
ಬೆಂಗಳೂರು(ಅ.04): ಉಸಿರಾಟದ ಸಮಸ್ಯೆ ಹಿನ್ನಲೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ನಿನ್ನೆ(ಮಂಗಳವಾರ) ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೌದು, ಸಾಲುಮರದ ತಿಮ್ಮಕ್ಕ ಅವರಿಗೆ ಉಸಿರಾಟದ ಸಮಸ್ಯೆ ಹಿನ್ನಲೆಯಲ್ಲಿ ಚಿಕಿತ್ಸೆಗೆಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಾಲುಮರದ ತಿಮ್ಮಕ್ಕ ಅವರಿಗೆ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು ತೀವ್ರನಿಗಾ ಘಟಕದಲ್ಲಿ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.
Chaitra Kundapur Case: ನನಗೂ ಗಗನ್ ಕಡೂರಿಗೂ ಸಂಬಂಧ ಇಲ್ಲ: ಸಾಲುಮರದ ತಿಮ್ಮಕ್ಕ
ತಿಮ್ಮಕ್ಕ ಅವರು ಬೆಂಗಳೂರಿನ ಬಾಡಿಗೆ ಮನೆಯಿಂದ ಬೇಲೂರಿಗೆ ಹೋಗಿ ವಾಸವಿದ್ದರು. ಬೆಂಗಳೂರು ಮನೆ ವಾಸಕ್ಕೆ ಸ್ವಲ್ಪ ಸಮಸ್ಯೆ ಎಂದು ಬೇಲೂರಿನಲ್ಲಿ ವಾಸವಿದ್ದರು. ಬೇಲೂರು ಮಲೆನಾಡಿನ ಪ್ರದೇಶ ಆಗಿರುವುದರಿಂದ ಕೋಲ್ಡ್ ಜಾಸ್ತಿಯಾಗಿದೆ. ಮೂರು ದಿನದಿಂದ ಸ್ವಲ್ಪ ಉಸಿರಾಟದ ಸಮಸ್ಯೆಯಾಗಿತ್ತು. ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ವಿ ಆದರೂ ಕಡಿಮೆಯಾಗಲಿಲ್ಲ. ನಿನ್ನೆ ಉಸಿರಾಟದ ಸಮಸ್ಯೆ ಜಾಸ್ತಿ ಆಯ್ತು. ಆದ್ದರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಮಧ್ಯಾಹ್ನ 2:30ಕ್ಕೆ ಅಡ್ಮಿಟ್ ಮಾಡಿದ್ದೇವೆ ಎಂದು ಸಾಲುಮರದ ತಿಮ್ಮಕ್ಕ ಅವರ ದತ್ತು ಪುತ್ರ ಬಳ್ಳೂರು ಉಮೇಶ್ ಮಾಹಿತಿ ನೀಡಿದ್ದಾರೆ.
ಡಾ.ರವೀಂದ್ರ ಮೆಹ್ತಾ ಅವರ ಟೀಮ್ ಸಾಲುಮರದ ತಿಮ್ಮಕ್ಕ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಸದ್ಯ ಸಾಲುಮರದ ತಿಮ್ಮಕ್ಕ ಅವರು ಚೇತರಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ