
ಬೆಂಗಳೂರು (ಅ.11): ಪರಿಶಿಷ್ಟ ಜಾತಿ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿ ಕಾರ್ಯಕರ್ತರು ಸಚಿವ ಎಚ್.ಸಿ. ಮಹದೇವಪ್ಪ ಅವರ ನಿವಾಸಕ್ಕೆ ಶುಕ್ರವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಬಡ್ತಿ, ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಗೆ ಒಳಮೀಸಲಾತಿ ಅನ್ವಯಿಸಿ ಕೂಡಲೇ ಆದೇಶ ಹೊರಡಿಸಬೇಕು. ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಜಾತಿಗಳ ಕುರಿತ ಆದೇಶದಲ್ಲಿ ಹಲವು ಗೊಂದಲಗಳಿರುವುದರಿಂದ ಪರಿಷ್ಕರಿಸಿ ಮರು ಆದೇಶವನ್ನು ತಕ್ಷಣವೇ ಹೊರಡಿಸಬೇಕು. ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ವರದಿಯಲ್ಲಿರುವ 4.73 ಲಕ್ಷ ಜನರಲ್ಲಿ ನಕಲಿ ಜನರಿರುವ ಸಂಶಯ ಒಳಮೀಸಲಾತಿ ಹೋರಾಟಗಾರರಲ್ಲಿದೆ. ಹೀಗಾಗಿ, ಅವರ ಮಾಹಿತಿ ಬಹಿರಂಗಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಮೈಸೂರಲ್ಲಿ ಕೊಲೆ, ಬಾಲಕಿ ರೇಪ್ ಅಂಡ್ ಮರ್ಡರ್: ಕೂಗುಮಾರಿಗಳು ಯಾಕೆ ಸೈಲೆಂಟ್? ರಾಜ್ಯ ಸರ್ಕಾರದ ವಿರುದ್ಧ Pratap Simha ದಾಳಿ
ತೆಲಂಗಾಣ ಮಾದರಿಯಲ್ಲಿ ಸ್ಥಳೀಯ ಸಂಸ್ಥೆಗಳಿಗೂ ಒಳಮೀಸಲಾತಿ ಅನ್ವಯಿಸಬೇಕು. ಆರ್ಥಿಕ ಕ್ಷೇತ್ರಗಳಿಗೂ ಒಳಮೀಸಲಾತಿ ಅನ್ವಯಿಸಿ ಆದೇಶ ಹೊರಡಿಸಬೇಕು. ಶಾಶ್ವತ ಆಯೋಗ ರಚಿಸಿ ಅಲೆಮಾರಿ ಸಮುದಾಯಗಳಿಗೆ ಶೇ.1 ಮೀಸಲಾತಿ ನೀಡಬೇಕು. ಎಸ್‌ಸಿಎಸ್‌ಪಿ/ಟಿಎಸ್‌ಪಿ ಸಲಹೆಗಾರರ ಹುದ್ದೆ ಕೂಡಲೇ ರದ್ದುಪಡಿಸಬೇಕು ಹಾಗೂ ಹಲವು ವರ್ಷಗಳಿಂದ ಸಮಾಜ ಕಲ್ಯಾಣ ಇಲಾಖೆಯ ಉನ್ನತ ಹುದ್ದೆಗಳಲ್ಲಿರುವ ಅಧಿಕಾರಿಗಳನ್ನು ತಕ್ಷಣ ವರ್ಗಾವಣೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸಚಿವರ ನಿವಾಸದ ಎದುರು ಪ್ರತಿಭಟನೆಗೆ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ