
ಬೆಂಗಳೂರು (ಏ.15): ರಾಜ್ಯದ ಪ್ರಮುಖ ಆಭರಣ ಮಳಿಗೆಗಳಲ್ಲಿ ಒಂದಾಗಿರುವ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ಆಭರಣ ಮಳಿಗೆಯ ಮಾಲೀಕರು ಹಾಗೂ ವಿಧಾನ ಪರಿಷತ್ ಸದಸ್ಯರೂ ಆಗಿರುವ ಟಿ.ಎ. ಶರವಣ ಅವರಿಗೆ ಇಂದು ಲಘು ಹೃದಯಾಘಾತವಾಗಿದ್ದು, ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಅವರು, ತಮಗೆ ಲಘು ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 'ಲಘು ಹೃದಯಾಘಾತದಿಂದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾನು,ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಬಂದೆ. ವೈದ್ಯರುಗಳು ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದಾರೆ. ಇಂತಹ ಕಠಿಣ ಸಂದರ್ಭದಲ್ಲಿ ನನಗಾಗಿ ಪ್ರಾರ್ಥಿಸಿದ, ಶೀಘ್ರ ಚೇತರಿಕೆಗಾಗಿ ಹಾರೈಸಿದ ನನ್ನೆಲ್ಲಾ ಆತ್ಮೀಯರಿಗೂ, ಸ್ನೇಹಿತರಿಗೂ, ಅಭಿಮಾನಿಗಳಿಗೂ ಹಾಗೂ ಕುಟುಂಬಸ್ಥರಿಗೆ ಮನಪೂರ್ವಕ ಧನ್ಯವಾದಗಳು.
ಯತ್ನಾಳ ಕುಟುಂಬದ ಸಿದ್ಧಸಿರಿ ಎಥೆನಾಲ್ ಘಟಕ ಮುಚ್ಚಲು ಮುಂದಾದ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್ ತರಾಟೆ!
ಭಗವಂತನ ಆಶೀರ್ವಾದ ಮತ್ತು ನಿಮ್ಮೆಲ್ಲರ ಹಾರೈಕೆ, ಪ್ರಾರ್ಥನೆ ಹಾಗು ಜಯದೇವ ಆಸ್ಪತ್ರೆಯ ವೈದ್ಯರುಗಳ ಹಾಗು ಸಿಬ್ಬಂದಿ ವರ್ಗದವರ ಆರೈಕೆಯಿಂದ ಚೇತರಿಸಿಕೊಳ್ಳುತ್ತಿದ್ದೇನೆ. ನಿಮ್ಮೆಲ್ಲರಿಗೂ ನನ್ನ ಕೃತಜ್ಞತೆಗಳು ಎಂದು ಶರವಣ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ