
ಬೆಂಗಳೂರು: ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ 16 ಶಾಲಾ ವಾಹನ ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ವಿಶೇಷ ಅಭಿಯಾನದಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರು ಬೆಳಿಗ್ಗೆ 7 ರಿಂದ 9.30ರ ನಡುವೆ 3,414 ಶಾಲಾ ವಾಹನ ಚಾಲಕರನ್ನು ಪರೀಕ್ಷಿಸಲಾಗಿದ್ದು ಈ ವೇಳೆ 16 ಶಾಲಾ ವಾಹನ ಚಾಲಕರು ಮದ್ಯ ಸೇವಿಸಿರುವುದು ಪತ್ತೆಯಾಗಿದೆ.
ಕುಡುಕ ಚಾಲಕರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 279 ಮತ್ತು ಮೋಟಾರು ವಾಹನ ಕಾಯ್ದೆ185ರ (ಕುಡಿದು ವಾಹನ ಚಲಾವಣೆ) ಅಡಿಯಲ್ಲಿ ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ ಎನ್ ಅನುಚೇತ್ ತಿಳಿಸಿದ್ದಾರೆ.
ಸಂಬಂಧಪಟ್ಟ ಚಾಲಕರ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲು ಆಯಾ ಆರ್‌ಟಿಒಗಳಿಗೆ ಕಳುಹಿಸಲಾಗಿದೆ ಎಂದು ಅನುಚೇತ್ ಹೇಳಿದರು.
ತುಮಕೂರು: ಬೃಹತ್ ಬಂಡೆ ಬಿದ್ದು ಇಬ್ಬರು ಕಾರ್ಮಿಕರು ಸಾವು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ