
ಬೆಂಗಳೂರು(ಸೆ.20): ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿ, 2018ರಲ್ಲೇ ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದಿರುವ ಆರೋಪ ಹೊತ್ತಿರುವ ನಟಿ ಸಂಜನಾ ಗಲ್ರಾನಿ, 2014ರಲ್ಲೇ ತಾನು ಮುಸ್ಲಿಂ ಧರ್ಮದ ಬಗ್ಗೆ ಒಲವು ಹೊಂದಿರುವ ಕುರಿತು ಸುಳಿವು ನೀಡಿದ್ದರು ಎಂಬ ಮಾಹಿತಿ ಬಹಿರಂಗಗೊಂಡಿದೆ.
ಸಂಜನಾ 2014ರ ಜುಲೈ 7ರಂದು ‘ಇನ್ಸ್ಟಾಗ್ರಾಂ’ನಲ್ಲಿ ಒಂದು ಪೋಸ್ಟ್ ಮಾಡಿದ್ದರು. ಅದರಲ್ಲಿ, ‘ಪ್ರೇಮಕಥೆ ಆಧರಿಸಿದ ಮಲಯಾಳಂ ಸಿನಿಮಾವೊಂದರಲ್ಲಿ ನಟಿಸುತ್ತಿದ್ದೇನೆ. ಈ ವೇಳೆ ಮುಸ್ಲಿಂ ಸಂಸ್ಕೃತಿ ಹಾಗೂ ಸಂಪ್ರದಾಯದ ಬಗ್ಗೆ ತೀವ್ರ ಪ್ರಭಾವಕ್ಕೊಳಗಾಗಿದ್ದೇನೆ’ ಎಂದಿದ್ದರು. ‘ನಾನು ಸಹ...??’ ಎಂದು ಪೋಸ್ಟ್ ಮಾಡಿದ್ದರು.
ಹೀಗೆ ‘ನಾನು ಸಹ’ ಎನ್ನುವ ಮೂಲಕ ಅವರು ಮತಾಂತರದ ಸುಳಿವು ನೀಡಿದ್ದರು ಎನ್ನಲಾಗಿದೆ.
ಇದಕ್ಕೆ ಪೂರಕ ಎಂಬಂತೆ ಸಂಜನಾ, ‘ಇಸ್ಲಾಂ ಧರ್ಮಕ್ಕೆ ಮತಾಂತರಗೊಳುತ್ತಿದ್ದೇನೆ’ ಎಂದು ನ್ಯಾಯಾಲಯಕ್ಕೆ 2018ರಲ್ಲಿ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ಜತೆಗೆ ಈ ಬಗ್ಗೆ ಮಸೀದಿಯೊಂದಕ್ಕೂ ಮಾಹಿತಿ ನೀಡಿ ಅನುಮೋದನೆ ಪಡೆದಿದ್ದಾರೆ ಎಂಬ ದಾಖಲೆಗಳು ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ.
ದಾರುಲ್ ಉಲೂಂ ಶಾಹ್ ವಲಿಉಲ್ಲಾ ಎಂಬ ಹೆಸರಿನಿಂದ ಬರೆಯಲಾಗಿರುವ ಪತ್ರದಲ್ಲಿ ಅರ್ಚನಾ ಮನೋಹರ್ ಗಲ್ರಾನಿ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದು ಇನ್ನು ಮುಂದೆ ಅವರನ್ನು ಮಹಿರಾ ಎಂದು ಕರೆಯಬೇಕು ಎಂದು ಬರೆಯಲಾಗಿದೆ.
ಸಂಜನಾ ಗಲ್ರಾನಿ ಮುಸ್ಲಿಂ ಧರ್ಮಕ್ಕೆ 2018ರಲ್ಲಿ ಮತಾಂತರಗೊಂಡಿದ್ದಾರೆ. ಈಗ ಅವರ ಹೊಸ ಹೆಸರು ಮಾಹಿರಾ. ನಮ್ಮ ಕರ್ನಾಟಕದಲ್ಲಿ ಲವ್ ಜಿಹಾದ್ ತಾಂಡವವಾಡುತ್ತಿದೆ ಎಂಬ ಪೋಸ್ಟ್‌ಗಳು ಹರಿದಾಡುತ್ತಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ