
ತುಮಕೂರು, [ಜ.21]: ತುಮಕೂರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ.
ಶ್ರೀ ಶಿವಕುಮಾರ ಸ್ವಾಮಿಗಳು ಜನರಿಗೋಸ್ಕರ ಅದರಲ್ಲೂ ವಿಶೇಷವಾಗಿ ಬಡವರು ಮತ್ತು ನಿರ್ಗತಿಕರಿಗಾಗಿ ಬದುಕಿದವರು. ಬಡತನ, ಹಸಿವು, ಸಾಮಾಜಿಕ ಅನ್ಯಾಯಗಳಂತಹ ಪಿಡುಗುಗಳನ್ನು ನಿರ್ಮೂಲನ ಮಾಡಲು ಶ್ರೀಗಳು ತಮ್ಮ ಬದುಕನ್ನು ಮುಡುಪಿಟ್ಟರು ಎಂದು ಟ್ವೀಟ್ ಸಂದೇಶದಲ್ಲಿ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ನಡೆದಾಡುವ ದೇವರ ಮಾತೇ ಮಾಣಿಕ್ಯ....
ಅಷ್ಟೇ ಅಲ್ಲದೇ ಶ್ರೀಗಳ ಅಂತಿಮ ದರ್ಶನಕ್ಕೆ ನರೇಂದ್ರ ಮೋದಿ ಅವರು ತುಮಕೂರಿಗೆ ಆಗಮಿಸುತ್ತಾರೆ ಎನ್ನಲಾಗಿತ್ತು. ಆದ್ರೆ ಶಿವಕುಮಾರ ಸ್ವಾಮಿಗಳ ಅಂತಿಮ ದರ್ಶನಕ್ಕೆ ಮೋದಿ ಅವರು ಬರುತ್ತಿಲ್ಲ.ಈ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಸಿದ್ದಗಂಗಾ ಶ್ರೀಗಳ ನಿಧನ: ಮುಸ್ಲಿಮ್ ಸಂಘಟನೆ ಸಂತಾಪ; ಭಾರತ ರತ್ನಕ್ಕೆ ಮನವಿ
ಸಿದ್ಧಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ನಾಳೆ [ಮಂಗಳವಾರ] ಶ್ರೀಗಳ ಅಂತಿಮ ದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುವುದಿಲ್ಲ. ಭದ್ರತಾ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಬರುತ್ತಿಲ್ಲ ಎಂದು ಮಾಹಿತಿ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ