SC ST Reservation ಹೆಚ್ಚಳಕ್ಕೆ ಗವರ್ನರ್ ಅಂಕಿತ, ಅಹೋರಾತ್ರಿ ಧರಣಿ ಅಂತ್ಯಗೊಳಿಸಿದ ಸ್ವಾಮೀಜಿ

By Gowthami K  |  First Published Oct 24, 2022, 1:41 PM IST

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಅಹೋರಾತ್ರ ಧರಣಿ ನಡೆಸ್ತಿದ್ದ ಪ್ರಸನ್ನಾನಂದಪುರಿ ಶ್ರೀ ಅವರು ತಮ್ಮ  ಹೋರಾಟವನ್ನು ಅಂತ್ಯಗೊಳಿಸಿದ್ದಾರೆ.


ಬೆಂಗಳೂರು (ಅ.24): ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಶೇ 15 ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಸಿದ್ಧಪಡಿಸಿರುವ 'ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು ಸುಗ್ರೀವಾಜ್ಞೆ- 2022 ಕ್ಕೆ ರಾಜ್ಯದ ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟದ ಭಾನುವಾರ ಅಂಕಿತ ಹಾಕಿದ್ದಾರೆ. ಇದರ ಬೆನ್ನಲ್ಲೇ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಅಹೋರಾತ್ರ ಧರಣಿ ನಡೆಸ್ತಿದ್ದ ಪ್ರಸನ್ನಾನಂದಪುರಿ ಶ್ರೀ ಅವರು ತಮ್ಮ  ಹೋರಾಟವನ್ನು ಅಂತ್ಯಗೊಳಿಸಿದ್ದಾರೆ.  ಕಳೆದ 257 ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ   ಶ್ರೀಗಳಿಂದ ಅಹೋರಾತ್ರಿ ಧರಣಿ ನಡೆಯುತ್ತಿತ್ತು.  ಸರ್ಕಾರದಿಂದ ಸುಗ್ರೀವಾಜ್ಞೆ ಪ್ರಕಟ ಹಿನ್ನೆಲೆಯಲ್ಲಿ ಧರಣಿ ಕೈಬಿಟ್ಟಿರುವ ಪ್ರಸನ್ನಾನಂದಪುರಿ ಶ್ರೀಗಳು ಇನ್ನರೆಡು ದಿನಗಳಲ್ಲಿ ನಮ್ಮ ಬೇಡಿಕೆಗೆ ಸಹಕರಿಸಿದ ಸಿಎಂ ಬೊಮ್ಮಾಯಿ‌ ಹಾಗೂ ಅವರ ಸಂಪುಟ ಸದಸ್ಯರಿಗೆ ಹಾಗೂ ವಿಪಕ್ಷ ನಾಯಕರನ್ನು ಕರೆಸಿ  ಅಭಿನಂದನೆ ಸಲ್ಲಿಸಲಾಗುವುದು. ನಮ್ಮ ಈ ಹೋರಟಕ್ಕೆ ಪೂರ್ಣ ವಿರಾಮ ಹೇಳುವುದಾಗಿ ಪ್ರಸನ್ನಾನಂದಪುರಿ ಶ್ರೀಗಳು ಘೋಷಿಸಿದ್ದಾರೆ.

ಮೀಸಲು ಹೆಚ್ಚಳ ಸುಗ್ರೀವಾಜ್ಞೆಗೆ ಗೌರ್ನರ್‌ ಅಂಕಿತ: ಸಿಎಂ ಸಂತಸ
ಬೆಂಗಳೂರು: ಪರಿಶಿಷ್ಟಜಾತಿ ಮತ್ತು ಪಂಗಡಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಲು ಸುಗ್ರೀವಾಜ್ಞೆ ಹೊರಡಿಸುವ ಸಚಿವ ಸಂಪುಟದ ತೀರ್ಮಾನಕ್ಕೆ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಒಪ್ಪಿಗೆ ಸೂಚಿಸಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

Tap to resize

Latest Videos

ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ, ಬೆಳಗ್ಗೆಯಿಂದಲೇ ಜಾರಿ!

ಪರಿಶಿಷ್ಟಜಾತಿ ಮತ್ತು ಪಂಗಡದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಬೇಕು ಎಂಬ ನ್ಯಾ.ನಾಗಮೋಹನ ದಾಸ್‌ ಅವರ ವರದಿಯ ಶಿಫಾರಸಿಗೆ ಸಚಿವ ಸಂಪುಟದಲ್ಲಿ ಸಮ್ಮತಿ ಸೂಚಿಸಿ ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಲಾಗಿತ್ತು. ಇದೀಗ ರಾಜ್ಯಪಾಲರು ಸುಗ್ರೀವಾಜ್ಞೆಗೆ ಒಪ್ಪಿಗೆ ಸೂಚಿಸಿದ್ದಾರೆ. ಈ ಬಗ್ಗೆ ಅಧಿಕೃತವಾದ ವಿಶೇಷ ರಾಜ್ಯಪತ್ರ ಪ್ರಕಟಿಸಲಾಗಿದೆ. ಇದರಿಂದ ಇನ್ನು ಮುಂದೆ ಪರಿಶಿಷ್ಟಜಾತಿಯ ಮೀಸಲಾತಿ ಪ್ರಮಾಣ ಶೇ.15 ರಿಂದ 17ಕ್ಕೆ ಮತ್ತು ಪರಿಶಿಷ್ಟಪಂಗಡಗಳ ಮೀಸಲಾತಿ ಪ್ರಮಾಣ ಶೇ.3 ರಿಂದ 7 ಕ್ಕೆ ಹೆಚ್ಚಳವಾಗಲಿದೆ ಎಂದು ವಿವರಿಸಿದ್ದಾರೆ.

ಸಿಎಂ ಬೊಮ್ಮಾಯಿ ಒರಿಜಿನಲ್ RSS ಅಲ್ಲ; ಮುಸ್ಲಿಂ ಮೀಸಲಾತಿ ಕಡಿಮೆ ಮಾಡಲು ಸಾಧ್ಯವಿಲ್ಲ: CM Ibrahim

ಸರ್ಕಾರವು ಮೀಸಲಾತಿ ಪ್ರಮಾಣ ಹೆಚ್ಚಿಸಿ ಬದ್ಧತೆಯಿದ ನಡೆದುಕೊಂಡಿದೆ. ಪರಿಶಿಷ್ಟಜಾತಿ ಮತ್ತು ಪಂಗಡದವರಿಗೆ ದೀಪಾವಳಿ ಕೊಡುಗೆ ನೀಡಿದೆ. ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕಿರುವ ರಾಜ್ಯಪಾಲರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಸುಗ್ರೀವಾಜ್ಞೆಯನ್ನು ವಿಧಾನ ಮಂಡಲದ ಉಭಯ ಸದನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

click me!