
ಮೈಸೂರು (ಫೆ.15): ವಕ್ಫ್ ತಿದ್ದುಪಡಿ ಮಸೂದೆಯ ವಿರೋಧಿಸಿ, ಮಸೂದೆಯ ಪ್ರತಿಯನ್ನು ಹರಿದು ಹಾಕುವ ಮೂಲಕ ಎಸ್ ಡಿಪಿಐ ಪಕ್ಷದವರು ನಗರದ ಎಫ್ ಟಿಎಸ್ ವೃತ್ತದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಶುಕ್ರವಾರ ಪ್ರತಿಭಟಿಸಿದರು.
ಈ ವೇಳೆ ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮಾತನಾಡಿ, ಲೋಕಸಭೆಯಲ್ಲಿ ಆಡಳಿತಾರೂಢ ಬಿಜೆಪಿ ಮಂಡಿಸಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ಜೆಡಿಯು, ತೆಲುಗು ದೇಶಂ ಪಕ್ಷಗಳು ಸೇರಿದಂತೆ ದೇಶದ ಎಲ್ಲಾ ಜನತೆ ತಿರಸ್ಕರಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ವಕ್ಫ್ ತಿದ್ದುಪಡಿ ಮಸೂದೆ: 'ಇದು ದೇಶಕ್ಕೆ ಒಳ್ಳೆಯದಲ್ಲ..' ಮೋದಿ ಸರ್ಕಾರಕ್ಕೆ ಜಮಾಅತೆ ಇಸ್ಲಾಮಿ ಹಿಂದ್ ಎಚ್ಚರಿಕೆ!
ದೇಶಾದ್ಯಂತ ಇರುವ ಎಲ್ಲಾ ವಕ್ಫ್ ಆಸ್ತಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದ ಆಸ್ತಿಗಳಾಗಿವೆ. ಇವು ಯಾವುದೇ ರಾಜ್ಯಗಳ ಅಥವಾ ಕೇಂದ್ರ ಸರ್ಕಾರದ ಆಸ್ತಿಯಲ್ಲ. ಬಡ ಮುಸ್ಲಿಂ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಳಿಗೆ ಇದೇ ಸಮುದಾಯದ ಮಹನೀಯರು ದಾನದ ರೂಪದಲ್ಲಿ ನೀಡಿದ ಆಸ್ತಿಯಾಗಿದೆ. ಕೇಂದ್ರದ ಬಿಜೆಪಿ ಸರ್ಕಾರ ಕೇವಲ ತನ್ನ ಮುಸ್ಲಿಂ ದ್ವೇಷದಿಂದ ವಕ್ಫ್ ತಿದ್ದುಪಡಿಗೆ ಮುಂದಾಗಿದೆ ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ