ಖರ್ಗೆ ವಿರುದ್ಧದ ಅವಹೇಳನಕಾರಿ ಪದ ಬಳಕೆ ಪ್ರಕರಣ, ಸುಪ್ರೀಂನಿಂದ ಸೂಲಿಬೆಲೆ ಕೇಸ್‌ ರದ್ದು

Published : Jul 25, 2025, 12:47 PM IST
chakravarthy sulibele

ಸಾರಾಂಶ

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್‌ಐಆರ್ ಅನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ರಾಯಚೂರಿನಲ್ಲಿ  ನೀಡಿದ್ದ ಭಾಷಣದಲ್ಲಿ ಖರ್ಗೆಯವರನ್ನು 'ಅಯೋಗ್ಯ' ಎಂದು ಸಂಬೋಧಿಸಿದ್ದಕ್ಕೆ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿತ್ತು.

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿದ ಪ್ರಕರಣದಲ್ಲಿ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕಾರ್ಯಕ್ರಮವೊಂದರಲ್ಲಿ ಸೂಲಿಬೆಲೆ ಅವರು, ಖರ್ಗೆ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ತಮ್ಮ ಮಾತುಗಳ ನಡುವೆ ಖರ್ಗೆಯವರನ್ನು ಅಯೋಗ್ಯ ಎಂದು ಸಂಬೋಧಿದ್ದರೆಂದು ಅವರ ವಿರುದ್ಧ ರಾಯಚೂರು ಕಾಂಗ್ರೆಸ್ ಜಿಲ್ಲಾಧ್ಯಕ್ಷರ ವತಿಯಿಂದ ಜಾತಿನಿಂದನೆಯ ದೂರು ದಾಖಲಾಗಿತ್ತು. ಆ ಹಿನ್ನೆಲೆಯಲ್ಲಿ ಅವರ ವಿರುದ್ಧ ರಾಯಚೂರಿನ ಶಿರವಾರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಈ ಬಗ್ಗೆ ನ್ಯಾಯಮೂರ್ತಿಗಳಾದ ಸುಂದರೇಶ್ ಹಾಗೂ ಕೋಟಿಶ್ವರ ಸಿಂಗ್ ಅವರ ಪೀಠವು ಎಫ್ಐಆರ್ ರದ್ದುಗೊಳಿಸಿ ಆದೇಶ ನೀಡಿದ್ದು, ಸೂಲಿಬೆಲೆ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ಈ ಹಿಂದೆ ಪ್ರಕರಣ ಹಂತದಲ್ಲಿ, ಚಕ್ರವರ್ತಿ ಸೂಲಿಬೆಲೆ ಅವರು ಕಲಬುರಗಿಯ ಹೈಕೋರ್ಟ್ ಶಾಖೆಗೆ ಎಫ್ಐಆರ್ ರದ್ದುಗೊಳಿಸಲು ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಆ ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸೂಲಿಬೆಲೆ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಸೂಲಿಬೆಲೆಗೆ ಈ ಪ್ರಕರಣದಲ್ಲಿ ನಿರಾಳತೆ ಸಿಕ್ಕಿದೆ.

ರಾಯಚೂರಿನ ಶಿರವಾದಲ್ಲಿ ನಡೆದ ನಮೋ ಬ್ರಿಗೇಡ್ ಕಾರ್ಯಕ್ರಮ ಒಂದರ ಭಾಷಣದಲ್ಲಿ ಮಾತನಾಡಿದ್ದ ಚಕ್ರವರ್ತಿ ಸೂಲಿಬೆಲೆ ಅವರು ಕಲಬುರಗಿಯ ಇಎಸ್ಐ ಆಸ್ಪತ್ರೆಯ ಬಗ್ಗೆ ಪ್ರಸ್ತಾಪ ಮಾಡಿದ್ದರು. ಕಲಬುರಗಿಯಲ್ಲಿ ಇಎಸ್ಐ ಆಸ್ಪತ್ರೆ ತೆರೆದಿರುವುದನ್ನು ತಮ್ಮ ಸಾಧನೆ ಎಂದು ಖರ್ಗೆ ಬೆನ್ನುತಟ್ಟಿಕೊಳ್ಳುತ್ತಿದ್ದಾರೆ. ಜನರ ತೆರಿಗೆ ದುಡ್ಡಿನಲ್ಲಿ ಕಟ್ಟಲಾಗಿರುವ ಆಸ್ಪತ್ರೆಯನ್ನು ತಮ್ಮ ಪ್ರಚಾರಕ್ಕಾಗಿ ಬಳಸಿಕೊಳ್ಳುವಂತಹ ಅಯೋಗ್ಯ ಅವರು ಎಂದು ಹೇಳಿಕೆ ನೀಡಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ಆ ಹಿನ್ನೆಲೆಯಲ್ಲಿ ಅವರ ವಿರುದ್ಧ ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಗದೇವ ಗುತ್ತೇದಾರ್ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ಕಮೀಷನರ್ ಅವರಿಗೆ ದೂರು ನೀಡಲಾಗಿತ್ತು. ಮತ್ತು ಎಫ್‌ಐಆರ್ ದಾಖಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!
ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್