
ಬೆಂಗಳೂರು(ಜ.29): ಪರವಾನಗಿ ಹೊಂದಿರುವ ತಮ್ಮ ಪಿಸ್ತೂಲ್ ಮಟ್ಟುಗೋಲು ಹಾಕಿಕೊಂಡಿ ರುವ ಪೊಲೀಸರ ಕ್ರಮ ಪ್ರಶ್ನಿಸಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ತನಗೆ ಹಿಂದೆ ಮಂಜೂರು ಮಾಡಲಾಗಿದ್ದ ಶಸ್ತ್ರಾಸ್ತ್ರ (ಪಿಸ್ತೂಲ್) ಪರವಾನಗಿಯನ್ನು ಅಮಾನುತುಪಡಿಸಿ ಉಪ ಪೊಲೀಸ್ ಆಯುಕ್ತರು (ಆಡಳಿತ) 2025ರ ಜ.20ರಂದು ಹೊರಡಿಸಿದ ಆದೇಶ ರದ್ದುಪಡಿಸುವಂತೆ ಕೋರಿ ದರ್ಶನ್ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ನಗರ ಪೊಲೀಸ್ ಆಯುಕ್ತರು ಹಾಗೂ ಉಪ ಪೊಲೀಸ್ ಆಯುಕ್ತರನ್ನು (ಆಡಳಿತ) ಪ್ರತಿವಾದಿ ಮಾಡಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಮತ್ತೊಂದು ಕಾನೂನು ಹೋರಾಟಕ್ಕೆ ದರ್ಶನ್ ಸಜ್ಜು | Darshan News | Suvarna News | Kannada News
ಪಿಸ್ತೂಲ್ ಮುಟ್ಟು ಗೋಲು:
ಸಮಾಜದಲ್ಲಿ ತಾವು ಹೊಂದಿರುವ ಸ್ಥಾನಮಾನ ಮತ್ತು ಅಪಾರ ಪ್ರಮಾಣದ ಅಭಿಮಾನಿ ಬಳಗವನ್ನು ಪರಿಗಣಿಸಿ ಈ ಹಿಂದೆ ನನಗೆ ಶಸ್ತ್ರಾಸ್ತ್ರ (ಪಿಸ್ತೂಲ್) ಹೊಂದಲು ಪೊಲೀಸ್ ಇಲಾಖೆ ಪರವಾನಗಿ ಮಂಜೂರು ಮಾಡಿತ್ತು. ಆದರೆ, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಬಾಕಿಯಿರುವ ಹಿನ್ನೆಲೆಯಲ್ಲಿ ಪಿಸ್ತೂಲ್ ದುರುಪಯೋಗ ಮಾಡುವ ಆತಂಕವನ್ನು ಪೊಲೀಸರು ವ್ಯಕ್ತಪಡಿಸಿ ತಾವು ಹೊಂದಿರುವ ಶಸ್ತ್ರಾಸ್ತ್ರ ಪರವಾನಗಿಯನ್ನು ಏಕೆ ರದ್ದುಪಡಿಸಬಾರದು ಎಂಬ ಬಗ್ಗೆ ವಿವರಣೆ ನೀಡಲು ಸೂಚಿಸಿ 2025ರ ಜ.7ರಂದು ನನಗೆ ಶೋಕಾಸ್ ನೋಟಿಸ್ ನೀಡಿದ್ದರು ಎಂದು ದರ್ಶನ್ ಅರ್ಜಿಯಲ್ಲಿ ವಿವರಿಸಿದ್ದಾರೆ.
ಆ ಶೋಕಾಸ್ ನೋಟಿಸ್‌ಗೆ ನಾನು ಜ.13ರಂದು ಉತ್ತರಿಸಿ, ಪಿಸ್ತೂಲ್ ಅನ್ನು ದುರುಪಯೋಗಪಡಿಸಿಕೊಳ್ಳುವ ಆರೋಪ ತಳ್ಳಿಹಾಕಿದೆ. ನಾನು ಅಮಾಯಕನಾಗಿದ್ದು, ತನ್ನ ಮೇಲಿನ ಆರೋಪದಲ್ಲಿ ಹುರುಳಿಲ್ಲದ ಕಾರಣ ಪ್ರಕರಣದ ಸಾಕಿಗಳನ್ನು ಬೆದರಿಸುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಹಾಗಾಗಿ, ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಮನವಿ ಮಾಡಿದ್ದೆ. ಜ.16ರಂದು ಮತ್ತೊಂದು ಪತ್ರ ಬರೆದು, ಪಿಸ್ತೂಲ್ ದುರುಪಯೋಗ ಮಾಡುವುದಿಲ್ಲ ಎಂದು ಭರವಸೆ ಸಹ ನೀಡಿದ್ದೆ ಎಂದು ಅರ್ಜಿಯಲ್ಲಿ ದರ್ಶನ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ