BSY Granddaughter Suicide: ಯಡಿಯೂರಪ್ಪ ಮನೆಗೆ ಸದ್ಗುರು: ಮೊಮ್ಮಗಳ ನಿಧನಕ್ಕೆ ಸಾಂತ್ವನ

Kannadaprabha News   | Asianet News
Published : Feb 13, 2022, 06:51 AM IST
BSY Granddaughter Suicide:  ಯಡಿಯೂರಪ್ಪ ಮನೆಗೆ ಸದ್ಗುರು: ಮೊಮ್ಮಗಳ ನಿಧನಕ್ಕೆ ಸಾಂತ್ವನ

ಸಾರಾಂಶ

*  ಯಡಿಯೂರಪ್ಪ ಕುಟುಂಬದ ಸದಸ್ಯರಿಗೂ ಸಾಂತ್ವನ ಹೇಳಿದ ಜಗ್ಗಿ ವಾಸುದೇವ್‌ *  ಈ ಕುರಿತು ಟ್ವೀಟ್‌ ಮಾಡಿ ಮಾಹಿತಿ ನೀಡಿದ ಯಡಿಯೂರಪ್ಪ *  ಸದ್ಗುರು ಸಂತೈಸಿದ್ದು ನನ್ನ ಮನಸ್ಸಿಗೆ ಅತ್ಯಂತ ಸಮಾಧಾನ ಉಂಟುಮಾಡಿದೆ ಎಂದ ಬಿಎಸ್‌ವೈ

ಬೆಂಗಳೂರು(ಫೆ.13):  ಇತ್ತೀಚೆಗೆ ಮೊಮ್ಮಗಳನ್ನು ಕಳೆದುಕೊಂಡ ದುಃಖದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ(BS Yediyurappa) ಅವರನ್ನು ಈಶ ಪ್ರತಿಷ್ಠಾನದ ಸದ್ಗುರು(Sadhguru) ಅವರು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. 

ಶನಿವಾರ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಜಗ್ಗಿ ವಾಸುದೇವ್‌ ಅವರು ಯಡಿಯೂರಪ್ಪ ಕುಟುಂಬದ ಸದಸ್ಯರಿಗೂ ಸಾಂತ್ವನ ಹೇಳಿದರು. ಈ ಕುರಿತು ಟ್ವೀಟ್‌ ಮಾಡಿರುವ ಯಡಿಯೂರಪ್ಪ ಅವರು, ಈಶ ಪ್ರತಿಷ್ಠಾನದ ಸದ್ಗುರು ನಮ್ಮ ಮನೆಗೆ ಆಗಮಿಸಿ ಆಶೀರ್ವದಿಸಿದರು. ಇದಕ್ಕಾಗಿ ಅವರಿಗೆ ಭಕ್ತಿಪೂರ್ವಕ ವಂದನೆಗಳು. ಅಕಾಲಿಕವಾಗಿ ನಮ್ಮನ್ನು ಅಗಲಿದ ಮೊಮ್ಮಗಳನ್ನು ಕಳೆದುಕೊಂಡು ದುಃಖದಲ್ಲಿರುವ ಕುಟುಂಬದ ಸದಸ್ಯರನ್ನು ಸದ್ಗುರುಗಳು ಸಾಂತ್ವನದ ಮಾತುಗಳಿಂದ ಸಂತೈಸಿದ್ದು, ಮನಸ್ಸಿಗೆ ಅತ್ಯಂತ ಸಮಾಧಾನ ಉಂಟುಮಾಡಿದೆ ಎಂದಿದ್ದಾರೆ.

Dr Soundarya Suicide: ಜಗಳ ಇರಲಿಲ್ಲ, ಆತ್ಮಹತ್ಯೆ ಏಕೆಂದು ಅರ್ಥವಾಗ್ತಿಲ್ಲ: ಪತಿ ಡಾ.ನೀರಜ್‌

ಮಕ್ಕಳ ಅಗಲಿಕೆಯಿಂದಾಗುವ ನೋವು ಅನುಭವಿಸಿದ್ದೇನೆ: ಬಿಎಸ್​ವೈ ಮೊಮ್ಮಗಳ ನಿಧನಕ್ಕೆ ಸಿದ್ದು ಸಂತಾಪ

ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಮೊಮ್ಮಗಳು(Granddaughter) ಡಾ. ಸೌಂದರ್ಯ(Dr Soundarya) ನಿಧನಕ್ಕೆ ವಿಪಕ್ಷನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಟ್ವೀಟ್​ ಮೂಲಕ ಸಂತಾಪ ಸೂಚಿಸಿರುವ ಸಿದ್ದರಾಮಯ್ಯ(Siddaramaiah), ನನ್ನ ಧೀರ್ಘ ಕಾಲದ ರಾಜಕೀಯ ಸಂಗಾತಿ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳ ಸಾವಿನ ಸುದ್ದಿ ಕೇಳಿ ಮನಸಿಗೆ ಘಾಸಿಯಾಯಿತು. ಭುಜದೆತ್ತರಕ್ಕೆ ಬೆಳೆದ ಮಕ್ಕಳು, ಕುಟುಂಬ ಸದಸ್ಯರ ಅಗಲಿಕೆಯಿಂದಾಗುವ ನೋವು, ಸಂಕಟವನ್ನು ನಾನು ಕಂಡಿದ್ದೇನೆ, ಅನುಭವಿಸಿದ್ದೇನೆ. ಸೌಂದರ್ಯ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಭುಜದೆತ್ತರಕ್ಕೆ ಬೆಳೆದ ಮಕ್ಕಳು, ಕುಟುಂಬ ಸದಸ್ಯರ ಅಗಲಿಕೆಯಿಂದಾಗುವ ನೋವು, ಸಂಕಟವನ್ನು ನಾನು ಕಂಡಿದ್ದೇನೆ, ಅನುಭವಿಸಿದ್ದೇನೆ ಎಂದು ಹೇಳುವ ಮೂಲಕ ತಮ್ಮ ಪುತ್ರ ರಾಕೇಶ್‌ನನ್ನು ಕಳೆದುಕೊಂಡಾಗ ಆಗಿದ್ದ ನೋವು ಹೊರಹಾಕಿದ್ದಾರೆ.

ಭುಜದೆತ್ತರಕ್ಕೆ ಬೆಳೆದ ಮಕ್ಕಳು, ಕುಟುಂಬ ಸದಸ್ಯರ ಅಗಲಿಕೆಯಿಂದಾಗುವ ನೋವು, ಸಂಕಟವನ್ನು ನಾನು ಕಂಡಿದ್ದೇನೆ, ಅನುಭವಿಸಿದ್ದೇನೆ ಎಂದು ಹೇಳುವ ಮೂಲಕ ತಮ್ಮ ಪುತ್ರ ರಾಕೇಶ್‌ನನ್ನು ಕಳೆದುಕೊಂಡಾಗ ಆಗಿದ್ದ ನೋವು ಹೊರಹಾಕಿದ್ದಾರೆ.

ಮಾಜಿ ಸಿಎಂ ಬಿ. ಎಸ್‌. ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ!

ಬೆಂಗಳೂರು:  ಕರ್ನಾಟಕ ಮಾಜಿ ಸಿಎಂ ಬಿ, ಎಸ್. ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜ.28 ರಂದು ಬೆಳಗ್ಗೆ ಸುಮಾರು 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪದ್ಮಾವತಿ ಪುತ್ರಿ ಸೌಂದರ್ಯ(30) ಆತ್ಮಹತ್ಯೆ ಮಾಡಿಕೊಂಡ ಯುವತಿ. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು. 

ಬಿ. ಎಸ್​ ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಅವರು ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸೌಂದರ್ಯ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. 2018ರಲ್ಲಿ ಜಿಲ್ಲಾ ಪಂಚಾಯತ ಸದಸ್ಯರಾದ ಮರಿಸ್ವಾಮಿ ಅಣ್ಣನ ಮಗ ಡಾ. ನಿರಂಜನ್ ಅವರನ್ನು ಸೌಂದರ್ಯ ಮದುವೆಯಾಗಿದ್ದರು. ಮೃತ ಸೌಂದರ್ಯಗೆ ಒಂದು ಮಗು ಇದೆ.

Dr Soundarya Suicide: ಕುಟುಂಬದಲ್ಲಿ ಕಲಹ  ಇರಲಿಲ್ಲ, ಮಗುವಿಗೆ ನಾಮಕರಣ ಮಾಡಿದ್ದರು

ಸೌಂದರ್ಯ ಪತಿ ನಿರಂಜನ್ ರಾಮಯ್ಯ ಆಸ್ಪತ್ರೆಯಲ್ಲಿ ಅಸಿಸ್ಟೆಂಟ್  ಫ್ರೊಫೆಸರ್ ಆಗಿದ್ದು, ಬೆಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದರು. ಇತ್ತ ಸೌಂದರ್ಯ 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಕೆಲಸದವರು ಬಂದಾಗ ಬಾಗಿಲು ತೆಗೆಯದಿದ್ದಾಗ ಸೌಂದರ್ಯ ಪತಿ ಡಾ. ನೀರಜ್‌ಗೆ ಕೆಲಸದವರು ಕರೆ ಮಾಡಿದ್ದರು. ಮನೆ ಕೆಲಸದವರು ಫೋನ್ ಮಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು.. 

ಡಿಲಿವರಿ ಆದ ನಂತರ ಡಿಪ್ರೇಷನ್ ಹೋಗಿದ್ದ ಸೌಂದರ್ಯ?

ಕಳೆದ ಒಂಭತ್ತು ತಿಂಗಳ ಹಿಂದೆ ಸೌಂದರ್ಯ ಡೆಲಿವರಿ ಆಗಿತ್ತು. ಕಳೆದ 3 ತಿಂಗಳ ಹಿಂದೆ ಸೌಂದರ್ಯ ಮನೆಗೆ ಮರಳಿದ್ದರು. ಮನೆಯಲ್ಲಿ ಮಗುವಿನೊಟ್ಟಿಗಿದ್ದ ಸೌಂದರ್ಯ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಕೆಲಸದವರು ತಿಂಡಿ ಕೊಡಲು ಹೋದಾಗ, ಪ್ರಕರಣ ಬೆಳಕಿಗೆ ಬಂದಿದೆ. ಈ ನಡೆಗೆ ಇನ್ನೂ ಕಾರಣ ತಿಳಿದು ಬಂದಿಲ್ಲ. 
 


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!