ನಿಗಮ ಮಂಡಳಿ 2ನೇ ಪರೀಕ್ಷೆಗೆ ಹದ್ದಿನ ಕಣ್ಣು; ಪರೀಕ್ಷಾರ್ಥಿಗಳೇ ಏನೆಲ್ಲ ನಿಯಮ ಇರುತ್ತೆ ಇಲ್ಲಿ ನೋಡಿ!

Published : Nov 14, 2023, 05:45 AM IST
ನಿಗಮ ಮಂಡಳಿ 2ನೇ ಪರೀಕ್ಷೆಗೆ ಹದ್ದಿನ ಕಣ್ಣು;  ಪರೀಕ್ಷಾರ್ಥಿಗಳೇ ಏನೆಲ್ಲ  ನಿಯಮ ಇರುತ್ತೆ ಇಲ್ಲಿ ನೋಡಿ!

ಸಾರಾಂಶ

ಅ.28ರಂದು ನಡೆದ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಕಲಬುರಗಿ ಹಾಗೂ ಯಾದಗಿರಿ ಪರೀಕ್ಷಾ ಕೇಂದ್ರಗಳಲ್ಲಿ ಬ್ಲೂಟೂತ್‌ ಹಾಗೂ ವಿವಿಧ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ಬಳಸಿ ಅಕ್ರಮ ನಡೆಸಿದ್ದರು. ಈ ಸಂಬಂಧ ಅಂದೇ 18 ಮಂದಿಯನ್ನು ಬಂಧಿಸಲಾಗಿತ್ತು. ಈ ಅಕ್ರಮದ ರೂವಾರಿ ಆರ್.ಡಿ. ಪಾಟೀಲ್‌ ಇತ್ತೀಚೆಗೆ ಬಂಧಿತನಾಗಿದ್ದ. ಈ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ಇದರ ಬೆನ್ನಲ್ಲೇ ಕೆಇಎ ಎಚ್ಚೆತ್ತಿದೆ. 

ಬೆಂಗಳೂರು (ನ.14) :  ವಿವಿಧ ನಿಗಮ-ಮಂಡಳಿಗಳಿಗೆ ಕಳೆದ ತಿಂಗಳು 28ರಂದು ನಡೆದ ಪರೀಕ್ಷೆಗಳಲ್ಲಿ ವ್ಯಾಪಕ ಅಕ್ರಮಗಳು ನಡೆದ ಬೆನ್ನಲ್ಲೇ ಪರೀಕ್ಷೆಗಳನ್ನು ಈ ಸಲ ಕಟ್ಟುನಿಟ್ಟಿನಿಂದ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕ್ರಮ ಜರುಗಿಸಿದೆ. ನ‌.18 ಮತ್ತು 19ರಂದು ನೇರ ನೇಮಕಾತಿ ಪರೀಕ್ಷೆಗಳು ರಾಜ್ಯದಲ್ಲಿ ನಡೆಯಲಿದ್ದು, ಇದರಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಪೊಲೀಸ್‌ ಇಲಾಖೆಗೆ ಕೆಇಎ ಪತ್ರ ಬರೆದಿದೆ. ಇದೇ ವೇಳೆ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆಯನ್ನೂ ಪ್ರಕಟಿಸಿದೆ.

ಅ.28ರಂದು ನಡೆದ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಕಲಬುರಗಿ ಹಾಗೂ ಯಾದಗಿರಿ ಪರೀಕ್ಷಾ ಕೇಂದ್ರಗಳಲ್ಲಿ ಬ್ಲೂಟೂತ್‌ ಹಾಗೂ ವಿವಿಧ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ಬಳಸಿ ಅಕ್ರಮ ನಡೆಸಿದ್ದರು. ಈ ಸಂಬಂಧ ಅಂದೇ 18 ಮಂದಿಯನ್ನು ಬಂಧಿಸಲಾಗಿತ್ತು. ಈ ಅಕ್ರಮದ ರೂವಾರಿ ಆರ್.ಡಿ. ಪಾಟೀಲ್‌ ಇತ್ತೀಚೆಗೆ ಬಂಧಿತನಾಗಿದ್ದ. ಈ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ಇದರ ಬೆನ್ನಲ್ಲೇ ಕೆಇಎ ಎಚ್ಚೆತ್ತಿದೆ. 

 ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ; ಸಿಡಿದೆದ್ದ ಹಿಂದೂಪರ ಸಂಘಟನೆಗಳಿಂದ ಇಂದು ಪ್ರತಿಭಟನೆ 

ಒಂದು ಕೇಂದ್ರದಲ್ಲಿ ಪರೀಕ್ಷೆ

ಪರೀಕ್ಷೆಗಳಿಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಈಗಾಗಲೇ ಲಿಂಕ್‌ ನೀಡಲಾಗಿದೆ. ಕೆಲವು ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಿರುವ ಕಾರಣ ಒಂದಕ್ಕಿಂತ ಹೆಚ್ಚು ಪ್ರವೇಶ ಪತ್ರಗಳು ಬಿಡುಗಡೆಯಾಗಿರುತ್ತವೆ. ಇಂತಹ ಅಭ್ಯರ್ಥಿಗಳು ಮಾತ್ರ ಯಾವುದಾದರೂ ಒಂದು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಬರೆಯತಕ್ಕದ್ದು, ಪರೀಕ್ಷಾ ದಿನದಂದು ಎರಡೂ ಪ್ರವೇಶ ಪತ್ರಗಳನ್ನು ಕೊಠಡಿಯ ಮೇಲ್ವಿಚಾರಕರಿಗೆ ಸಲ್ಲಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.

ಅಕ್ರಮ ತಡೆಗೆ ಪೊಲೀಸ್ ನಿಯೋಜನೆ

ಕೆಇಎ ಕೋರಿಕೆ ಹಿನ್ನೆಲೆಯಲ್ಲಿ ಡಿಜಿ ಮತ್ತು ಐಜಿಪಿಯವರು ಸಂಬಂಧಿಸಿದ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದು ಪಾರದರ್ಶಕವಾಗಿ ಪರೀಕ್ಷಾ ನಡೆಸಲು ಅನುಕೂಲವಾಗುವಂತೆ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿದ್ದಾರೆ.

ಅಭ್ಯರ್ಥಿಗಳ ಸೂಕ್ತ ತಪಾಸಣೆಗಾಗಿ ಪ್ರತಿ ಪರೀಕ್ಷಾ ಕೇಂದ್ರದಲ್ಲೂ 25 ವಿದ್ಯಾರ್ಥಿಗಳ ಗುಂಪಿಗೆ ಒಬ್ಬರಂತೆ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು. ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಮೆಟಲ್ ಡಿಟೆಕ್ಟರ್ ಮತ್ತು ಪೊಲೀಸ್ ಇಲಾಖೆಗೆ ಸೂಕ್ತವೆನಿಸುವ ಇತರೆ ಉಪಕರಣಗಳನ್ನು ಬಳಸಿ ತಪಾಸಣೆಗೆ ಒಳಪಡಿಸಬೇಕು.

ಪರೀಕ್ಷೆ ನಡೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ಯಾವುದೇ ಕಾರು, ಮಿನಿ ಬಸ್ ವಾಹನಗಳನ್ನು ನಿಲ್ಲಿಸದಂತೆ ನಿರ್ಬಂಧ ಹಾಕಬೇಕು. ಪರೀಕ್ಷಾ ಕೇಂದ್ರದ ಸುತ್ತ ಇರುವ ಹೋಟೆಲ್, ಪೇಯಿಂಗ್ ಗೆಸ್ಟ್, ವಸತಿ ನಿಲಯಗಳು ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿರುವ ವ್ಯಕ್ತಿಗಳನ್ನು ಪರಿಶೀಲಿಸಬೇಕು ಎಂದು ತಿಳಿಸಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಕ್ರಮ ಕಂಡು ಬಂದಲ್ಲಿ ಆಯಾ ವ್ಯಾಪ್ತಿಯ ಪೊಲೀಸ್ ಕಮಿಷನರ್, ಪೊಲೀಸ್ ವರಿಷ್ಠಾಧಿಕಾರಿಯನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಡಿಜಿಪಿ ಸ್ಪಷ್ಟಪಡಿಸಿದ್ದಾರೆ.

 

ಎಸ್ಸೆಸ್ಸೆಲ್ಸಿ ಅಂಕಪಟ್ಟಿ ತಿದ್ದುಪಡಿಗೆ ಇನ್ನು ಆನ್‌ಲೈನ್‌ನಲ್ಲಷ್ಟೇ ಅರ್ಜಿ!

ಉಡುಪು ಹೇಗಿರಬೇಕು?

- ತುಂಬು ತೋಳಿನ ಅಂಗಿ, ಕುರ್ತಾ ಪೈಜಾಮ, ಜೀನ್ಸ್‌ ಪ್ಯಾಂಟ್‌ಗೆ ಅವಕಾಶವಿಲ್ಲ

- ಮಂಗಳಸೂತ್ರ, ಕಾಲುಂಗುರ ಧರಿಸಬಹುದು । ಕಿವಿಯೋಲೆ, ಕಡಗ, ಉಂಗುರಕ್ಕೆ ನಿರ್ಬಂಧ

- ಟೋಪಿ, ತಲೆ ಮುಚ್ಚುವ ವಸ್ತ್ರ ಧರಿಸುವಂತಿಲ್ಲ । ಎಲೆಕ್ಟ್ರಾನಿಕ್‌ ವಸ್ತು ಒಯ್ಯಲು ನಿಷೇಧ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 10 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!