ಕೃಷಿ ಇಲಾಖೆ ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಫೂರ್ತಿ ತುಂಬಲು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ನಟ ದರ್ಶನ್‌ರನ್ನು ನೇಮಿಸಿ ಆದೇಶಿಸಿದೆ.
ಬೆಂಗಳೂರು (ಫೆ.16): ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೃಷಿ ಇಲಾಖೆ ರಾಯಭಾರಿಯನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ.
ಕೃಷಿ ಇಲಾಖೆ ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಫೂರ್ತಿ ತುಂಬಲು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ದರ್ಶನ್‌ರನ್ನು ನೇಮಿಸಿ ಆದೇಶಿಸಿದೆ. ಕೃಷಿ ಇಲಾಖೆಯ ರಾಯಭಾರಿಯಾಗಿ ಕೆಲಸ ನಿರ್ವಹಿಸಲು ಯಾವುದೇ ಸಂಭಾವನೆ ಇಲ್ಲದೇ ದುಡಿಯುವುದಾಗಿ ದರ್ಶನ್ ಒಪ್ಪಿಕೊಂಡಿದ್ದಾರೆ.
ರಾಬರ್ಟ್ ತೆಲುಗು ಡಬ್ಬಿಂಗ್ ರೈಟ್ಸ್ ಎಷ್ಟು ಮೊತ್ತಕ್ಕೆ ಮಾರಾಟವಾಗಿದೆ ಗೊತ್ತಾ? ...
ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ರೈತರೊಂದಿಗೆ ಒಂದು ದಿನ ಕಾರ್ಯಕ್ರಮವನ್ನು ದರ್ಶನ್ ಮೆಚ್ಚಿದ್ದರು. ಸ್ವತಃ ಕೃಷಿಕರೂ ಆಗಿರುವ ದರ್ಶನ್ ಬಿ.ಸಿ.ಪಾಟೀಲ್ ಅವರೊಂದಿಗೆ ಚರ್ಚಿಸಿ ತಮ್ಮ ಮನದಿಂಗಿತವನ್ನು ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ದರ್ಶನ್ ಅವರನ್ನು ನೇಮಕ ಮಾಡಿದೆ.