Kagodu Thimmappa: ಸಾಗರ ಮಾರಿಕಾಂಬ ಜಾತ್ರೆಯಲ್ಲಿ ಕುಸಿದು ಬಿದ್ದ ಕಾಂಗ್ರೆಸ್‌ ಹಿರಿಯ ನಾಯಕ, ಆಸ್ಪತ್ರೆಗೆ ದಾಖಲು!

Published : Feb 03, 2026, 12:51 PM IST
Sagara Marikamba Jatre Senior Congress leader Kagodu Thimmappa collapses

ಸಾರಾಂಶ

ಶಿವಮೊಗ್ಗ ಜಿಲ್ಲೆಯ ಸಾಗರ ಮಾರಿಕಾಂಬಾ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಅವರು ದೇವಿಯ ದರ್ಶನದ ಬಳಿಕ ಅಸ್ವಸ್ಥಗೊಂಡಿದ್ದಾರೆ. ರಕ್ತದೊತ್ತಡದ ಸಮಸ್ಯೆಯಿಂದ ಕುಸಿದುಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ

ಸಾಗರ (ಫೆ.3): ಶಿವಮೊಗ್ಗ ಜಿಲ್ಲೆಯ ಸುಪ್ರಸಿದ್ಧ ಸಾಗರ ಮಾರಿಕಾಂಬಾ ಜಾತ್ರೆಯ ಸಂಭ್ರಮ ಇಂದಿನಿಂದ ಆರಂಭಗೊಂಡಿದೆ. ಆದರೆ, ಈ ಸಂಭ್ರಮದ ನಡುವೆಯೇ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ದಿಢೀರ್ ಅಸ್ವಸ್ಥಗೊಂಡ ಘಟನೆ ನಡೆದಿದೆ.

ದೇವಿಯ ದರ್ಶನದ ಬಳಿಕ ಅನಾಹುತ

ಜಾತ್ರೆಯಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆದ ಕಾಗೋಡು ತಿಮ್ಮಪ್ಪ ಅವರು ದೇವಸ್ಥಾನದಿಂದ ಹೊರಬರುವ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ರಕ್ತದೊತ್ತಡದ (BP) ಸಮಸ್ಯೆಯಿಂದಾಗಿ ಅವರು ಪ್ರಜ್ಞೆ ತಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಬಾಗಲಕೋಟೆ: ಮನೆ ವಿವಾದ ಕೋರ್ಟ್‌ನಲ್ಲಿದ್ದಾಗಲೇ 88 ವರ್ಷದ ವೃದ್ಧನ ಉಟ್ಟ ಬಟ್ಟೆಯಲ್ಲೇ ಹೊರಹಾಕಿದ ಪಾಪಿಗಳು

ತಕ್ಷಣ ಆಸ್ಪತ್ರೆಗೆ ರವಾನೆ, ಆರೋಗ್ಯ ಸ್ಥಿರವಾಗಿದೆ

ಸ್ಥಳದಲ್ಲಿದ್ದ ಬೆಂಬಲಿಗರು ಕೂಡಲೇ ಆಂಬುಲೆನ್ಸ್ ಮೂಲಕ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ವೈದ್ಯರು ತಕ್ಷಣವೇ ಚಿಕಿತ್ಸೆ ಆರಂಭಿಸಿದ್ದು, ಕಾಗೋಡು ತಿಮ್ಮಪ್ಪ ಅವರ ಆರೋಗ್ಯ ಸದ್ಯ ಸ್ಥಿರವಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. 

ಇದನ್ನೂ ಓದಿ: ಮಾರಿಕಾಂಬಾ ಜಾತ್ರೆಗೆ ವಿಶೇಷ ರೈಲು: ಯಶವಂತಪುರ–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ತಾಳಗುಪ್ಪವರೆಗೆ ವಿಸ್ತರಣೆhttps://kannada.asianetnews.com/karnataka-districts/marikamba-jatra-2026-yeshwanthpur-shivamogga-express-extended-to-talaguppa/articleshow-890ubng

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಧರ್ಮರಾಯಸ್ವಾಮಿ ದೇವಾಲಯ ಚಿನ್ನದ ನೆಕ್ಲೆಸ್ ಕದ್ದ ಅಧಿಕಾರಿಯನ್ನ ಸಸ್ಪೆಂಡ್ ಮಾಡಿದ ಮುಜರಾಯಿ ಇಲಾಖೆ!
ಇಂದಿನಿಂದ ಇತಿಹಾಸ ಪ್ರಸಿದ್ದ ಸಾಗರ ಶ್ರೀ ಮಾರಿಕಾಂಬಾ ದೇವಿ ಜಾತ್ರೆ; ಈ ಬಾರಿಯ ವಿಶೇಷತೆ ಏನು?