Saalumarada Thimmakka Passes Away: ಕನ್ನಡ ನಾಡಿನ ಹೆಮ್ಮೆಯ ಸಾಧಕಿ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ

Published : Nov 14, 2025, 12:29 PM ISTUpdated : Nov 14, 2025, 12:37 PM IST
Saalumarada Thimmakka

ಸಾರಾಂಶ

ಕನ್ನಡ ನಾಡಿನ ಹೆಮ್ಮೆಯ ಸಾಧಕಿ ಪದ್ಮ ಪ್ರಶಸ್ತಿ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ನವೆಂಬರ್ 2ರಿಂದ ಜಯನಗರ ಅಪೊಲೋ‌ ಆಸ್ಪತ್ರೆಯಲ್ಲಿ ತಿಮ್ಮಕ್ಕ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು

ಬೆಂಗಳೂರು: ಕನ್ನಡ ನಾಡಿನ ಹೆಮ್ಮೆಯ ಸಾಧಕಿ ಪದ್ಮ ಪ್ರಶಸ್ತಿ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ನವೆಂಬರ್ 2ರಿಂದ ಜಯನಗರ ಅಪೊಲೋ‌ ಆಸ್ಪತ್ರೆಯಲ್ಲಿ ತಿಮ್ಮಕ್ಕ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಸಾಲುಮರದ ತಿಮ್ಮಕ್ಕ ಅವರಿಗೆ 114 ವರ್ಷ ವಯಸ್ಸಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ ಅವರನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದ ಚಿಕ್ಕಯ್ಯ ಎಂಬವರೊಂದಿಗೆ ಮದುವೆ ಮಾಡಿಕೊಡಲಾಗುತ್ತದೆ. ಆದ್ರೆ ಚಿಕ್ಕಯ್ಯ-ತಿಮ್ಮಯ್ಯ ದಂಪತಿಗೆ ಮಕ್ಕಳಾಗುವುದಿಲ್ಲ. ಮಕ್ಕಳಿಲ್ಲದ ದುಃಖವನ್ನು ಮರೆಯಲು ತಿಮ್ಮಕ್ಕ ಅವರು ಮರಗಳನ್ನು ನೆಡಲು ಆರಂಭಿಸುತ್ತಾರೆ. ರಾಜ್ಯ ಹೆದ್ದಾರಿ 99ರ ಕುದೂರಿನಿಂದ ಹುಲಿಕಲ್ ಮಾರ್ಗದ ನಡುವೆ ತಿಮ್ಮಕ್ಕ ಅವರು ನೆಟ್ಟಿರುವ ಮರಗಳನ್ನು ಕಾಣಬಹುದು. ಈ ಆಲದ ಮರಗಳು ಹೆಮ್ಮರವಾಗಿ ಬೆಳೆದು ನಿಂತಿವೆ. ಈ ಮರಗಳನ್ನೇ ತಿಮ್ಮಕ್ಕ ಅವರು ಮಕ್ಕಳಂತೆ ಕಾಣುತ್ತಿದ್ದರು.

2019 ರಲ್ಲಿ ಪದ್ಮಶ್ರೀ ಪ್ರಶಸ್ತಿಯ ಗೌರವ

ತಿಮ್ಮಕ್ಕ ಅವರು ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಅಂದಿನಿಂದ ಇವರನ್ನು ಸಾಲು ಮರದ ತಿಮ್ಮಕ್ಕ ಎಂದು ಗುರುತಿಸಲಾಗುತ್ತದೆ. ಸಾಲು ಮರದ ತಿಮ್ಮಕ್ಕ ಅವರನ್ನು ಭಾರತದ ರಾಷ್ಟ್ರೀಯ ನಾಗರಿಕ ಪ್ರಶಸ್ತಿಯಿಂದ ಗೌರವಿಸಲಾಗಿದೆ. ಭಾರತ ಸರ್ಕಾರ 2019 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಸಾಲು ಮರದ ತಿಮ್ಮಕ್ಕ ಅವರನ್ನು ಗೌರವಿಸಲಾಗಿದೆ. ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯವು 2020 ರಲ್ಲಿ ತಿಮ್ಮಕ್ಕ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಘೋಷಿಸಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್
ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?