ಲೀಲಾವತಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ!

By Santosh NaikFirst Published Dec 8, 2023, 8:57 PM IST
Highlights

ಹಿರಿಯ ನಟಿ ಲೀಲಾವತಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ ಟ್ವೀಟ್‌ ಮಾಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಅವರು ತಮ್ಮ 85ನೇ ವಯಸ್ಸಿನಲ್ಲಿ ನಿಧನರಾದರು.
 

ಬೆಂಗಳೂರು (ಡಿ.8): ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಹಾಗು ದಕ್ಷಿಣ ಭಾರತದ ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ. ;ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ' ಎಂದು ಅವರು ಬರೆದುಕೊಂಡಿದ್ದಾರೆ.'

ಶುಕ್ರವಾರ ಮಧ್ಯಾಹ್ನದ ವೇಳೆಗೆ ನಟಿ ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಅದಾಗಲೇ ತೀವ್ರ ನಿಶ್ಯಕ್ತರಾಗಿದ್ದ ಲೀಲಾವತಿ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಅದರೊಂದಿಗೆ ಕನ್ನಡ ಚಿತ್ರರಂಗದ ದೊಡ್ಡ ಕೊಂಡಿಕಯೊಂದು ಕಳಚಿ ಬಿದ್ದಂತಾಗಿದೆ. ಅವರ ಅಂತ್ಯಸಂಸ್ಕಾರವನ್ನು ನಾಳೆ ನೆಲಮಂಗಲದಲ್ಲಿರುವ ಅವರ ತೋಟ ಸೋಲದೇವನಹಳ್ಳಿಯಲ್ಲಿ ಮಾಡಲಾಗುತ್ತದೆ ಎಂದು ಪುತ್ರ ವಿನೋದ್‌ ರಾಜ್ ಕುಮಾರ್‌ ಹೇಳಿದ್ದಾರೆ. ಅದಕ್ಕೂ ಮುನ್ನ ನೆಲಮಂಗಲದ ಅಂಬೇಡ್ಕರ್‌ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶುಕ್ರವಾರ ತಡರಾತ್ರಿಯಿಂದಲೇ ಅಂತಿಮ ದರ್ಶನದ ವ್ಯವಸ್ಥೆ ಇರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ದೇವ್ರೇ..ದೇವೇ..' ಎನ್ನುತ್ತಲೇ ರಂಜಿಸಿದ್ದ ಲೀಲಾವತಿಗೆ ಸಿಕ್ಕಿದ್ದು ಬರೀ ಅಳುಮುಂಜಿ ಪಾತ್ರಗಳು!

ಇನ್ನು ಲೀಲಾವತಿ ಅವರ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್‌ ಯಡಿಯೂರಪ್ಪ, ಎಚ್‌ಡಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಂತಾಪ ವ್ಯಕ್ತಪಡಿಸಿದ್ದಾರೆ

'ಯಾರೂ ಇಲ್ಲ, ನೀವೇ ಬಂಧುಬಳಗ..' ತಾಯಿಯ ನಿಧನದ ಬಳಿಕ ವಿನೋದ್‌ ರಾಜ್‌ ಕಣ್ಣೀರು

ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ…

— Narendra Modi (@narendramodi)
click me!