ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಶಾ ಇನ್ನಿಲ್ಲ

By Suvarna NewsFirst Published May 25, 2021, 5:17 PM IST
Highlights

* ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಸಿ ಶಾ ಇನ್ನಿಲ್ಲ
* ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸುರೇಶ್ ಸಿ ಶಾ
* 1966ರಲ್ಲಿ ಪುಟ್ಟದಾಗಿ ಸಪ್ನಾ ಬುಕ್ ಹೌಸ್ ಆರಂಭಿಸಿದ ಸುರೇಶ್

ಬೆಂಗಳೂರು, (ಮೇ.25): ಭಾರತದ ಅತಿದೊಡ್ಡ ಪುಸ್ತಕ ಮಳಿಗೆ ಎಂದೇ ಹೆಸರಾದ ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಸಿ. ಶಾ ಅವರು  ನಿಧನರಾಗಿದ್ದಾರೆ.

ಅವರಿಗೆ 84  ವಯಸ್ಸಾಗಿತ್ತು.  ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ಶೇಷಾದ್ರಿಪುರದ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

1966ರಲ್ಲಿ ಪುಟ್ಟದಾಗಿ ಸಪ್ನಾ ಬುಕ್ ಹೌಸ್ ಆರಂಭಿಸಿದ ಸುರೇಶ್  ಅವರು ಸಂಸ್ಥೆಯನ್ನು ಆಮೂಲಾಗ್ರವಾಗಿ ಬೆಳೆಸಿದರು. ಈಗ ಅದು ಭಾರತದ ಅತಿದೊಡ್ಡ ಪುಸ್ತಕ ಮಳಿಗೆ ಎಂದೇ ಹೆಸರಾಗಿದೆ. 

19 ಶಾಖೆಗಳನ್ನು ಹೊಂದಿರುವ ಸಪ್ನಾ ಕನ್ನಡ ಪುಸ್ತಕಗಳನ್ನು ವ್ಯಾಪಕವಾಗಿ ಓದುಗರಿಗೆ ತಲುಪಿಸುವ ಕೆಲಸವನ್ನು ಸತತವಾಗಿ ಮಾಡಿಕೊಂಡು ಬರುತ್ತಿದೆ.

ಸುರೇಶ್ ಸಿ  ಅವರು ಮೂವರು ಪುತ್ರರಾದ ನಿತಿನ್ ಶಾ, ದೀಪಕ್ ಶಾ ಮತ್ತು ಪರೇಶ್ ಶಾ ಅವರನ್ನು ಅಗಲಿದ್ದಾರೆ. ಬುಧವಾರ ಬೆಳಗ್ಗೆ ಹರಿಶ್ಚಂದ್ರ ಘಾಟ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಸಪ್ನಾದ ಪ್ರಕಟಣೆಯಲ್ಲಿ ತಿಳಿಸಿದೆ.

click me!