
ಬೆಂಗಳೂರು (ಫೆ.11) :
ಸ್ಯಾಂಕಿ ಕೆರೆ ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೆಟ್ರೋಪಾಲಿಟನ್ ಭೂ ಸಾರಿಗೆ ಪ್ರಾಧಿಕಾರಕ್ಕೆ ವರದಿ ಸಲ್ಲಿಸಲಾಗಿದ್ದು, ಮುಂದಿನ ಸೂಚನೆಯಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಯಾಂಕಿ ಕೆರೆ ರಸ್ತೆ ಅಗಲೀಕರಣಕ್ಕೆ ಪ್ರಸ್ತಾವನೆ ಇತ್ತು. ಅದರೊಂದಿಗೆ ಫ್ಲೈಓವರ್(Sankey Lake flyover) ನಿರ್ಮಾಣ ಮಾಡುವುದರಿಂದ ಸಂಚಾರ ದಟ್ಟಣೆ(Traffic jam) ಕಡಿಮೆ ಆಗಲಿದೆ. ಈ ಕಾರಣಕ್ಕೆ ಮೇಲ್ಸೇತುವೆ ನಿರ್ಮಾಣಕ್ಕೆ ಬಿಬಿಎಂಪಿ(BBMP) ಮುಂದಾಗಿದೆ. ಆದರೆ, ಸ್ಥಳೀಯರು ಫ್ಲೈಓವರ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹಾಗಾಗಿ, ಮೇಲ್ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದ ಸಂಪೂರ್ಣ ವರದಿಯನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಭೂ ಸಾರಿಗೆ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ. ಪ್ರಾಧಿಕಾರ ನೀಡುವ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
2017ರಲ್ಲಿ .25 ಕೋಟಿ ವೆಚ್ಚದಲ್ಲಿ ಬಾಷ್ಯಂ ವೃತ್ತದಲ್ಲಿ ಗ್ರೇಡ್ ಸಪರೇಟರ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿತ್ತು. ಆದರೆ, 2022ರ ಮೇನಲ್ಲಿ ಯೋಜನೆ ಪರಿಷ್ಕರಿಸಿ .35 ಕೋಟಿ ವೆಚ್ಚದಲ್ಲಿ ಬಾಷ್ಯಂ ವೃತ್ತದಿಂದ ಮಲ್ಲೇಶ್ವರ 18ನೇ ಕ್ರಾಸ್‌ವರೆಗೆ ಮೇಲ್ಸೇತುವೆ ನಿರ್ಮಾಣಕ್ಕೆ ಬಿಬಿಎಂಪಿ ನಿರ್ಧರಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ