ಮೈಸೂರು ದಸರಾ ನೆಪದಲ್ಲಿ 20ಕ್ಕೂ ಅಧಿಕ ಶಾಸಕರೊಂದಿಗೆ ಮೈಸೂರಿಗೆ ತೆರಳಲು ಸಿದ್ದತೆ ನಡೆಸಿದ್ದ ಸಚಿವ ಸತೀಶ್ ಜಾರಕಿಹೊಳಿ ನಡೆ ಇದೀಗ ಕಾಂಗ್ರೆಸ್‌ನಲ್ಲಿ ಭಾರೀ ಸಂಚಲನ ಮೂಡಿಸಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ತಮ್ಮ ಉಸ್ತುವಾರಿ ಜಿಲ್ಲಾ ಶಾಸಕರೊಂದಿಗೆ ತೆರಳಲು ಚಿಂತನೆ ನಡೆಸಿದ್ದ ಸತೀಶ್ ಜಾರಕಿಹೊಳಿ!
ಬೆಂಗಳೂರು (ಅ.16): ಮೈಸೂರು ದಸರಾ ನೆಪದಲ್ಲಿ 20ಕ್ಕೂ ಅಧಿಕ ಶಾಸಕರೊಂದಿಗೆ ಮೈಸೂರಿಗೆ ತೆರಳಲು ಸಿದ್ದತೆ ನಡೆಸಿದ್ದ ಸಚಿವ ಸತೀಶ್ ಜಾರಕಿಹೊಳಿ ನಡೆ ಇದೀಗ ಕಾಂಗ್ರೆಸ್‌ನಲ್ಲಿ ಭಾರೀ ಸಂಚಲನ ಮೂಡಿಸಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ತಮ್ಮ ಉಸ್ತುವಾರಿ ಜಿಲ್ಲಾ ಶಾಸಕರೊಂದಿಗೆ ತೆರಳಲು ಚಿಂತನೆ ನಡೆಸಿದ್ದ ಸತೀಶ್ ಜಾರಕಿಹೊಳಿ. ಎಲ್ಲ ಶಾಸಕರನ್ನು ಒಗ್ಗೂಡಿಸಿಕೊಂಡು ಮೈಸೂರು ದಸರಾಗೆ ತೆರಳಲು ತಯಾರಿ ನಡೆಸಿದ್ದರು. ಕರೆದೊಯ್ಯಲು ಬಸ್ ಕೂಡ ಸಿದ್ಧವಾಗಿತ್ತು. ಆದರೆ ಈ ವಿಚಾರ ತಿಳಿಯುತ್ತಿದ್ದಂತೆ ಅಲರ್ಟ್ ಆದ ಕಾಂಗ್ರೆಸ್ ಹೈಕಮಾಂಡ್. ಈ ಸಮಯದಲ್ಲಿ 20ಕ್ಕೂ ಹೆಚ್ಚು ಶಾಸಕರನ್ನು ಒಗ್ಗೂಡಿಸಿಕೊಂಡು ಹೋಗುವುದು ಬೇಡ, ಕೂಡಲೇ ಕ್ಯಾನ್ಸಲ್ ಮಾಡುವಂತೆ ಹೈಕಮಾಂಡ್ ಸೂಚನೆ.
undefined
ಈ ಸಮಯದಲ್ಲಿ ಬಸ್ ನಲ್ಲಿ ಶಾಸಕರನ್ನು ಒಗ್ಗೂಡಿಸಿಕೊಂಡು ಹೊರಟರೇ ವಿಪಕ್ಷಗಳಿಗೆ ನಾವೇ ಆಹಾರ ಕೊಟ್ಟಂತಾಗಲಿದೆ ಎಂದು ಹೈಕಮಾಂಡ್ ನಾಯಕರಿಂದ ಸತೀಶ್ ಜಾರಕಿಹೊಳಿಗೆ ಸೂಚನೆ. ಹೈಕಮಾಂಡ್ ಸೂಚನೆ ಕೊಟ್ಟ ಹಿನ್ನೆಲೆ ಶಾಸಕರನ್ನು ಒಗ್ಗೂಡಿಸಿಕೊಂಡು ಹೋಗುವ ವಿಚಾರ ಕೈಬಿಟ್ಟ ಸಚಿವ ಸತೀಶ್ ಜಾರಕಿಹೊಳಿ.
ಐಟಿ ರೇಡ್ ವೇಳೆ ಸಿಕ್ಕ ಹಣ ಕಾಂಗ್ರೆಸ್ಸಿನದು ಅನ್ನೋಕೆ ಏನಿದೆ ಸಾಕ್ಷ್ಯ? : ಜಗದೀಶ್ ಶೆಟ್ಟರ್
ಈ ಬಗ್ಗೆ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನಾಡಹಬ್ಬ ದಸರಾ ಹಬ್ಬ ಹಿನ್ನೆಲೆ ಮೈಸೂರಿಗೆ ಕೆಲವರು ಹೋಗಬೇಕು ಅಂತ ಮಾತನಾಡಿದ್ದೆವು. ದಸರಾ ನೋಡೋಕೆ ಬನ್ನಿ ಅಂತ ಅಲ್ಲಿನ ಶಾಸಕರೂ ಹೇಳ್ತಿದ್ದರು. ಹೀಗಾಗಿ ಕೆಲವು ನಮ್ಮ ಲೈಕ್ ಮೈಂಡೆಡ್ ಶಾಸಕರು ಒಟ್ಟಿಗೆ ಸೇರಿ ಅಲ್ಲಿಗೆ ಹೋಗಬೇಕು ಅಂದುಕೊಂಡಿದ್ವಿ. ಅಲ್ಲದೆ ಕೆಲವು ಶಾಸಕರು ನಮ್ಮನ್ನು ಎಲ್ಲಾದ್ರೂ ಟ್ರಿಪ್ ಕರೆದುಕೊಂಡು ಹೋಗಿ ಅಂತಾ ಕೇಳಿದ್ರು. ಸಮಾನ ಮನಸ್ಕರ ಸೇರಿ ಟ್ರಿಪ್ ಹೋಗಬೇಕು ಅಂತಾ ನಮಗೂ ಇತ್ತು. ಈಗ ದಸರಾ ಹಬ್ಬ ಬೇಡ ಅಂದಿದ್ದೇವೆ. ಮುಂದೆ ಹೋಗಬೇಕು ಅಂತಾದ್ರೆ ಸಿಎಂ ಹಾಗೂ ಅಧ್ಯಕ್ಷರ ಗಮನಕ್ಕೆ ತಂದು ಹೋಗುತ್ತೇವೆ ಇದು with in the ಪಾರ್ಟಿ ಯಾವುದೇ ಬಣ ಗಿಣ ಅಂತೇನಿಲ್ಲ ಎಂದು ಸ್ಪಷ್ಟಪಡಿಸಿದರು.