ಕೈಮುಗಿದು ಒಳಗೆ ಬಾ ಅಥವಾ ಧೈರ್ಯವಾಗಿ ಪ್ರಶ್ನಿಸಿ ಅನ್ನೋದು ಎರಡೂ ಒಂದೇ. ಈ ಬಿಜೆಪಿಯವರು ಅಗತ್ಯ ಬಿದ್ದಂತೆ ಜಾತಿಯತೆ, ಜಾತ್ಯಾತೀತ ಬಗ್ಗೆ ಮಾತಾಡ್ತಾರೆ ಎಂದು ವಸತಿ ಶಾಲೆಗಳ ದ್ವಾರದಲ್ಲಿದ್ದ ಘೋಷಣೆ ವಾಕ್ಯ ಬದಲಾವಣೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಮರ್ಥಿಸಿಕೊಂಡರು.
ಹುಬ್ಬಳ್ಳಿ (ಫೆ.19): ಕೈಮುಗಿದು ಒಳಗೆ ಬಾ ಅಥವಾ ಧೈರ್ಯವಾಗಿ ಪ್ರಶ್ನಿಸಿ ಅನ್ನೋದು ಎರಡೂ ಒಂದೇ. ಈ ಬಿಜೆಪಿಯವರು ಅಗತ್ಯ ಬಿದ್ದಂತೆ ಜಾತಿಯತೆ, ಜಾತ್ಯಾತೀತ ಬಗ್ಗೆ ಮಾತಾಡ್ತಾರೆ ಎಂದು ವಸತಿ ಶಾಲೆಗಳ ದ್ವಾರದಲ್ಲಿದ್ದ ಘೋಷಣೆ ವಾಕ್ಯ ಬದಲಾವಣೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಮರ್ಥಿಸಿಕೊಂಡರು.
ಸಮಾಜ ಕಲ್ಯಾಣ ಇಲಾಖೆ ವಸತಿ ಶಾಲೆಗಳ ಘೋಷಣೆ ವಾಕ್ಯ ಯಾವುದೇ ಅಧಿಕೃತ ಆದೇಶವಿಲ್ಲದೆ ಬದಲಿಸಿರೋ ವಿಚಾರಕ್ಕೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿರುವ ಹಿನ್ನೆಲೆ ಈ ಬಗ್ಗೆ ಮಾಧ್ಯಮ ಪ್ರತಿನಿಧಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ವಿದ್ಯಾರ್ಥಿಗಳು ಶಾಲೆಗೆ ಬರೋದು ಜ್ಞಾನಾರ್ಜನೆಗಾಗಿ
ಜ್ಞಾನದಿಂದ ಆತ್ಮಬಲ ಹೆಚ್ಚುತ್ತೆ. ಶಾಲೆಗೆ ಕೈಮುಗಿದು ಒಳಗೆ ಹೋಗೋದು, ಪ್ರಶ್ನಿಸುವುದು ಇವೆರಡೂ ತದ್ವಿರುದ್ಧವಾದದ್ದಲ್ಲ. ಜ್ಞಾನ ದೇಗುಲಕ್ಕೆ ಜ್ಞಾನ ತೆಗೆದುಕೊಳ್ಳಲು ಬನ್ನಿ. ಆತ್ಮವಿಶ್ವಾಸ ಹೆಚ್ಚಿಸಿಕೊಂಡು ಧೈರ್ಯದಿಂದ ಜೀವನ ಸಾಗಿಸಿ. ಇದ್ರ ಬಗ್ಗೆ ನಾನು ಜಾಸ್ತಿ ಹೇಳಿದ್ರೆ ಪರ ವಿರುದ್ಧದ ಹೇಳಿಕೆಗಳು ಹೆಚ್ಚಾಗುತ್ತೆ ಎಂದರು.
ವಸತಿ ಶಾಲೆಗಳ ಘೋಷವಾಕ್ಯ ಬದಲಾವಣೆ; ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದೇನು?
ಸುಪ್ರೀಂ ಕೋರ್ಟ್ ಸೂಚಿಸಿದ ಜಾಗದಲ್ಲಿ ರಾಮಮಂದಿರ ಕಟ್ಟಿಲ್ಲ ಎಂಬ ಸಚಿವ ಸಂತೋಷ್ ಲಾಡ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಸೂಕ್ತ ಉತ್ತರ ಸಿಗಬೇಕಂದ್ರೆ ನೀವು ಸಂತೋಷ್ ಲಾಡ್ ಅವರನ್ನೇ ಕೇಳಿನಾವು ರಾಮ ರಾಜ್ಯದ ಪರಿಕಲ್ಪನೆ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದೇವೆ. ಮನುಷ್ಯ ನಿಧನವಾದ ನಂತರ ರಾಮ ನಾಮ ಜಪಿಸುತ್ತೇವೆ. ಆ ಸದ್ಗತಿ ಸಿಗಲಿ ಅನ್ನೋದೇ ರಾಮರಾಜ್ಯ ಪರಿಕಲ್ಪನೆ. ರಾಮ ರಾಜ್ಯದಲ್ಲಿ ಎಲ್ಲರೂ ಸಂತೋಷವಾಗಿರಬೇಕು ಈ ಪರಿಕಲ್ಪನೆ ತಂದವರೇ ಕಾಂಗ್ರೆಸ್ ನವರು ಎಂದರು. ಇದೇ ವೇಳೆ ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ, ಶೀಘ್ರವೇ ಅಭ್ಯರ್ಥಿಯ ಹೆಸರು ಅಂತಿಮವಾಗಲಿದೆ. ನಮ್ಮ ಎದುರಾಳಿ ಪ್ರಲ್ಹಾದ್ ಜೋಶಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಜೋಶಿ ಹಿಂದೆ ನಾಲ್ಕು ಬಾರಿ ಆಯ್ಕೆಯಾದವರು ಮತ್ತು ಕೇಂದ್ರದಲ್ಲಿ ಸಚಿವರಾದವರು ಅವರನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸೂಕ್ತ ಅಭ್ಯರ್ಥಿಯನ್ನು ಅಂತಿಮಗೊಳಿಸ್ತೇವೆ ಎಂದರು.
ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ ಸರ್ಕಾರ! ಜ್ಞಾನದೇಗುಲದಲ್ಲೇ ಹೊತ್ತಿಕೊಳ್ತು ಮತ್ತೊಂದು ಕಿಡಿ!
ರಜತ್ ನನ್ನ ಅಳಿಯ ಅನ್ನೋ ಕಾರಣಕ್ಕೆ ಅರ್ಜಿ ಹಾಕಿಲ್ಲ. ಹೈಕಮಾಂಡ್ ಎಲ್ಲವನ್ನು ಗಮನಿಸಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಎಲ್ಲರ ಅಭಿಪ್ರಾಯ ಪಡೆದುಕೊಂಡೇ ಚುನಾವಣೆಗೆ ಅಭ್ಯರ್ಥಿಯನ್ನ ಅಂತಿಮಗೊಳಿಸಲಾಗುತ್ತದೆ ಇಡೀ ರಾಜ್ಯದಲ್ಲಿ ಯುವಕರಿಗೆ ಮತ್ತು ಹಿರಿಯರಿಗೆ ಇಬ್ಬರಿಗೂ ಅವಕಾಶ ಕೊಡಲಾಗುತ್ತೆ. ನನ್ನ ಸಹೋದರ ಚನ್ನರಾಜ ಹಟ್ಟಿಹೊಳಿ ಸಹ ಟಿಕೆಟ್ ಕೇಳಿರಲಿಲ್ಲ. ಜಿಲ್ಲೆಯ ಮುಖಂಡರು ಸೂಕ್ತ ಅಭ್ಯರ್ಥಿ ಅಂದಾಗ ಅಖಾಡಕ್ಕಿಳಿದರು. ಪ್ರತಿಕೂಲ ವಾತಾವರಣದಲ್ಲಿಯೂ ಗೆದ್ದು ಬಂದರು. ಅದೇ ರೀತಿ ನನ್ನ ಮಗನೂ ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿ ಕೊಟ್ಟಿದ್ದಾನೆ. ಟಿಕೆಟ್ ಕೊಡಲೇಬೇಕು ಅಂತ ನಾನು ಎಲ್ಲಿಯೂ ಒತ್ತಾಯಿಸಿಲ್ಲ. ಹೈಕಮಾಂಡ್ ಮತ್ತು ಜಿಲ್ಲೆಯ ಮುಖಂಡರ ತೀರ್ಮಾನಕ್ಕೆ ನಾನು ಬದ್ಧಳಾಗಿರುತ್ತೇನೆ ಎಂದರು.