Sahyog Portal: ಸಾಮಾಜಿಕ ಜಾಲತಾಣಗಳಿಗೆ ಅನಿಯಂತ್ರಿತ ಸ್ವಾತಂತ್ರ್ಯ ಕೊಟ್ಟರೆ ಅರಾಜಕತೆ- ಹೈಕೋರ್ಟ್‌

Kannadaprabha News, Ravi Janekal |   | Kannada Prabha
Published : Sep 25, 2025, 05:49 AM IST
Karnataka High Court on sahyog portal

ಸಾರಾಂಶ

Karnataka High Court on sahyog portal ಕೇಂದ್ರ ಸರ್ಕಾರದ 'ಸಹಯೋಗ್ ಪೋರ್ಟಲ್' ಅಧಿಸೂಚನೆಯನ್ನು ಪ್ರಶ್ನಿಸಿ ಎಕ್ಸ್ ಕಾರ್ಪ್ (ಹಿಂದಿನ ಟ್ವಿಟರ್) ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ವಾಕ್ ಸ್ವಾತಂತ್ರ್ಯ ನಾಗರಿಕರಿಗೆ ಮಾತ್ರ ಅನ್ವಯಿಸುತ್ತದೆ, ಸಂಸ್ಥೆಗಳಿಗಲ್ಲ  ಎಂದ ಕೋರ್ಟ್

 ಮಾಹಿತಿ ನಿರ್ಬಂಧಿಸಲು ಸಾಮಾಜಿಕ ಜಾಲತಾಣಗಳಿಗೆ ನಿರ್ದೇಶನ ನೀಡುವ ಸಂಬಂಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ‘ಸಹಯೋಗ್‌ ಪೋರ್ಟಲ್‌’ ಪ್ರಾರಂಭಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ರದ್ದು ಮಾಡಬೇಕೆಂದು ಎಕ್ಸ್​ ಕಾರ್ಪ್ ​(ಈ ಹಿಂದಿನ ಟ್ವೀಟರ್​) ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

ಈ ಕುರಿತಂತೆ ಎಕ್ಸ್​ ಕಾರ್ಪ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಬುಧವಾರ ಪ್ರಕಟಿಸಿದೆ.

ಸಂವಿಧಾನದ ಪರಿಚ್ಛೇದ 19 (ಸ್ವಾತಂತ್ರ್ಯ) ವಿಶಾಲವಾದ ಅರ್ಥ ಹೊಂದಿದೆ. ಅದರಡಿ ಲಭ್ಯವಾಗಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕೇವಲ ನಾಗರಿಕರಿಗೆ ಮಾತ್ರ ಲಭ್ಯವಾಗಿದೆ. ಆದರೆ, ಈ ಸ್ವಾತಂತ್ರ್ಯವು ಒಂದು ಸಂಸ್ಥೆಯಾಗಿರುವ ಎಕ್ಸ್​ ಕಾರ್ಪ್​ಗೆ ಲಭ್ಯವಾಗುವುದಿಲ್ಲ. ಅರ್ಜಿದಾರರ ಮೂಲ ಸ್ಥಾನ ಅಮೆರಿಕ ಆಗಿದೆ. ಅಮೆರಿಕದಲ್ಲಿಯೂ ಸಾಮಾಜಿಕ ಜಾಲತಾಣಗಳನ್ನು ನಿಯಂತ್ರಿಸಲಾಗುತ್ತಿದೆ ಎಂದು ಪೀಠ ಹೇಳಿದೆ.

ಇದನ್ನೂ ಓದಿ: ಕೋರ್ಟ್‌ ಬದಲಾವಣೆ ಕೇಳಿದ್ದ ಪ್ರಜ್ವಲ್‌ ರೇವಣ್ಣಗೆ ಹೈಕೋರ್ಟ್‌ನಲ್ಲಿ ಹಿನ್ನಡೆ

ಅಲ್ಲದೆ, ಸಾಮಾಜಿಕ ಜಾಲತಾಣ ಕ್ಷೇತ್ರವನ್ನು ನಿಯಂತ್ರಿಸುವುದು ಹೊಸದೂ ಅಲ್ಲ, ವಿಶಿಷ್ಟವೂ ಅಲ್ಲ. ಪ್ರತಿ ಸಾರ್ವಭೌಮ ರಾಷ್ಟ್ರಗಳಲ್ಲಿಯೂ ಸಾಮಾಜಿಕ ಜಾಲತಾಣಗಳನ್ನು ನಿಯಂತ್ರಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಿಗೆ ಅನಿಯಂತ್ರಿತ ಸ್ವಾತಂತ್ರ್ಯ ನೀಡಲಾಗದು. ನಿಯಂತ್ರಣವಿಲ್ಲದ ವಾಕ್​ ಸ್ವಾತಂತ್ರ್ಯ ಕಲ್ಪಿಸುವುದು ಅರಾಜಕತೆಗೆ ದಾರಿ ಮಾಡಕೊಡಲಿದೆ ಎಂದು ಪೀಠ ಹೇಳಿದೆ.

ಮಾಹಿತಿ ನಿರ್ಬಂಧ ಮಾಡುವುದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಸಂಸ್ಥೆಗಳಿಗೆ ನಿರ್ದೇಶಿಸಲು ಕೇಂದ್ರ ಸರ್ಕಾರ ಮಾಹಿತಿ ತಂತ್ರಜ್ಞಾನ ಸೆಕ್ಷನ್‌ 79(3)(ಬಿ) ಅಡಿಯಲ್ಲಿ ಕೇಂದ್ರ ಗೃಹ ಇಲಾಖೆ ಸಹಯೋಗ್‌ ಪೋರ್ಟಲ್‌ ಪರಿಚಯಿಸಿ ಅಧಿಸೂಚನೆ ಹೊಡಿಸಿದೆ. ಇದು ಕಾನೂನು ಬಾಹಿರ ಕ್ರಮ. ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಆದ್ದರಿಂದ ಕೇಂದ್ರ ಸರ್ಕಾರದ ಅಧಿಸೂಚನೆ ರದ್ದು ಮಾಡಬೇಕು ಎಂದು ಎಕ್ಸ್‌ ಕಾರ್ಪ್‌ ಸಂಸ್ಥೆ ತನ್ನ ಅರ್ಜಿಯಲ್ಲಿ ಕೋರಿತ್ತು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!