ಕೇಂದ್ರಕ್ಕೆ ತೀವ್ರ ಮುಖಭಂಗ: ಆಕ್ಸಿಜನ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ

By Suvarna News  |  First Published May 7, 2021, 12:21 PM IST

ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶ ಸರಿ ಇದೆ ಎಂದ ಸುಪ್ರೀಂಕೋರ್ಟ್ | ಕೇಂದ್ರಕ್ಕೆ ತೀವ್ರ ಮುಖಭಂಗ


ಬೆಂಗಳೂರು(ಮೇ.07): ಕರ್ನಾಟಕಕ್ಕೆ ಆಮ್ಲಜನಕ ಕೊಡಲ್ಲ ಎಂದಿದ್ದ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಹೈಕೋರ್ಟ್ ಆದೇಶಕ್ಕೆ ತಡೆ ನೀಡಲ್ಲ ಎಂದ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶ ನೀಡಿರುವ ಬಗ್ಗೆ  ಮಧ್ಯಪ್ರವೇಶ ಮಾಡಲ್ಲ ಎಂದು ಹೇಳಿದೆ.

ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶ ತಪ್ಪಲ್ಲ. 1,200 ಮೆಟ್ರಿಕ್ ಟನ್ ಆಮ್ಲಜನಕ ನೀಡುವಂತೆ ಹೈಕೋರ್ಟ್ ಸೂಚನೆ ನೀಡಿತ್ತು. 4 ದಿನಗಳಲ್ಲಿ ರಾಜ್ಯದ ಮನವಿ ಪರಿಗಣಿಸಲು ಕೇಂದ್ರಕ್ಕೆ ನಿರ್ದೇಶನ ನೀಡಲಾಗಿದೆ. ಅಲ್ಲಿಯವರೆಗೂ ತಕ್ಷಣ ಜಾರಿ ಬರುವಂತೆ ದಿನಕ್ಕೆ 1200 ಮೆ.ಟನ್ ಆಕ್ಸಿಜನ್ ಹೆಚ್ಚಿಸಲು ಸೂಚನೆ ನೀಡಲಾಗಿದೆ.

Tap to resize

Latest Videos

undefined

ಹೆಚ್ಚು ಆಕ್ಸಿಜನ್ ನೀಡಿ; ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕದ ತಟ್ಟಿದ ಕೇಂದ್ರ!

ಆಮ್ಲಜನಕದ ಬೇಡಿಕೆ ಪರಿಷ್ಕರಿಸಲು ಕರ್ನಾಟಕ ಸರ್ಕಾರ ಮಾಡಿದ ಮನವಿಯಲ್ಲಿ ಹೈಕೋರ್ಟ್ ತೀರ್ಮಾನವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟ್ 1,200 ಮೆಟ್ರಿಕ್ ಟನ್ ಆಮ್ಲಜನಕ ನೀಡುವಂತೆ ಹೇಳಿತ್ತು.

ಕರ್ನಾಟಕದ ಜನರನ್ನು ಕಷ್ಟಕ್ಕೆ ದೂಡಲು ಸಾಧ್ಯವಿಲ್ಲ. ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶ ಸರಿ ಇದೆ ಎಂದು ಸುಪ್ರೀಂಕೋರ್ಟ್ ಹೇಳಿದ್ದು ಸುಪ್ರೀಂಕೋರ್ಟ್ ನಲ್ಲಿ ಕೇಂದ್ರ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ.

ಚಾಮರಾಜನಗರ ಸೇರಿದಂತೆ ಕರ್ನಾಟಕದ ಕೆಲ ಭಾಗಗಳಲ್ಲಿ ಆಕ್ಸಿಜನ್ ಇಲ್ಲದೆ ಸೋಂಕಿತರು ಬಲಿಯಾಗುತ್ತಿದ್ದಾರೆ. ಈ ಘಟನೆ ಬೆನ್ನಲ್ಲೇ ಹೈಕೋರ್ಟ್ ಕೇಂದ್ರಕ್ಕೆ ಹೆಚ್ಚುವರಿ ಆಕ್ಸಿಜನ್ ನೀಡುವಂತೆ ಆದೇಶಿಸಿತ್ತು. ಈ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಕದ ತಟ್ಟಿತ್ತು. ಈ ಕುರಿತ ವಿಚಾರಣೆ ನಡೆಸಿದ ಸುಪ್ರೀಂ ಹೈಕೋರ್ಟ್ ಆದೇಶ ಎತ್ತಿಹಿಡಿದಿದೆ.

ದೇಶದಲ್ಲಿ ಅತ್ಯಂತ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗುತ್ತಿರುವ ರಾಜ್ಯಗಳ ಸಾಲಿನಲ್ಲಿ ಕರ್ನಾಟಕವೂ ಇದೆ. ಸರಿ ಸುಮಾರು ಅರ್ಧ ಲಕ್ಷ ಪಾಸಿಟಿವ್ ಪ್ರಕರಣಗಳು ಕರ್ನಾಟಕದಲ್ಲಿ ದಿನಂಪ್ರತಿ ವರದಿಯಾಗುತ್ತಿದೆ.

click me!