ಶಬರಿಮಲೆ ಅಯ್ಯಪ್ಪ ಮಾಲಾಧಾರಿಗಳ ಕಾರು ಅಪಘಾತ: ಒಬ್ಬ ಸಾವು, ಮೂವರ ಸ್ಥಿತಿ ಗಂಭೀರ

By Sathish Kumar KH  |  First Published Dec 27, 2023, 5:40 PM IST

ಶಬರಿಮಲೆಗೆ ಕಾರಿನಲ್ಲಿ ತೆರಳಿದ್ದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಕಾರು ಅಪಘಾತವಾಗಿದೆ. ಈ ಘಟನೆಯಲ್ಲಿ ಒಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಬಾಕಿ ಮೂವರ ಸ್ಥಿತಿ ಗಂಭೀರವಾಗಿದೆ.


ಕೊಡಗು  (ಡಿ.27): ಶಬರಿಮಲೆಗೆ ಕಾರಿನಲ್ಲಿ ತೆರಳಿದ್ದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಕಾರು ಅಪಘಾತವಾಗಿದೆ. ಈ ಘಟನೆಯಲ್ಲಿ ಒಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಬಾಕಿ ಮೂವರ ಸ್ಥಿತಿ ಗಂಭೀರವಾಗಿದೆ.

ಮಕರ ಸಂಕ್ರಮಣಕ್ಕೂ ಮುನ್ನ ಶಬರಿಮಲೆ ಸ್ವಾಮಿ ಅಯ್ಯಪ್ಪನ ಭಕ್ತರು ಅಯ್ಯಪ್ಪ ಮಾಲೆಯನ್ನು ಧರಿಸಿ ಇರುಮುಡಿ ಹೊತ್ತು ಶಬರಿಗಿರಿಗೆ ಹೋಗಿ ದರ್ಶನ ಪಡೆದು ಬರುತ್ತಾರೆ. ಪ್ರತಿ ವರ್ಷ ಹೋಗುವಂತೆ ಈ ವರ್ಷವೂ ಕೂಡ ಶಬರಿಮಲೆಗೆ ತೆರಳಿದ್ದ ಕೊಡಗಿನ ಅಯ್ಯಪ್ಪ ಮಾಲಾಧಾರಿಗಳ ಕಾರು ಅಪಘಾತವಾಗಿದೆ. ಕಾರಿನ ಚಾಲಕನ ನಿಯಂತ್ರಣ ತಪ್ಪಿ ಕಾರಿ ವೇಗವಾಗಿ ಚಲಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಓರ್ವ ಮಾಲಾಧಾರಿ ಚಂದ್ರು (41) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೂ ಮೂವರು ಮಾಲಾಧಾರಿಗಳ ಸ್ಥಿತಿ ಗಂಭೀರವಾಗಿದೆ.

Tap to resize

Latest Videos

undefined

ನೀರಿಲ್ಲ, ಅನ್ನವಿಲ್ಲ ಶಬರಿಮಲೆಗೆ ಬರಬೇಡಿ: ಕನ್ನಡಿಗರ ಆಕ್ರೋಶ

ಕೊಡಗು ಜಿಲ್ಲೆಯ ಕುಶಾಲನಗರದ ಲಿಂಗಂ, ಹರೀಶ್, ಸಂತೋಷ್ ಎನ್ನುವವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು  ಚಿಕಿತ್ಸೆಗಾಗಿ ಕೇರಳದ ಪೆರಂಬೂರಿನ ರಾಜಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮೃತ ಚಂದ್ರು ಅವರು ಕೊಡಗು ಜಿಲ್ಲೆ ಹಾರಂಗಿ ನಿವಾಸಿ ಎಂದು ತಿಳಿದುಬಂದಿದೆ. ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶಬರಿಮಲೆಯಿಂದ ಬರುವವರಿಗೆ ಕೋವಿಡ್‌ ಪರೀಕ್ಷೆ
ಹಾಸನ:
ಈಗಾಗಲೇ ಕೇರಳದಲ್ಲಿ ಕೊರೋನಾ ಹೆಚ್ಚಾಗುತ್ತಿರುವುದರಿಂದ ಶಬರಿಮಲೆಗೆ ಹೋಗಿ ವಾಪಸ್‌ ಬರುವ ಭಕ್ತರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲೆಯ ಅಭಿವೃದ್ಧಿ ಕುರಿತು ಸಭೆ ನಡೆಸಿ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೊರೋನಾ ಗೈಡಲೈನ್ಸ್ ಪ್ರಕಾರ 60 ವರ್ಷ ಮೇಲ್ಪಟ್ಟವರು ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ. ಶಬರಿಮಲೆ ಭಕ್ತಾದಿಗಳಿಗೆ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ನಡೆಸಲಾಗುವುದು. ಮತ್ತೆ ರಾಜ್ಯದಲ್ಲಿ ಕೊರೋನಾ ಭೀತಿಯಿಂದಾಗಿ ಈಗಾಗಲೇ ರಾಜ್ಯ ಸರ್ಕಾರ ಗೈಡ್‌ಲೈನ್ಸ್ ಬಿಡುಗಡೆ ಮಾಡಲಾಗಿದೆ. ಮತ್ತು ಕೇರಳದ ಶಬರಿಮಲೆಯಿಂದ ಬರುವಂತಹ ಭಕ್ತಾದಿಗಳನ್ನ ಪರೀಕ್ಷೆ ನಡೆಸಬೇಕು ಎಂದು ಈಗಾಗಲೇ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ ಎಂದರು.

ಈ ವರ್ಷ ಶಬರಿಮಲೆಯಲ್ಲಿ ಭಕ್ತರು, ಆದಾಯ ಕುಸಿತ; ಆದರೂ ಭಕ್ತಾದಿಗಳ ಪರದಾಟ: ಕೇರಳ ಸರ್ಕಾರದ ಬಣ್ಣ ಬಯಲು?

ಬ್ಯಾರಿಕೇಡ್‌ಗಳ ನಿರ್ಮಾಣ: ಮಲೆನಾಡು ಭಾಗದಲ್ಲಿ ಕಾಡಾನೆಗಳ ಸಂತತಿಯು ಕೂಡ ಹೆಚ್ಚಾಗಿದೆ. ಅಲ್ಲದೆ ಇವುಗಳನ್ನ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ 350 ಕೋಟಿ ರು. ವೆಚ್ಚದಲ್ಲಿ ಬ್ಯಾರಿಕೇಡ್ ನಿರ್ಮಾಣಕ್ಕೆ ಹೈಪೊರ್‌ ಕಮಿಟಿ ವರದಿ ನೀಡಿದೆ. ಆದರೆ ಅಷ್ಟೊಂದು ಹಣವನ್ನ ಒಂದೇ ಹಂತದಲ್ಲಿ ಬಿಡುಗಡೆ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಹಂತ ಹಂತವಾಗಿ ರೈಲ್ವೆ ಬ್ಯಾರಿಕೇಡ್‌ಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು. ಕಾಡಾನೆ ದಾಳಿಯಿಂದ ಕೂಲಿ ಕಾರ್ಮಿಕರೇ ಹೆಚ್ಚು ತೊಂದರೆಗೆ ಒಳಗಾಗುತ್ತಿದ್ದು, ಈ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಶ್ರೀಲಂಕಾ ಮಾದರಿಯಲ್ಲಿ ಕಾಡಾನೆಗಳನ್ನು ಹಿಡಿದು ತೊಲಗಿಸಲು ಆನೆ ಕ್ಯಾಂಪ್ ನಿರ್ಮಾಣದ ಬಗ್ಗೆಯೂ ಕೂಡ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು. ಅರ್ಜುನ ಆನೆ ಸಾವಿನ ಬಗ್ಗೆ ಈಗಾಗಲೇ ತನಿಖೆ ನಡೆಸಲಾಗುತ್ತಿದ್ದು, ಯಾರೇ ತಪ್ಪಿತಸ್ಥರಿದ್ದರೂ ಕೂಡ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಅರಣ್ಯ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದರು.

click me!