ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರು ಕಲಬುರಗಿ, ಮಂಡ್ಯದಲ್ಲಿ ಎಸ್‌ಸಿ, ಎಸ್‌ಟಿ ಹಣ ದುರುಪಯೋಗ ಬಹಿರಂಗ

By Sathish Kumar KH  |  First Published Jul 11, 2024, 8:30 PM IST

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆ ಕಲಬುರಗಿ ಹಾಗೂ ಕೃಷಿ ಸಚಿವರ ಜಿಲ್ಲೆ ಮಂಡ್ಯದಲ್ಲಿ ಎಸ್‌ಸಿ, ಎಸ್‌ಟಿ ಹಣ ದುರುಪಯೋಗ ಆಗಿರುವ ಸತ್ಯಾಂಶ ಸರ್ಕಾರದಿಂದಲೇ ಬಹಿರಂಗವಾಗಿದೆ.


ಬೆಂಗಳೂರು (ಜು.11): ರಾಜ್ಯದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನರು ವಾಸ ಮಾಡುವ ಪ್ರದೇಶಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಎಸ್‌ಸಿಎಸ್‌ಪಿ/ ಟಿಎಸ್‌ಪಿ ಹಣವನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರು ಕ್ಷೇತ್ರ ಕಲಬುರಗಿ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ತವರು ಕ್ಷೇತ್ರ ಮಂಡ್ಯದಲ್ಲಿ ದುರುಪಯೋಗ ಮಾಡಿಕೊಂಡಿರುವುದು ಸರ್ಕಾರಿ ಸುತ್ತೋಲೆಯಲ್ಲಿಯೇ ಬಹಿರಂಗವಾಗಿದೆ.

ರಾಜ್ಯದಲ್ಲಿ ಪರಿಶಿಷ್ ಜಾತಿ ಹಾಗೂ ಪಂಗಡದವರಿಗ ಮೀಸಲಾದ ಅನುದಾನವನ್ನು ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ಕೊಟ್ಟ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಬಳಕೆ ಮಾಡಿದ್ದರ ಬಗ್ಗೆ ತನಿಖೆ ನಡೆಸಲು ಸಮಾಜ ಕಲ್ಯಾಣ ಇಲಾಖೆಯ ನೋಡಲ್ ಏಜೆನ್ಸಿಯನ್ನು ನೇಮಕ ಮಾಡಲಾಗಿತ್ತು.

Tap to resize

Latest Videos

ಗೂಗಲ್‌ಗೂ ಗೊತ್ತಾಯ್ತು ಪಟ್ಟಣಗೆರೆ ಶೆಡ್ಡಿನ ಗಮ್ಮತ್ತು; ಈ ಲೊಕೇಶನ್‌ಗೆ 5 ಸ್ಟಾರ್ ರಿವ್ಯೂವ್ಸ್ ನೋಡಿ ನೆಟ್ಟಿಗರು ಸುಸ್ತು

ಇಂದು ಯೋಜನೆ, ಕಾರ್ಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಪ್ರದೇಶಾಭಿವೃದ್ಧಿ ಮಂಡಳಿ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆಯ ನೋಡಲ್ ಏಜೆನ್ಸಿಯೊಂದಿಗೆ ಸಭೆ ಮಾಡಲಾಗಿದೆ. ಈ ವೇಳೆ ನೋಡಲ್ ಏಜೆನ್ಸಿಯ ತನಿಖೆಯಲ್ಲಿ ಮಂಡ್ಯ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಎಸ್‌ಸಿಎಸ್‌ಪಿ/ ಟಿಎಸ್‌ಪಿ ಹಣ ದುರುಪಯೋಗ ಆಗಿರುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಎಸ್‌ಸಿ, ಎಸ್‌ಟಿಗೆ ಮೀಸಲಿಟ್ಟ ಹಣವನ್ನು ಅನ್ಯ ಯೋಜನೆಗಳಿಗೆ ದುರುಪಯೋಗ ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸಲು ನೋಡಲ್ ಏಜೆನ್ಸಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವ್ಯಕ್ತಿಗಳಿಗೆ ಅಥವಾ ಕುಟುಂಬಗಳಿಗೆ ಪ್ರಯೋಜನವಾಗುವ ಸರ್ಕಾರಿ ಸ್ಕೀಮ್‌ಗಳಿಗೆ ಶೇ.100 ಸ್ಕೀಂ ವೆಚ್ಚವನ್ನು ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಡಿಯಲ್ಲಿ ಭರಿಸಬಹುದಾಗಿದೆ. ಜೊತೆಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ವಾಸ ಸ್ಥಳಗಳಿಗೆ ಪ್ರಯೋಜನ ಕಲ್ಪಿಸುವ ಸ್ಕೀಂಗಳಿಗೆ ಶೇ.100 ಸ್ಕೀಂ ವೆಚ್ಚ ಹಂಚಿಕೆ ಮಾಡಿ ಬಳಸಲು ಅವಕಾಶವಿದೆ. ಇದನ್ನು ಹೊರತುಪಡಿಸಿ ಬೇರಾವುದೇ ಕಾರ್ಯಕ್ರಮಗಳಿಗೆ ಹಣವನ್ನು ಬಳಕೆ ಮಾಡುವಂತಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ವಾಲ್ಮೀಕಿ ನಿಗಮದ ಹಗರಣದಲ್ಲಿ ನಾಗೇಂದ್ರ ಅವರ ತಪ್ಪಿಲ್ಲ, ಇಡಿ ಏನ್ ಬೇಕಾದ್ರೂ ತನಿಖೆ ಮಾಡ್ಲಿ: ಡಿ.ಕೆ. ಶಿವಕುಮಾರ್

ಇನ್ನುಮುಂದೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ದುರುಪಯೋಗವಾದಲ್ಲಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು/ ಉಪ ವಿಭಾಗಾಧಿಕಾರಿಗಳು, ಮಂಡಳಿ/ ಪ್ರಾಧಿಕಾರದ ಕಾರ್ಯದರ್ಶಿಗಳನ್ನು ಜವಾಬ್ದಾರರನ್ನಾಗಿ ಮಾಡಿ ಅನುಸೂಚಿತ ಜಾತಿ ಉಪ ಹಂಚಿಕೆ ಮತ್ತು ಬುಡಕಟ್ಟಿ ಉಪ ಹಂಚಿಕೆ ಅಧಿನಿಯಮ 2013ರ ನಿಯಮಗಳ ಅನ್ವಯ ಶಿಸ್ತುಕ್ರಮ ಅಥವಾ ಕ್ರಿಮಿನಲ್ ಮೊಕದ್ದಮೆ ಕೈಗೊಳ್ಳಲು ಕ್ರಮವಹಿಸಲಾಗುವುದು ಎಂದು ತಿಳಿಸಲಾಗಿದೆ.

click me!