೆ. ಇದರಿಂದಾಗಿ ತವರು ಮನೆಯ ಸಂಬಂಧ ಗಟ್ಟಿಗೊಳ್ಳುತ್ತವೆ ಎಂಬುದಾಗಿ ಕೆಲ ಹಿರಿಯರು ಹೇಳಿದ್ದಾರೆ.
ಕಳೆದ 8-10 ವರ್ಷಗಳ ಹಿಂದೆ ಒಬ್ಬನೇ ಗಂಡು ಮಗನಿದ್ದರೆ ಬೆಳ್ಳಿ ಕಡಗ ಕೊಡಬೇಕೆಂಬ ವದಂತಿ ಹಬ್ಬಿತ್ತು. ಆಗ ಕೂಡ ಬಂಗಾರ, ಬೆಳ್ಳಿ ಅಂಗಡಿಗಳಿಗೆ ಭರ್ಜರಿ ವ್ಯಾಪಾರ ನಡೆದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ